Advertisement

ನೇರ ರೈಲು ಮಾರ್ಗಕ್ಕೆ ಶೀಘ್ರ ಭೂಮಿಪೂಜೆ

02:25 PM Sep 09, 2021 | Team Udayavani |

ಚಿತ್ರದುರ್ಗ: ದಾವಣಗೆರೆ-ಚಿತ್ರ ದುರ್ಗ-ತುಮಕೂರು ನೇರ ರೈಲು ಮಾರ್ಗ ಕಾಮಗಾರಿ ಆರಂಭಿಸಲು ನವೆಂಬರ್‌ ತಿಂಗಳಲ್ಲಿ ಭೂಮಿಪೂಜೆ ನಡೆಸಲು ಉದ್ದೇಶಿಸಲಾಗಿದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ‌ ಎ. ನಾರಾಯಣಸ್ವಾಮಿ ತಿಳಿಸಿದರು.

Advertisement

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ‌ ನಡೆದ ನೇರ ರೈಲು ಮಾರ್ಗದ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತುಮಕೂರು-ಚಿತ್ರದುರ್ಗ-ದಾ ವಣಗೆರೆ ನೇರ ರೈಲ್ವೆ ಯೋಜನೆಗೆ ಸಂಬಂಧಿಸಿದಂತೆ ಕೆಲವು ಕಡೆ ಭೂಸ್ವಾಧೀನ ‌ ಪ್ರಕ್ರಿಯೆ ಭಾಗಶಃ ಮುಕ್ತಾಯವಾಗಿದೆ. ಇನ್ನೂಕೆಲ ಕಡೆ ಭೂಸ್ವಾಧೀನ ‌ ಪ್ರಕ್ರಿಯೆ ಮುಕ್ತಾಯದ ಹಂತದಲ್ಲಿದ್ದು, ಎರಡು ತಿಂಗಳೊಳಗ ೆ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ ರೈಲ್ವೆ ಇಲಾಖೆಗೆ ಹಸ್ತಾಂತರಿಸಿ ನೇರ ರೈಲ್ವೆ ಯೋಜನೆ ಕಾಮಗಾರಿ ಆರಂಭಿಸಬೇಕು ಎಂದರು.

ದಾವಣಗೆರೆ, ಚಿತ್ರದುರ್ಗ, ತುಮಕೂರು ನೇರ ರೈಲ್ವೆ ಯೋಜನೆಗೆ ಕೇಂದ್ರ ಸರ್ಕಾರ 1800 ಕೋಟಿ ರೂ.ಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಿ ರೈಲ್ವೆ ಇಲಾಖೆಯ ರೈಲ್ವೆ ಇಲಾಖೆಗೆ ಅಧಿಕಾರ ನೀಡಿದೆ. ರೈಟ್ಸ್‌ ಸಂಸ್ಥೆ ಕಾಮಗಾರಿ ಆರಂಭಿಸಲು ಅಧಿಕಾರಿಗಳನ್ನು ನಿಯೋಜಿಸುತ್ತಿದೆ.ಚಿತ್ರದುರ್ಗಜಿಲ್ಲೆಯಲ್ಲಿ ನೇರ ರೈಲ್ವೆ ಯೋಜನೆಗೆ ಸಂಬಂಧಪಟ್ಟ ಕಚೇರಿ ಆರಂಭಿಸಲು ಸಿದ್ಧತೆ ನಡೆಯುತ್ತಿದೆ. ರೈಲ್ವೆ ಸಚಿವ ‌ ದಿನಾಂಕ ‌ ತೆಗೆದುಕೊಂಡು ನವೆಂಬರ್‌ ತಿಂಗಳಲ್ಲಿ ಭೂಮಿಪೂಜೆ ನೆರವೇರಿಸಲಾಗುವುದು ಎಂದು ತಿಳಿಸಿದರು. ದಾವಣಗೆರೆಯಿಂದ ಚಿತ್ರದುರ್ಗದ ಗಡಿವರೆಗಗೆ 236 ಎಕರೆಯಲಿ 209 ಎಕರೆ ಭೂಸ್ವಾಧೀನವಾಗಿದೆ. 27 ಎಕರೆ ಫೈನಲ್‌ ನೋಟಿಫಿಕೇಷನ್‌ ಆಗಿದ್ದು, ಅವಾರ್ಡ್‌ ಆಗಬೇಕಿದೆ.

82 ಕೋಟಿ ರೂ. ಬಿಡುಗಡೆ ಮಾಡಿದ್ದು, ಈಗಾಗಲೇ 52 ಕೋಟಿ ರೂ. ಪಾವತಿಸಲಾಗಿದೆ.32 ಎಕರೆಯನ್ನು ಸಂಪೂರ್ಣವಾಗಿ ಹಸ್ತಾಂತರ ಮಾಡಲಾಗಿದ್ದು, ಕಾಮಗಾರಿ ಪ್ರಾರಂಭ ಮಾಡಬೇಕಿದೆ. ತುಮಕೂರಿನ ಊರುಕೇರಿಯಿಂದ ಶಿರಾ ಗಡಿಭಾಗದವರೆಗೆ 159 ಎಕರೆ ಭೂಸ್ವಾಧಿನವಾಗಲಿದೆ. 18 ಕಿಮೀ ಕಾಮಗಾರಿಗೆ ಹಸ್ತಾಂತರಕೆ ಸಿದ್ಧವಾಗಿದೆ.ಇದಕ್ಕಾಗಿ 30 ಕೋಟಿರೂ.ಅನುದಾನ ‌ ಅವಶ್ಯಕತೆ ಇದೆ.

ಶಿರಾದಿಂದ ಹಿರಿಯೂರಿನವರೆಗೆ 638 ಎಕರೆ ಭೂಸ್ವಾಧೀನ ಪ್ರಕ್ರಿಯೆ ಆಗಬೇಕಿದೆ. ಇದರಲಿ  48 ಎಕರೆ ಭೂಸ್ವಾಧೀನವಾಗಿದ್ದು, ಉಳಿದ 202 ಎಕರೆ ಸರ್ಕಾರದಲಿ  ಆವಾರ್ಡ್‌ಗೆ ಬಾಕಿ ಇದೆ. 179 ಎಕರೆ 19 (1) ಆಗಿದೆ. 126 ಎಕರೆ ಆರ್‌ ಆ್ಯಂಡ್‌ ಆರ್‌ ಸಭೆ ಆಗಿದೆ ಹಾಗೂ 91 ಎಕರೆ 11 (1) ಹಂತದಲ್ಲಿದೆ. ಒಟ್ಟು 59 ಕಿಮೀ ಇದ್ದು, ಇದಕೆ  100 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದರೆ ಇನ್ನೂ ಮೂರು ತಿಂಗಳೊಳಗೆ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ವಿವಿರಿಸಿದರು.

Advertisement

ಚಿತ್ರದುರ್ಗ ಜಿಲ್ಲೆಯಲ್ಲಿ ಶಿರಾ ಗಡಿಯಿಂದ ‌ ದಾವಣಗೆರೆವರೆಗೆ 105 ಕಿಮೀ ಭೂಸ್ವಾಧಿ àನವಾಗಬೇಕಿದೆ. ಚಿತ್ರದುರ್ಗ ಜಿಲ್ಲೆಗೆ ಸಂಬಂಧಿ ಸಿದಂತೆ ಎರಡು ಹಂತದಲ್ಲಿ ಭೂಸ್ವಾಧೀನ ಪ್ರಕ್ರಿಯೆ ನಡೆಯುತ್ತಿದ್ದು, 684 ಎಕರೆ ಬೇರೆ ಬೇರೆ ಹಂತದಲ್ಲಿ ಬಾಕಿ ಇದೆ. ಭೂಸ್ವಾಧೀನ ಆಗಬೇಕಿದೆ. ಇದಕ್ಕಾಗಿ ಸರ್ಕಾರ 57 ಕೋಟಿ ರೂ. ಬಿಡುಗಡೆ ಮಾಡಿದ್ದು, 477 ಕೋಟಿ ರೂ.ಬಿಡುಗಡೆಯಾಗಬೇಕಿದೆ ಎಂದರು.

ಜಿಲ್ಲಾಧಿಕಾರಿ ಕವಿತಾ ಎಸ್‌. ಮನ್ನಿಕೇರಿ, ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣ, ತುಮಕ ೂರು-ಚಿತ್ರದುರ್ಗ-ದಾವಣಗೆರೆ ಹೊಸ ರೈಲ್ವೆ ಮಾರ್ಗ ಯೋಜನೆಯ ಚಿತ್ರದುರ್ಗ ವಿಶೇಷ ಭೂಸ್ವಾಧೀನಾಧಿಕಾರಿ ಆರ್‌. ಚಂದ್ರಯ್ಯ, ತುಮಕೂರು ವಿಶೇಷ ಭೂಸ್ವಾಧೀನಾಧಿಕಾರಿ ಧರ್ಮಪಾಲ್‌, ದಾವಣಗೆರೆ ವಿಶೇಷ ಭೂಸ್ವಾಧೀನಾ ಕಾರಿ ರೇಷ್ಮಾ ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next