ಪುತ್ತೂರು : ಕಬಕ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಂಚರಿಸಲಿರುವ ಸ್ವಾತಂತ್ರ್ಯ ರಥಕ್ಕೆ ಕಬಕ ಗ್ರಾಮ ಪಂಚಾಯತ್ ವಠಾರದಲ್ಲಿ ಎಸ್ ಡಿ.ಪಿ.ಐ ಕಾರ್ಯರ್ತರು ತಡೆ ಒಡ್ಡಿದ ಘಟನೆ ಆ.15ರಂದು ನಡೆದಿದೆ.
ಗ್ರಾಮ ಪಂಚಾಯತ್ ರಥಕ್ಕೆ ಕಬಕ ಗ್ರಾಮ ಪಂಚಾಯತ್ ವಠಾರದಲ್ಲಿ ಗ್ರಾ.ಪಂ. ಅಧ್ಯಕ್ಷರು ವಿನಯ್ ಕುಮಾರ್ ಕಲ್ಲೇಗ ಚಾಲನೆ ನೀಡಿ ಜೈಕಾರ ಹಾಕುತ್ತಿದ್ದಂತೆ ಎಸ್.ಡಿ.ಪಿ.ಐ. ಕಾರ್ಯಕರ್ತರು ದಿಕ್ಕಾರ ಕೂಗಿ ಸ್ವಾತಂತ್ರ್ಯ ರಥಕ್ಕೆ ತಡೆ ಒಡ್ಡಿದರು.
ಇದನ್ನೂ ಓದಿ : ಸಿದ್ದರಾಮಯ್ಯನವರ ಭವಿಷ್ಯ ಎಂದಿಗೂ ಸತ್ಯವಾಗುವುದಿಲ್ಲ: ಗೋವಿಂದ ಕಾರಜೋಳ
ಈ ವೇಳೆ ಪರಸ್ಪರ ವಾಗ್ವಾದ ನಡೆದಿದ್ದು, ಗ್ರಾ.ಪಂ ಅಧ್ಯಕ್ಷರು ಹಾಗೂ ಪಿಡಿಒ ರವರು ಸಮಾದಾನ ಮಾಡಿದರು ಕೇಳಿಸಿಕೊಳ್ಳದ ತಂಡ, ವೀರ ಸಾವರ್ಕರ್ ಫೋಟೊ ತೆಗೆದು ಟಿಪ್ಪು ಸುಲ್ತಾನ್ ಫೋಟೊ ಅಳವಡಿಸುವಂತೆ ಪಟ್ಟು ಹಿಡಿಯಿತು.
ಈ ಬಗ್ಗೆ ಮಾಹಿತಿ ಅರಿತ ಪುತ್ತೂರು ನಗರ ಠಾಣಾ ಇನ್ಸ್ ಪೆಕ್ಟರ್ ಗೋಪಾಲ ನಾಯ್ಕ್ ರವರ ನೆತೃತ್ವದ ಪೊಲೀಸರ ತಂಡ ಆಗಮಿಸಿ ಪ್ರತಿಭಟನಾಕಾರರನ್ನು ಚದುರಿಸಿದರು ಎಂದು ವರದಿ ಹೇಳಿದೆ.
ಇದನ್ನೂ ಓದಿ : ನವಭಾರತಕ್ಕೆ ಪೂರಕವಾಗಿ ಇಂದಿನಿಂದ ನವ ಕರ್ನಾಟಕ ನಿರ್ಮಾಣ: ಸಿಎಂ ಬೊಮ್ಮಾಯಿ