Advertisement

ರಾಷ್ಟ್ರೀಯ ಶಿಕ್ಷಣ ನೀತಿ ಮರು ಪರಿಶೀಲನೆ ಅಗತ್ಯ

06:39 PM Sep 02, 2021 | Team Udayavani |

ಚಿಕ್ಕಮಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಪ್ರಾದೇಶಿಕ ಭಾಷೆಗಳ ಅಸ್ತಿತ್ವಕ್ಕೆ ಮಾರಕವಾಗಿರುವ ಹಿನ್ನೆಲೆಯಲ್ಲಿ ಪುನರ್‌ ಪರಿಶೀಲನೆ ಮಾಡಬೇಕು ಎಂದು ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್‌ ತಿಳಿಸಿದರು. ಬುಧವಾರ ನಗರದ ಮಲೆನಾಡು ವಿದ್ಯಾಸಂಸ್ಥೆಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹಾಗೂ ಜಿಲ್ಲಾ ಪ್ರೌಢಶಿಕ್ಷಣ ಸಹ ಶಿಕ್ಷಕರ ಸಂಘ ಆಯೋಜಿಸಿದ್ದ ರಾಷ್ಟ್ರೀಯ ಶಿಕ್ಷಣ ನೀತಿ ಮತ್ತು ಪ್ರಾದೇಶಿಕ ಅಸ್ಮಿತೆ ಕುರಿತ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.

Advertisement

ನಮ್ಮಮುಂದಿನ ಪೀಳಿಗೆಗೆ ನೀಡಬೇಕಾದ ಶಿಕ್ಷಣದಲ್ಲಿ ಮಹತ್ತರ ಬದಲಾವಣೆ ತರುವ ಮುಂಚೆ ಸಾರ್ವಜನಿಕ ಚರ್ಚೆಗೆ ಒಳಪಡಿಸಿ, ಸಂಸತ್‌ನಲ್ಲಿ ಸುದೀರ್ಘ‌ ಚರ್ಚೆ ನಡೆಸಿ ನಿರ್ಣಯ ತಗೆದುಕೊಳ್ಳಬೇಕು. ನಂತರ ನೂತನ ಶಿಕ್ಷಣ ನೀತಿ ಜಾರಿಗೆ ತರಬೇಕು ಎಂದರು. ಕೇಂದ್ರ ಸರ್ಕಾರ ನೂತನ ಶಿಕ್ಷಣ ನೀತಿಯ ಬಗ್ಗೆ ಚರ್ಚೆ ಮಾಡಿ ನಿರ್ಣಯ ಕೈಗೊಳ ದೆ ಸರ್ವಾಧಿಕಾರಿ ಧೋರಣೆಯಿಂದ ಏಕಾಏಕಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತಂದಿದೆ.

ನೂತನ ಶಿಕ್ಷಣ ನೀತಿಯಿಂದಾಗಿ ದೇಶದ ಎಲ್ಲಾ ಪ್ರಾದೇಶಿಕ ಭಾಷೆಗಳ ಜೊತೆಗೆ ಜನರು ಮನೆಯಲ್ಲಿ ಮಾತನಾಡುವ ಭಾಷೆಗಳೂ ಸಹ ನಾಶವಾಗುತ್ತವೆ ಎಂದು ಹೇಳಿದರು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಹಿಂಪಡೆಯಬೇಕು ಅಥವಾ ಪುನರ್‌ ಪರಿಶೀಲನೆ ಮಾಡಬೇಕು. ಇಲ್ಲದಿದ್ದಲ್ಲಿ ಕನಿಷ್ಟ ಒಂದು ವರ್ಷವಾದರೂ ನೀತಿಯ ಅನುಷ್ಠಾನವನ್ನು ಮುಂದೂಡಬೇಕು. ಆ ಒಂದು ವರ್ಷದ ಅವಧಿಯಲ್ಲಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಸಾಧಕ-ಬಾಧಕಗಳ ಬಗ್ಗೆ ದೇಶದ ಎಲ್ಲಾ ಶಾಸನ ಸಭೆಗಳಲ್ಲಿ ಮತ್ತು ಸಾರ್ವಜನಿಕ ವಲಯದಲ್ಲಿ ಚರ್ಚೆ ನಡೆಸಬೇಕು. ಆ ನಂತರ ಅನುಷ್ಠಾನಕ್ಕೆ ಕೇಂದ್ರ ಸರ್ಕಾರ ಚಿಂತನೆ ನಡೆಸಬೇಕೆಂದು ತಿಳಿಸಿದರು.

ಕಡೂರು ಕ್ಷೇತ್ರದ ಮಾಜಿ ಶಾಸಕ ವೈಎಸ್‌ವಿ ದತ್ತ ಮಾತನಾಡಿ, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಸಂವಿಧಾನ ವಿರೋಧಿ ಯಾಗಿದೆ. ಯಾವುದೇ ಮಹತ್ವದ ಬದಲಾವಣೆ ತರಬೇಕಾದರೆ ಅದಕ್ಕೊಂದು ನೀತಿ, ನಿಯಮಗಳನ್ನು ಅನುಸರಿಸಬೇಕು. ಪ್ರಾದೇಶಿಕ ಭಾಷೆ, ಪ್ರಾದೇಶಿಕ ಅಸ್ಮಿತೆ, ಸಂಸ್ಕೃತಿಯನ್ನು ಗಣನೆಗೆ ತೆಗೆದುಕೊಳ್ಳಬೇಕು. ಕೇಂದ್ರ ಸರ್ಕಾರ ಯಾವುದೇ ನೀತಿ ನಿಯಮಗಳನ್ನು ಅನುಸರಿಸದೇ ಸರ್ವಾಧಿಕಾರಿ ಧೋರಣೆಯಿಂದ ಶಿಕ್ಷಣ ನೀತಿಯನ್ನು ರಾಜ್ಯಗಳ ಮೇಲೆ ಬಲವಂತವಾಗಿ ಹೇರಿರುವುದು ಸಂವಿಧಾನದ ಉಲ್ಲಂಘನೆ ಎಂದರು.

ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ವಿಚಾರ, ವಿಮರ್ಶೆ ಮಾಡದೇ, ಚರ್ಚೆ ಇಲ್ಲದೇ ಬೆಳಗಾಗುವುದರೊಳಗೆ ಏಕಾಏಕಿ ರಾಜ್ಯದಲ್ಲಿ ಜಾರಿಗೆ ತಂದಿರುವುದು ಮೂರ್ಖತನ.ಅದುಗಲಾಮಗಿರಿಯಸಂಕೇತವಾಗಿದೆ. ದಲಿತರು, ಕಡು ಬಡವರು ಮತ್ತು ಗ್ರಾಮೀಣ ಮಕ್ಕಳನ್ನು ಪರಿಪೂರ್ಣವಾಗಿ ಶಿಕ್ಷಣದಿಂದ ವಂಚಿಸಲು ಕೇಂದ್ರ ಸರ್ಕಾರ ಮಾಡಿರುವ ಹುನ್ನಾರ ಎಂದು ವಿಷಾದ ವ್ಯಕ್ತಪಡಿಸಿದರು.

Advertisement

ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾಧ್ಯಕ್ಷ ಕುಂದೂರು ಅಶೋಕ್‌ ಪ್ರಾಸ್ತಾವಿಕವಾಗಿ ಮಾತನಾಡಿ, ಇಂದಿನ ಆಧುನಿಕತೆಯಿಂದ ಮತ್ತು ಅಸ್ಮಿತೆ ಕಣ್ಮರೆಯಾಗುತ್ತಿದೆ. ಇಂದಿನ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರಾಷ್ಟ್ರೀಯ ಶಿಕ್ಷಣ ನೀತಿಯಸಾಧಕ-ಬಾಧಕ ‌ ಗಳಬಗ್ಗೆಚರ್ಚಿಸುವನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು. ಸಂವಾದದಲ್ಲಿ ಮಾತನಾಡಿದ ಬಹುತೇಕ ಮುಖಂಡರು, ರಾಷ್ಟ್ರೀಯ ಶಿಕ್ಷಣ ನೀತಿಯ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಬಿಎಸ್‌ಪಿ ಜಿಲ್ಲಾಧ್ಯಕ್ಷ ಕೆ.ಟಿ.ರಾಧಕೃಷ್ಣ, ರೈತ ಮುಖಂಡ ಗುರುಶಾಂತಪ್ಪ, ಶರಣ ಸಾಹಿತ್ಯ ಪರಿಷತ್‌ ಅಧ್ಯಕ್ಷ ವಿಕ್ಯಾತನ ಬೀಡು, ಎಂ.ಸಿ.ಶಿವಾನಂದಸ್ವಾಮಿ, ಪ್ರೊ|ಕೆ.ಎನ್‌.ಲಕ್ಷಿ ¾àಕಾಂತ್‌, ಸಿಪಿಐ ಮುಖಂಡ ಬಿ. ಅಮ್ಜದ್‌, ಕಡೂರು ತಾಲೂಕುಕಸಾಪ ಅಧ್ಯಕ್ಷ ವೈ.ಎಸ್‌. ವಿ ಪ್ರಕಾಶ್‌, ಕನ್ನಡ ಸೇನೆ ಅಧ್ಯಕ್ಷ ಪಿ.ಸಿ.ರಾಜೇಗೌಡ, ಡಾ| ಜಿ.ಎಂ.ಗಣೇಶ್‌ ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಮಲೆನಾಡು ವಿದ್ಯಾಸಂಸ್ಥೆ ರ್ಯದರ್ಶಿ ಶಂಕರನಾರಾಯಣ ಭಟ್‌, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ಡಿ.ಎಂ.ಮಂಜುನಾಥ್‌ ಸ್ವಾಮಿ, ಉಪನ್ಯಾಸಕ ಎಚ್‌. ಕೆ.ಸುಭಾಷ್‌, ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಆರ್‌.ಪ್ರಭಾಕರ್‌ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next