Advertisement
ಕಾಸರಗೋಡು, ಮಂಜೇಶ್ವರ ತಾಲೂಕು ಮಟ್ಟದ ಸ್ಪರ್ಧೆಯು ಸೈಂಟ್ ಮೋನಿಕಾ ಇಂಗ್ಲಿಷ್ ಮೀಡಿಯಂ ಸ್ಕೂಲ್ (ಸಿ.ಬಿ.ಎಸ್.ಇ.), ಕೋ-ಆಪರೇಟಿವ್ ಆಸ್ಪತ್ರೆ ಬಳಿ, ಕುಂಬ್ಳೆಯಲ್ಲಿ ಅ. 26ರ ಅಪರಾಹ್ನ 3ರಿಂದ 5ರ ತನಕ ಜರಗಲಿದೆ.
Related Articles
Advertisement
ಕಳೆದ ಬಾರಿ ಸುಮಾರು 20 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಉಡುಪಿ, ದ.ಕ. ಜಿಲ್ಲೆಯ 16 ತಾಲೂಕುಗಳಲ್ಲಿ ಭಾಗವಹಿಸಿದ್ದು, ವಿದ್ಯಾರ್ಥಿಗಳು ನೇರವಾಗಿ ಭಾಗವಹಿಸುವ ಅತ್ಯಂತ ದೊಡ್ಡ ಸ್ಪರ್ಧಾ ಕಾರ್ಯಕ್ರಮ ಇದಾಗಿದೆ.
2ನೇ ಹಂತದ ಸ್ಪರ್ಧೆಯು ನ. 2, 3ರಂದು ದ.ಕ. ಮತ್ತು ಉಡುಪಿ ಜಿಲ್ಲೆಯ 8 ತಾಲೂಕುಗಳಲ್ಲಿ ನಡೆಯಲಿದೆ. ನ. 10ರಂದು ತಾಲೂಕು ಮಟ್ಟದಲ್ಲಿ ಪ್ರಥಮ, ದ್ವಿತೀಯ ಮತ್ತು ತೃತೀಯ ವಿಜೇತರಿಗಾಗಿ ಮೂರು ಜಿಲ್ಲಾಮಟ್ಟದ ಸ್ಪರ್ಧೆಯು ಮಂಗಳೂರಿನಲ್ಲಿ ಜರಗಲಿದೆ.
ಸ್ಪರ್ಧೆಯ ವಿಷಯ1ನೇ ತರಗತಿಯಿಂದ 3ನೇ ತರಗತಿ ಹಾಗೂ 4ರಿಂದ 7ನೇ ತರಗತಿಯ ಮಕ್ಕಳು ಐಚ್ಚಿಕ ವಿಷಯದಲ್ಲಿ ಚಿತ್ರ ಬಿಡಿಸಬಹುದು. 8ರಿಂದ 10ನೇ ತರಗತಿಯವರೆಗಿನ ಮಕ್ಕಳಿಗೆ ಸ್ಥಳದಲ್ಲಿಯೇ ವಿಷಯ ತಿಳಿಸಲಾಗುತ್ತದೆ. ನಿಯಮಾವಳಿ
ಸ್ಪರ್ಧಿಗಳು ಸ್ಥಳದಲ್ಲಿ ಹೆಸರು ನೋಂದಾಯಿಸಬೇಕು. ಡ್ರಾಯಿಂಗ್ ಶೀಟ್ ನೀಡಲಾಗುತ್ತದೆ. ಚಿತ್ರಬಿಡಿಸಲು ಬೇಕಾದ ಇತರ ಪರಿಕರಗಳನ್ನು ಸ್ಪರ್ಧಿಗಳೇ ತರಬೇಕು. ಭಾಗವಹಿಸುವ ಎಲ್ಲ ಸ್ಪರ್ಧಿಗಳಿಗೆ ಪ್ರಮಾಣಪತ್ರ ಮತ್ತು ಗಿಫ್ಟ್ ಹ್ಯಾಂಪರ್ ನೀಡಲಾಗುತ್ತದೆ. ಪ್ರತೀ ವಿಭಾಗದಲ್ಲಿ ಪ್ರಥಮ, ದ್ವಿತೀಯ, ತೃತೀಯ ಹಾಗೂ ಪ್ರೋತ್ಸಾಹಕ ಬಹುಮಾನ ನೀಡಲಾಗುತ್ತದೆ. ಫಲಿತಾಂಶ ಮತ್ತು ವಿಜೇತರ ಚಿತ್ರಗಳನ್ನು ಉದಯವಾಣಿಯಲ್ಲಿ ಪ್ರಕಟಿಸಲಾಗುತ್ತದೆ.