ಕೆ.ವಿದ್ಯಾಕುಮಾರಿ ತಿಳಿಸಿದರು.
Advertisement
ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಈ ಸಂಬಂಧ ನಡೆದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಳೆ ನೀರು ಕೊಯ್ಲು ಸಂಬಂಧ ಸಾರ್ವಜನಿಕರಲ್ಲಿ ಹಾಗೂ ರೈತರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ. ಜಿಲ್ಲೆಯಲ್ಲಿ ದಿನೇ ದಿನೇ ಅಂತರ್ಜಲ ಮಟ್ಟ ಕುಸಿಯುತ್ತಿದ್ದು, ಇದಕ್ಕೆ ಪರ್ಯಾಯವಾಗಿ ಮಳೆ ನೀರು ಕೊಯ್ಲು ಪದ್ಧತಿ ಅನುಸರಿಸುವುದರಿಂದ ನದಿಯ ನೀರಿನ ಮಟ್ಟ ಹೆಚ್ಚುವುದರೊಂದಿಗೆ, ಕೆರೆ, ನದಿಗಳಲ್ಲಿ ನೀರು ಶೇಖರಣೆಯಾಗುತ್ತದೆ. ಎಲ್ಲ ಸರಕಾರಿ ಕಚೇರಿಗಳ ವ್ಯಾಪ್ತಿಯಲ್ಲಿ ಅಳವಡಿಸಬೇಕಾಗಿದೆ ಎಂದರು.
Related Articles
ಬೇಸಾಯದ ಭೂಮಿಯನ್ನು ಪಾಳುಬಿಡದಂತೆ ಜಾಗೃತಿ ರೂಪಿಸಬೇಕು. ಮೊದಲ ಹಂತದ ಕಾರ್ಯಾಗಾರದ ಬಳಿಕ ತಾಲೂಕು ಮಟ್ಟದಲ್ಲಿ ಜಾಗೃತಿ ಕಾರ್ಯಾಗಾರ ನಡೆಸಬೇಕು ಎಂದು ಕಿಸಾನ್ ಸಂಘದ ಪ್ರ.ಕಾರ್ಯದರ್ಶಿ ಸತ್ಯನಾರಾಯಣ ಉಡುಪ ಹೇಳಿದರು.
Advertisement
ಗ್ರಾಮೀಣ ಪ್ರದೇಶಗಳಲ್ಲಿ ಕೆಟ್ಟು ಹೋದ ಕೊಳವೆ ಬಾವಿಗೆ ಮರುಪೂರಣ ಮಾಡಲು ನರೇಗಾದಡಿ ಅವಕಾಶವಿದೆ ಎಂದು ಜಿ.ಪಂ. ಸಿಇಒ ಪ್ರತೀಕ್ ಬಾಯಲ್ ತಿಳಿಸಿದರು. ನೀರಿನ ಮಿತ ಬಳಕೆಗೆ ಸಹಕಾರಿಯಾದ ಹನಿ ನೀರಾವರಿ ಪದ್ಧತಿಗೆ ತೋಟಗಾರಿಕೆ ಇಲಾಖೆಯಲ್ಲಿ ಯೋಜನೆಗಳಿವೆ ಎಂದು ತೋಟಗಾರಿಕಾ ಇಲಾಖಾಧಿಕಾರಿಗಳು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಮಮತ ದೇವಿ ಜಿ.ಎಸ್, ನಗರಸಭೆ ಆಯುಕ್ತ ರಾಯಪ್ಪ, ಜಿಲ್ಲಾ ಮಟ್ಟದ ಅನುಷ್ಠಾನ ಅಧಿಕಾರಿಗಳು, ತಾ.ಪಂ. ಇಒಗಳು, ರೈತ ಸಂಘಟನೆಗಳ ಪ್ರಮುಖರು, ಎನ್‌ಜಿಒ ಪ್ರತಿನಿಧಿಗಳು, ಉದಯವಾಣಿ ಪ್ರತಿನಿಧಿಗಳು ಉಪಸ್ಥಿತರಿದ್ದರು. ಕೃಷಿ ಇಲಾಖೆಯ ಅಧಿಕಾರಿ ಚಂದ್ರಶೇಖರ್ ವಂದಿಸಿದರು.
ತಾಲೂಕು, ಗ್ರಾಮ ಮಟ್ಟ ದಲ್ಲಿ ಕಾರ್ಯಾಗಾರಕ್ಕೆ ಕ್ರಮ ನಗರ ಪ್ರದೇಶ ವ್ಯಾಪ್ತಿಯಲ್ಲಿ ಮನೆ ನಿರ್ಮಾಣದ ಸಂದರ್ಭದಲ್ಲಿ ಸ್ಥಳೀಯ ಸಂಸ್ಥೆಗಳು ಕಟ್ಟಡ ಪರವಾನಿಗೆ ನೀಡುವಾಗ ಕಡ್ಡಾಯವಾಗಿ ಮಳೆ ನೀರಿನ ಕೊಯ್ಲು ಅಳವಡಿಸಲು ಸೂಚನೆನೀಡಲಾಗಿದೆ. ಮಳೆ ನೀರು ಕೊಯ್ಲು ಪದ್ಧತಿಯನ್ನು ಗ್ರಾಮೀಣ, ನಗರ ಪ್ರದೇಶಗಳಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಬೇಕು. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ತಾಲೂಕು ಹಾಗೂ ಗ್ರಾಮ ಮಟ್ಟಗಳಲ್ಲಿ ಕಾರ್ಯಾಗಾರವನ್ನು ಏರ್ಪಡಿಸಲು ಕ್ರಮ ವಹಿಸಲಾಗುವುದು ಎಂದು ಡಿಸಿ ಡಾ| ವಿದ್ಯಾಕುಮಾರಿ ತಿಳಿಸಿದರು.