Advertisement
ಪಾದಯಾತ್ರೆ ಮುಂದಿನ ವಿಧಾ ನಸಭಾ ಚುನಾವಣೆ ದಿಕ್ಸೂಚಿಯಾ ಗಲಿದೆ ಎಂಬ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಕಾಂಗ್ರೆಸ್‌ಗೂ ಪ್ರತಿಷ್ಠೆಯಾಗಿದೆ. ಜೆಡಿಎಸ್ ಭದ್ರಕೋಟೆಯಲ್ಲಿ ತನ್ನ ಶಕ್ತಿ ಪ್ರದರ್ಶನ ಮಾಡುವುದು ಜಿಲ್ಲಾ ನಾಯಕರಿಗೂ ಅನಿವಾರ್ಯವಾಗಿದೆ.
Related Articles
Advertisement
ಪಾದಯಾತ್ರೆ ಅನುಕೂಲ: ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಒಂದೂ ಸ್ಥಾನ ಗೆಲ್ಲದೆ ಹೀನಾಯ ಸೋಲು ಅನುಭವಿಸಿರುವ ಕಾಂಗ್ರೆಸ್ ಗೆ ಪಾದಯಾತ್ರೆ ಅನುಕೂಲಕರ ವಾತಾ ವರಣ ಸೃಷ್ಟಿಸಲಿದೆ ಎಂಬ ಚರ್ಚೆ ನಡೆಯುತ್ತಿವೆ. ಈಗಾಗಲೇ ಸ್ಥಳೀಯ ಹಾಗೂ ದಕ್ಷಿಣ ಪದವೀಧರ ವಿಧಾನ ಪರಿಷತ್ ಚುನಾವಣೆಗಳಲ್ಲಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಅದೇ ಹುಮ್ಮಸ್ಸಿನಲ್ಲಿ ಮುಂದಿನ ವಿಧಾನಸಭಾ ಚುನಾವಣೆ ಗೆಲ್ಲಲು ಮುಂದಾಗಿದೆ. ಇದಕ್ಕೆ ಪಾದಯಾತ್ರೆ ಸಹಕಾರಿ ಆಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
ಆಕಾಂಕ್ಷಿತರಿಗೂ ಜವಾಬ್ದಾರಿ: ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿನ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿತರಿಗೂ ಜವಾಬ್ದಾರಿ ನೀಡಲಾಗಿದೆ. 3 ದಿನ ನಡೆಯುವ ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್‌ಗಾಂಧಿ ಜತೆಗೆ ಲಕ್ಷಾಂತರ ಮಂದಿ ಹೆಜ್ಜೆ ಹಾಕುವ ಮೂಲಕ ಬೆಂಬಲ ನೀಡಬೇಕಾಗಿದೆ. ಈ ನಿಟ್ಟಿನಲ್ಲಿ ಆಯಾ ಕ್ಷೇತ್ರಗಳಲ್ಲಿನ ಆಕಾಂಕ್ಷಿತರು, ಮುಖಂಡರು, ಕಾರ್ಯಕರ್ತರು ಗ್ರಾಮಗಳಿಗೆ ತೆರಳಿ ಪ್ರಚಾರ ಕೈಗೊಂಡು ಸಾರ್ವಜನಿಕರನ್ನು ಸೆಳೆದು ಕರೆತರುವ ಜವಾಬ್ದಾರಿ ನೀಡಲಾಗಿದೆ. ಕಳೆದ ವಾರದ ಹಿಂದೆ ನಡೆದ ಪೂರ್ವಭಾವಿ ಸಭೆಯಲ್ಲೂ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇದೇ ವಿಚಾರ ಪ್ರಸ್ತಾಪ ಮಾಡಿದ್ದರು.
ಹಿರಿಯರ ಕಡೆಗಣನೆ ಆರೋಪ : ಕಾಂಗ್ರೆಸ್‌ನಲ್ಲಿ ಮೂಲ ಕಾರ್ಯಕರ್ತರು ಹಾಗೂ ಹಿರಿಯ ಮುಖಂಡರನ್ನು ಕಡೆಗಣಿಸಲಾಗುತ್ತಿದೆ ಎಂಬ ಆರೋಪ ಆಗಿಂದಾಗ್ಗೆ ಕೇಳಿ ಬರುತ್ತಲೇ ಇದೆ. ಜಿಲ್ಲಾ ಕಾಂಗ್ರೆಸ್‌ನ ಪದಾಧಿ ಕಾರಿಗಳ ನೇಮಕ ವಿಚಾರದಲ್ಲಿ ಹಿರಿಯ ಮುಖಂಡರ ಸಲಹೆ ಪಡೆಯದೇ ಏಕಾಏಕಿ ಬೇಕಾದವರಿಗೆ ಪದಾಧಿಕಾರಿಗಳ ಹುದ್ದೆ ನೀಡಲಾಗುತ್ತಿದೆ. ಇದರಿಂದ ಪಕ್ಷದ ಹಿರಿಯ ಮುಖಂಡರು ಪಕ್ಷದ ಚಟುವಟಿಕೆಗಳಿಂದಲೇ ದೂರ ಉಳಿದಿದ್ದಾರೆ ಎಂಬ ಆರೋಪ ರಿಂಗಣಿಸುತ್ತಲೇ ಇವೆ.
ಬಣ ರಾಜಕೀಯ ಕೊನೆಯಾಗುವುದೇ? : ಜಿಲ್ಲಾ ಕಾಂಗ್ರೆಸ್‌ನಲ್ಲಿ ಬಣ ರಾಜಕೀಯ ಮೊದಲಿನಿಂದಲೂ ಇದೆ. ಬೂದಿ ಮುಚ್ಚಿದ ಕೆಂಡದಂತೆ ಇರುವ ಬಿನ್ನಾಭಿಪ್ರಾಯ ಚುನಾವಣೆ ವೇಳೆ ಸ್ಫೋಟಗೊಳ್ಳುತ್ತದೆ. ಮಾಜಿ ಸಿಎಂ ಎಸ್.ಎಂ.ಕೃಷ್ಣ ಬಿಜೆಪಿಯಲ್ಲಿದ್ದರೂ ಕಾಂಗ್ರೆಸ್‌ನಲ್ಲಿ ಅವರ ಬೆಂಬಲಿಗರಿದ್ದಾರೆ. ಅದರಂತೆ ಮಾಜಿ ಸಚಿವ ಹಾಗೂ ದಿವಂತಗ ನಟ ಅಂಬರೀಷ್ ಬಣವೂ ಸಕ್ರಿಯವಾಗಿದೆ. ಇಬ್ಬರು ನಾಯಕರ ವೈಮನಸ್ಸಿನಿಂದ ಶುರುವಾದ ಬಣ ರಾಜಕಾರಣ ಕಾಂಗ್ರೆಸ್‌ಗೆ ಹಿನ್ನೆಡೆಯಾಗು ತ್ತಲೇ ಇದೆ. ಕಾಂಗ್ರೆಸ್‌ನಲ್ಲಿನ ಬಣ ರಾಜಕೀಯ ಶಮನಗೊಳಿಸುವ ಪ್ರಯತ್ನ ಇಂದಿಗೂ ನಡೆದಿಲ್ಲ. ಆದರೆ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆಯಿಂದ ಬಣ ರಾಜಕೀಯ ಕೊನೆಯಾಗಲಿದೆಯೇ ಎಂಬುದನ್ನು ಕಾದು ನೋಡಬೇಕು.
–ಎಚ್.ಶಿವರಾಜು