Advertisement

ಪಾಕಿಸ್ಥಾನದ ವಿಜಯವನ್ನು ಸಂಭ್ರಮಿಸಿದ ರಾಜಸ್ಥಾನದ ಟೀಚರ್

05:31 PM Oct 26, 2021 | Team Udayavani |
ಬಿಜೆಪಿ, ಆರ್ ಎಸ್ ಎಸ್ ಸುಳ್ಳನ್ನು ಬಹಿರಂಗಪಡಿಸಲು ಕಾಂಗ್ರೆಸ್ ಒಗ್ಗಟ್ಟು ಮುಖ್ಯ ಭಾರತೀಯ ಜನತಾ ಪಕ್ಷ ಮತ್ತು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿರುದ್ಧ ಹೋರಾಡುವ ನಿಟ್ಟಿನಲ್ಲಿ ಪಕ್ಷದೊಳಗಿನ ಆಂತರಿಕ ಬಿಕ್ಕಟ್ಟನ್ನು ಸರಿಪಡಿಸಿಕೊಂಡು, ಶಿಸ್ತು ಮತ್ತು ಒಗ್ಗಟ್ಟಿನಿಂದ ಇರಬೇಕಾದ ಅಗತ್ಯವಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕರೆ ನೀಡಿದ್ದಾರೆ. ಭಾರತದಲ್ಲಿ 12,428 ಕೋವಿಡ್ ಪ್ರಕರಣ ಪತ್ತೆ ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 12,428 ನೂತನ ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿದ್ದು, ಇದು ಕಳೆದ 238 ದಿನಗಳ ನಂತರದ ಕನಿಷ್ಠ ಸಂಖ್ಯೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿದುಬಂದಿದೆ. ಬಂಡಿಪೋರಾದಲ್ಲಿ ಬಾಂಬ್ ಸ್ಪೋಟ: ಆರು ಮಂದಿಗೆ ಗಾಯ ಜಮ್ಮು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ನಡೆದ ಬಾಂಬ್ ಸ್ಪೋಟದಲ್ಲಿ ಆರು ಮಂದಿ ಗಾಯಗೊಂಡ ಘಟನೆ ಮಂಗಳವಾರ ನಡೆದಿದೆ. ಗಾಯಗೊಂಡ ಆರು ಜನರಲ್ಲಿ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗೆ ಶ್ರೀನಗರಕ್ಕೆ ಸ್ಥಳಾಂತರಿಸಲಾಗಿದೆ ಎಂದು ತಿಳಿದುಬಂದಿದೆ. ಪಾಕಿಸ್ಥಾನದ ವಿಜಯವನ್ನು ಸಂಭ್ರಮಿಸಿದ ರಾಜಸ್ಥಾನದ ಟೀಚರ್ T20 ವಿಶ್ವಕಪ್ ಭಾರತದ-ಪಾಕ್‌ ಹಣಾಹಳಿಯಲ್ಲಿ ಭಾರತ ಸೋಲನುಭವಿಸಿದೆ. ಈ ನಡುವೆ ಪಾಕ್ ಗೆಲುವನ್ನು ರಾಜಸ್ಥಾನದ ಶಿಕ್ಷಕಿಯೊಬ್ಬರು ಸಂಭ್ರಮಾಚರಣೆ ಮಾಡಿದ್ದು, ಅವರನ್ನು ಅಮಾನತು ಮಾಡಲಾಗಿದೆ. ಉದಯಪುರದ ನೀರ್ಜಾ ಮೋದಿ ಶಾಲೆಯ ಶಿಕ್ಷಕಿ ನಫೀಸಾ ಅಟ್ಟಾರಿ ಎಂಬವರೇ ಪಾಕಿಸ್ಥಾನದ ವಿಜಯವನ್ನು ಸಂಭ್ರಮಿಸಿದ ಶಿಕ್ಷಕಿ ಎನ್ನಲಾಗಿದ್ದು . ಅವರು ತನ್ನ ವ್ಯಾಟ್ಸಪ್ ಸ್ಟೇಟಸ್ ನಲ್ಲಿ ಪಾಕ್ ತಂಡದ ಚಿತ್ರ ಹಾಕಿ ‘ನಾವು ಗೆದ್ದೆವು’ ಎಂದು ಬರೆದುಕೊಂಡಿದ್ದರು ಎಂದು ಮೂಲಗಳು ತಿಳಿಸಿವೆ. ಕಾಂಗ್ರೆಸ್ ಭಯೋತ್ಪಾದಕರನ್ನು ಬೆಂಬಲಿಸುವ ಪಕ್ಷ   ಮಹಾತ್ಮಾ ಗಾಂಧಿ ಕಾಲದ ಕಾಂಗ್ರೆಸ್ ಹಿಂದೆ ಸರಿದು ದಶಕ ಕಳೆದಿವೆ. ಈಗಿರುವ ಕಾಂಗ್ರೆಸ್, ಆಗಿನ ಕಾಂಗ್ರೆಸ್ ಗೆ ಸಂಬಂಧವೇ ಇಲ್ಲ. ಈಗಿರುವ ಕಾಂಗ್ರೆಸ್ ತುಕಡೆ ಗ್ಯಾಂಗ್ ಗಳ ನೇತಾರರನ್ನು ನಾಯಕರನ್ನಾಗಿ ಮಾಡಿದೆ. ಭಯೋತ್ಪಾದಕ ಬೆಂಬಲಿಸುವ ಪಕ್ಷ ಕಾಂಗ್ರೆಸ್ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ವಾಗ್ದಾಳಿ ನಡೆಸಿದ್ದಾರೆ. ಉಪಚುನಾವಣೆಯಲ್ಲಿ ಮೈಮರೆತ ಸರ್ಕಾರ ರೈತರನ್ನು ಮರೆತಿದೆ: ಸಿದ್ದರಾಮಯ್ಯ ರೈತರು ಎದುರಿಸುತ್ತಿರುವ ರಸಗೊಬ್ಬರ ಅಭಾವದ ಸಮಸ್ಯೆ ಕುರಿತು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದು, ಬಿಜೆಪಿ ಸರ್ಕಾರ ಉಪಚುನಾವಣೆಯಲ್ಲಿ‌ ಮೈಮರೆತಿದ್ದು, ರೈತರ ಗೋಳನ್ನು ಕೇಳುವವರು ಇಲ್ಲದಂತಾಗಿದೆ ಎಂದಿದ್ದಾರೆ. ಸಾರಿಗೆ ಸಾಧಕನ ಬಯೋಪಿಕ್ ಸಾರಿಗೆ, ಪತ್ರಿಕೋದ್ಯಮ ಮತ್ತು ರಾಜಕೀಯ ರಂಗದಲ್ಲಿ ತನ್ನದೇ ಆದ ಸಾಧನೆಯ ಮೂಲಕ ಗುರುತಿಸಿಕೊಂಡಿರುವ ವಿಆರ್‌ಎಲ್‌ ಸಮೂಹ ಸಂಸ್ಥೆಯ ಸ್ಥಾಪಕ ವಿಜಯ ಸಂಕೇಶ್ವರ ಅವರ ಜೀವನ ಆಧರಿಸಿದ ಸಿನಿಮಾ “ವಿಜಯಾನಂದ’ ಚಿತ್ರಕ್ಕೆ ವಿಜಯ ಸಂಕೇಶ್ವರ ಅವರ ಹುಟ್ಟೂರಾದ ಹುಬ್ಬಳ್ಳಿಯಲ್ಲಿ ಅದ್ಧೂರಿಯಾಗಿ ಚಾಲನೆ ಸಿಕ್ಕಿದೆ. ಒಂದು ಸೋಲಿನಿಂದ ನಮ್ಮ ವಿಶ್ವಕಪ್ಅಭಿಯಾನ ಅಂತ್ಯವಾಗಿಲ್ಲ ಐಸಿಸಿ ಟಿ20 ವಿಶ್ವಕಪ್ ನ ತನ್ನ ಮೊದಲ ಪಂದ್ಯದಲ್ಲಿ ಭಾರತ ತಂಡ ಸಾಂಪ್ರಾದಾಯಿಕ ಎದುರಾಳಿ ಪಾಕಿಸ್ಥಾನ ವಿರುದ್ಧ ಸೋಲನುಭವಿಸಿದೆ. ಈ ಕುರಿತು  ಪ್ರತಿಕ್ರಿಯಿಸಿರುವ ಟೀಮ್‌ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ  “ಪಾಕಿಸ್ಥಾನ ತಂಡ ನಮಗಿಂತ ಅತ್ಯುತ್ತಮ ಪ್ರದರ್ಶನ ತೋರಿದೆ ಎಂಬುದನ್ನು ಒಪ್ಪಿಕೊಳ್ಳಲು ನಾಚಿಕೆಪಡಬೇಕಾದ ಅಗತ್ಯವಿಲ್ಲ. ಈ ಸೋಲಿನಿಂದ ನಮ್ಮ ವಿಶ್ವಕಪ್‌ ಅಭಿಯಾನ ಅಂತ್ಯವಾಗಿಲ್ಲ’ ಎಂದಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

More
Next