Advertisement

Update: ರಾಜಸ್ಥಾನ ಶಿರಚ್ಛೇದ ಪ್ರಕರಣ-ಕರ್ಫ್ಯೂ ಜಾರಿ, ಆರೋಪಿಗಳ ಬಂಧನ; ಎನ್ ಐಎ ತನಿಖೆ

11:36 AM Jun 29, 2022 | Team Udayavani |

ಜೈಪುರ:ರಾಜಸ್ಥಾನದ ಉದಯಪುರದಲ್ಲಿ ಹಾಡಹಗಲೇ ಮತಾಂಧ ದುರುಳರು ಮಳಿಗೆಯೊಂದಕ್ಕೆ ನುಗ್ಗಿ ಟೈಲರ್ ಕನ್ಹಯ್ಯಲಾಲ್ (40ವರ್ಷ) ಎಂಬಾತನ ಶಿರಚ್ಛೇದ ಮಾಡಿದ್ದು, ಈ ಘಟನೆಯ ನಂತರ ರಾಜಸ್ಥಾನದಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಘಟನೆಯ ಹಿನ್ನೆಲೆಯಲ್ಲಿ ಏಳು ಕಡೆ ಕರ್ಫ್ಯೂ ಜಾರಿ ಮಾಡಲಾಗಿದೆ.

Advertisement

ಇದನ್ನೂ ಓದಿ:ಬನಹಟ್ಟಿಯಲ್ಲಿ ಅಡುಗೆ, ಉಡುಪು ಕಳ್ಳತನ: ವಿಚಿತ್ರ ವ್ಯಕ್ತಿ ಆಕಾರ ನೋಡಿ ಬೆಚ್ಚಿಬದ್ದ ಜನತೆ..!

ಉದಯಪುರ ಉದ್ವಿಗ್ನಗೊಂಡಿದ್ದು, ಕೋಮು ಸಾಮರಸ್ಯ ಹರಡುವ ಸಾಧ್ಯತೆ ಇರುವ ನಿಟ್ಟಿನಲ್ಲಿ ಏಳು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕರ್ಫ್ಯೂ ವಿಧಿಸಲಾಗಿದೆ. ಮಂಗಳವಾರ ರಾತ್ರಿ 8 ಗಂಟೆಯಿಂದ ಮುಂದಿನ ಆದೇಶದವರೆಗೂ ಕರ್ಫ್ಯೂ ಜಾರಿಯಲ್ಲಿರಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಮುಂಜಾಗ್ರತಾ ಕ್ರಮವಾಗಿ ರಾಜಸ್ಥಾನದಾದ್ಯಂತ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಉದಯಪುರದಲ್ಲಿನ ಘಟನೆಯ ಬಗ್ಗೆ ತನಿಖೆ ನಡೆಸಲು ಕೇಂದ್ರ ಗೃಹ ಸಚಿವಾಲಯ ಎನ್ ಐಎ ತಂಡವನ್ನು ಕಳುಹಿಸಿದೆ.

 

ಮೊಹಮ್ಮದ್ ಪೈಗಂಬರ್ ಕುರಿತು ವಿವಾದಿತ ಹೇಳಿಕೆ ನೀಡಿ ಬಿಜೆಪಿಯಿಂದ ಅಮಾನತುಗೊಂಡಿರುವ ನೂಪುರ್ ಶರ್ಮಾ ಬೆಂಬಲಿಸಿ ಫೇಸ್ ಬುಕ್ ಪೋಸ್ಟ್ ಹಾಕಿದ್ದ, ಟೈಲರ್ ಕನ್ಹಯ್ಯಲಾಲ್ ನನ್ನು ಇಬ್ಬರು ಮತಾಂಧ ದುರುಳರು ಮಂಗಳವಾರ ಶಿರಚ್ಛೇದನ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದು, ಈ ಘಟನೆಯ ನಂತರ ರಾಜಸ್ಥಾನದಲ್ಲಿ ತೀವ್ರ ಆಕ್ರೋಶ, ಪ್ರತಿಭಟನೆಗೆ ಎಡೆ ಮಾಡಿಕೊಟ್ಟಿದೆ.

ಮಂಗಳವಾರ (ಜೂನ್ 28) ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ರಾಜ್ ಸಮಂದ್ ಜಿಲ್ಲೆಯ ಭೀಮ್ ಪ್ರದೇಶದಲ್ಲಿ ಇಬ್ಬರು ಆರೋಪಿಗಳಾದ ಗೌಸ್ ಮೊಹಮ್ಮದ್ ಮತ್ತು ರಿಯಾಜ್ ಅಹ್ಮದ್ ನನ್ನು ಪೊಲೀಸರು ಬಂಧಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next