ಶಿವಮೊಗ್ಗ: ಸುದೀರ್ಘ ಅವ ಧಿಯಿಂದ ಸ್ಥಗಿತಗೊಂಡಿದ್ದ ಶಾಲಾ-ಕಾಲೇಜುಗಳು ಸರ್ಕಾರದ ಆದೇಶಾನುಸಾರ ಕೋವಿಡ್ ನಿಯಮಗಳನ್ನು ಅನುಸರಿಸಿ ಶುಭಾರಂಭಗೊಂಡಿದ್ದು, ಮಕ್ಕಳು ಹಾಗೂ ಪೋಷಕರಲ್ಲಿ ಸಂಭ್ರಮದ ವಾತಾವರಣ ಮೂಡಿದೆ ಎಂದು ಗ್ರಾಮೀಣಾಭಿವೃದ್ಧಿ ಪಂಚಾಯತ್‌ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಅವರು ಸೋಮವಾರ ನಗರದ ಬಿ. ಎಚ್. ರಸ್ತೆಯಲ್ಲಿರುವ ಪದವಿಪೂರ್ವ ಮಹಿಳಾ ಕಾಲೇಜಿಗೆ ಭೇಟಿ ನೀಡಿ, ವಿದ್ಯಾರ್ಥಿನಿಯರಿಗೆ ಹೂವು ನೀಡಿ ಸ್ವಾಗತಿಸಿ ನಂತರ ಅವರೊಂದಿಗೆ ಸಮಾಲೋಚನೆ ನಡೆಸಿದರು. ಕೊರೊನಾ ಸೋಂಕು ನಿಯಂತ್ರಣಕ್ಕೆ ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸಿ ಯಾವುದೇ ಭಯವಿಲ್ಲದೆ ಕಾಲೇಜಿಗೆ ಉತ್ಸಾಹದಲ್ಲಿ ಬನ್ನಿ ಎಂದರು.
ಬಹುದಿನಗಳಿಂದ ಆನ್ ಲೈನ್‌ನಲ್ಲಿ ಪಠ್ಯ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುತ್ತಿದ್ದ ಮಕ್ಕಳಿಗೆ ಕೆಲವೊಮ್ಮೆ ಇಂಟರ್‌ನೆಟ್ ಸಂಪರ್ಕ ಸಿಗದೆ ಅನಾನುಕೂಲವಾಗುತ್ತಿತ್ತು. ಅಲ್ಲದೇ ಅನೇಕ ಸಂದರ್ಭದಲ್ಲಿ ಮೊಬೈಲ್, ಲ್ಯಾಪ್‌ಟಾಪ್ ಇಲ್ಲದೆ ತರಗತಿಗಳಲ್ಲಿ ಭಾಗವಹಿಸುವುದು ಸಾಧ್ಯವಾಗುತ್ತಿರಲಿಲ್ಲ. ತರಗತಿಗಳ ಆರಂಭದಿಂದ ಇಂತಹ ಸಮಸ್ಯೆಗಳಿಂದ ವಿದ್ಯಾರ್ಥಿಗಳಿಗೆ ಪರಿಹಾರ ದೊರೆತಂತಾಗಿದೆ ಎಂದರು.
ಶಾಲಾ ಆರಂಭಕ್ಕೂ ಮೊದಲೇ ಪ್ರತಿ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಲಾಗಿದೆ. ಅಲ್ಲದೇ ಮೊದಲ ದಿನವೇ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳ ಹಾಜರಾತಿ ಕಂಡುಬರುತ್ತಿದೆ. ಶಾಲೆಗೆ ಬಾರದಿರುವ ವಿದ್ಯಾರ್ಥಿಗಳು ನಾಳೆಯಿಂದ ಶಾಲೆಗೆ ಆಗಮಿಸಿ, ಪಠ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಿ. ಶಾಲಾ ದಾಖಲಾತಿಗೆ ಅವಕಾಶವಿದ್ದು, ಈವರೆಗೆ ಶಾಲೆಗಳಿಗೆ ದಾಖಲಾಗದ ವಿದ್ಯಾರ್ಥಿಗಳನ್ನು ಪೋಷಕರು ಶಾಲೆಗೆ ದಾಖಲಾತಿ ಮಾಡಿಸಬೇಕು ಎಂದರು. ಕಾಲೇಜಿನ ಪ್ರತಿ ಕೊಠಡಿಗಳಿಗೆ ಅ ಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನವಿರ್ವಾಹಕ ಅ ಧಿಕಾರಿ ಎಂ.ಎಲ್. ವೈಶಾಲಿ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ನಾಗರಾಜ ಕಾಗಲ್ಕರ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎನ್.ಎಂ. ರಮೇಶ್ ಸೇರಿದಂತೆ ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂ ದಿ ಉಪಸ್ಥಿತರಿದ್ದರು.
ಆರತಿ ಬೆಳಗಿ- ಹೂವು ನೀಡಿ ಸ್ವಾಗತ: ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜಿನಲ್ಲಿ ವಿಧ್ಯಾರ್ಥಿನಿಯರಿಗೆ ಆರತಿ ಬೆಳಗಿ ಸ್ವಾಗತಿಸಲಾಯಿತಲ್ಲದೆ ಸಚಿವ ಕೆ.ಎಸ್. ಈಶ್ವರಪ್ಪ ಅವರು ಹೂವುಗಳನ್ನು ನೀಡಿ ಶಾಲೆಗೆ ಬರಮಾಡಿಕೊಂಡರು. ಇವರಿಗೆ ಜಿಪಂ ಸಿಇಒ ಎಂ.ಎಲ್. ವೈಶಾಲಿ ಸಾಥ್ ನೀಡಿದರು.
ಶಾಲಾ ಸಿಬ್ಬಂದಿ ಮಕ್ಕಳಿಗೆ ಥರ್ಮಲ್ ಸ್ಕಾನಿಂಗ್ ಮಾಡಿಸಿ, ಸ್ಯಾನಿಟೈಸರ್ ಸಿಂಪಡಿಸಿ, ಸಿಹಿ ವಿತರಿಸಿದರು. ಶಾಲೆಯ ಮಕ್ಕಳೆಲ್ಲಾ ಸಾಲಾಗಿ ನಿಂತು ಒಕ್ಕೊರಲಿನಿಂದ ಆಫ್‌ಲೈನ್ ತರಗತಿ ಆರಂಭಿಸಿದ್ದಕ್ಕೆ ಮೆಚ್ಚುಗೆ ಸೂಚಿಸಿದರು. ಸಚಿವರು ಕೆಲ ಮಕ್ಕಳ ಅಭಿಪ್ರಾಯವನ್ನೂ ಮಕ್ಕಳೆಲ್ಲಾ ತಮಗೆ ಕಾಲೇಜು ಆರಂಭವಾಗಿರೋದು ಖುಷಿ ತಂದಿದೆ ಎಂದರು. ನಂತರ ಸಚಿವ ಈಶ್ವರಪ್ಪ ತರಗತಿ ಕೊಠಡಿಗೆ ತೆರಳಿ ಮಕ್ಕಳನ್ನು ಕೋವಿಡ್ ನಿಯಮದಂತೆ ಅಂತರ ಪಾಲಿಸಿ ಕೂರಿಸುವಂತೆ ಸೂಚಿಸಿ ಪರಿಶೀಲಿಸಿದರು.