ಸುಳ್ಯ ಶಾಸಕ ಎಸ್. ಅಂಗಾರ ಅವರು ಗುದ್ದಲಿಪೂಜೆ ನೆರವೇರಿಸಿ ಮಾತನಾಡಿ ಉದನೆ-ಶಿಬಾಜೆ ರಸ್ತೆ ಡಾಮರು ಈ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿದೆ. ಈ ಹಿಂದೆ ಸದ್ರಿ ರಸ್ತೆ ಡಾಮರಿಗೆ ಪ್ರಸ್ತಾವನೆ ಸಲ್ಲಿಸಿದ್ದರೂ ಮಂಜೂರಾತಿಯಾಗಿರಲಿಲ್ಲ. ಉದನೆ-ಶಿಬಾಜೆ ರಸ್ತೆಯ ಆರಂಭದ 1.9 ಕಿ.ಮೀ. ರಸ್ತೆ ವಿಸ್ತರಣೆ ಹಾಗೂ ಡಾಮರಿಗೆ ನಬಾರ್ಡ್‌ಗೆ ಪ್ರಸ್ತಾವನೆ ಸಲ್ಲಿಸಿದ್ದು ಇದು ಮಂಜೂರಾತಿಯ ಹಂತದಲ್ಲಿದೆ. ಈ ಹಿನ್ನೆಲೆಯಲ್ಲಿ ಅನಂತರದ 1 ಕಿ.ಮೀ. ರಸ್ತೆ ಅಭಿವೃದ್ಧಿಗೆ “ನಮ್ಮ ಗ್ರಾಮ ನಮ್ಮ ರಸ್ತೆ’ಯೋಜನೆಯಡಿ 1.07 ಕೋ.ರೂ. ಬಿಡುಗಡೆಗೊಂಡಿದ್ದು ಈ ಪೈಕಿ 300 ಮೀ. ಕಾಂಕ್ರೀಟ್ ಹಾಗೂ 700 ಮೀ. ಡಾಮರು ಕಾಮಗಾರಿ ನಡೆಯಲಿದೆ. ಈ ಕಾಮಗಾರಿಗೆ ಟೆಂಡರ್ ಆಗಿದ್ದು ಮಳೆ ಕಡಿಮೆಯಾದ ತತ್‌ಕ್ಷಣ ಕಾಮಗಾರಿ ಆರಂಭವಾಗಲಿದೆ ಎಂದರು.
Advertisement
ಮುಂದಿನ ಸಾಲಿನಲ್ಲಿ ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಡಿ ಬಾಕಿ ಉಳಿದ 2 ಕಿ.ಮೀ. ಡಾಮರಿಗೆ ಹಾಗೂ ಹಂತ ಹಂತವಾಗಿ ಉದನೆ-ಶಿಬಾಜೆ ರಸ್ತೆ ಪೂರ್ಣ ಡಾಮರಿಗೆ ಕ್ರಮ ಕೈಗೊಳ್ಳಲಾಗುವುದು. ಇದರ ಗುಣಮಟ್ಟ ಕಾಯ್ದುಕೊಳ್ಳುವಲ್ಲಿ ಗ್ರಾಮಸ್ಥರ ಜವಾಬ್ದಾರಿಯೂ ಇದೆ. ರಸ್ತೆ ವಿಸ್ತರಣೆಗೆ ಗ್ರಾಮಸ್ಥರು ಸಹಕಾರ ನೀಡುವಂತೆ ಅವರು ಮನವಿ ಮಾಡಿದರು.
ಕಳಪ್ಪಾರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಅರ್ಚಕ ಸುದರ್ಶನ್ ಅವರು ಪೂಜಾ ವಿಧಿ ವಿಧಾನ ನೆರವೇರಿಸಿದರು. ಡೊಂಬಯ್ಯ ಗೌಡ ಸ್ವಾಗತಿಸಿ, ಸನ್ನಿ ವಂದಿಸಿದರು. ರಾಜೇಶ್ ಕಾರ್ಯಕ್ರಮ ನಿರೂಪಿಸಿದರು.