ಜೈಪುರ: ಟೈಲರ್ ಕನ್ಹಯ್ಯಾ ಲಾಲ್ ತೇಲಿಯ ಹಂತಕರು ಭಾರತೀಯ ಜನತಾ ಪಕ್ಷದೊಂದಿಗೆ (ಬಿಜೆಪಿ) ಸಂಪರ್ಕ ಹೊಂದಿದ್ದಾರೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.
ಕಳೆದ ವರ್ಷ ಜೂನ್ 28 ರಂದು ಉದಯಪುರದಲ್ಲಿ ಇಬ್ಬರು ವ್ಯಕ್ತಿಗಳು ಕನ್ಹಯ್ಯಾ ಲಾಲ್ ಅವರ ಅಂಗಡಿಗೆ ನುಗ್ಗಿ ಹರಿತವಾದ ಆಯುಧದಿಂದ ಹತ್ಯೆಗೈದಿದ್ದರು. ಇದು ದೇಶದಾದ್ಯಂತ ಭಾರಿ ಸಂಚಲನ ಉಂಟು ಮಾಡಿತ್ತು.
ಕನ್ಹಯ್ಯಾ ಲಾಲ್ ಹತ್ಯೆಯ ಹಿಂದಿನ ಆರೋಪಿಗಳನ್ನು ಆತನ ಹತ್ಯೆಗೆ ಕೆಲವು ದಿನಗಳ ಮೊದಲು ಪೊಲೀಸರು ಮತ್ತೊಂದು ಪ್ರಕರಣದಲ್ಲಿ ಬಂಧಿಸಿದ್ದಾರೆ ಇದರ ನಡುವೆ ಆರೋಪಿಗಳನ್ನು ಬಿಡುಗಡೆ ಮಾಡಲು ಬಿಜೆಪಿ ನಾಯಕರು ಪೊಲೀಸ್ ಠಾಣೆಗೆ ಬಂದಿದ್ದಾರೆ ಎಂದು ರಾಜಸ್ಥಾನ ಸಿಎಂ ಆರೋಪಿಸಿರುವುದಾಗಿ ಸುದ್ದಿ ಸಂಸ್ಥೆ ಎಎನ್ ಐ ವರದಿ ಮಾಡಿದೆ.
ನವೆಂಬರ್ 25 ರಂದು ರಾಜಸ್ಥಾನದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಕೋಮು ಉದ್ವಿಗ್ನತೆಯನ್ನು ಉಂಟುಮಾಡಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಕಾಂಗ್ರೆಸ್‌ಗೆ ಭಯೋತ್ಪಾದಕರ ಬಗ್ಗೆ ಸಹಾನುಭೂತಿ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಈ ಹಿಂದೆ ಹೇಳಿಕೆ ನೀಡಿದ ಬೆನ್ನಲ್ಲೇ ಗೆಹ್ಲೋಟ್ ಈ ಹೇಳಿಕೆ ನೀಡಿದ್ದಾರೆ. ಗುರುವಾರ ಉದಯಪುರ ಬಳಿ ಚುನಾವಣಾ ರ್ಯಾಲಿಯಲ್ಲಿ ಟೈಲರ್ ಕನ್ಹಯ್ಯಾ ಲಾಲ್ ಅವರ ಕ್ರೂರ ಹತ್ಯೆಯನ್ನು ಉಲ್ಲೇಖಿಸಿ ಅವರು ಈ ಹೇಳಿಕೆಯನ್ನು ನೀಡಿದ್ದರು.
ಇದನ್ನೂ ಓದಿ: Uttarkashi Tunnel Collapse: ಕಾರ್ಮಿಕರಿಗೆ ಆಮ್ಲಜನಕ ಪೂರೈಕೆ, ಮುಂದುವರೆದ ಕಾರ್ಯಾಚರಣೆ