Advertisement

ಗೌರಿ –ಗಣೇಶ ಹಬ್ಬಕ್ಕೆ ಭರದ ಸಿದ್ಧತೆ

06:36 PM Sep 09, 2021 | Shreeraj Acharya |

ಶಿವಮೊಗ್ಗ: ಗೌರಿ, ಗಣೇಶ ಹಬ್ಬಕ್ಕೆ ನಗರದೆಲ್ಲೆಡೆ ಸಂಭ್ರಮದ ಸಿದ್ಧತೆ ನಡೆದಿದೆ. ಜಿಲ್ಲಾಡಳಿತದ ಮಾರ್ಗಸೂಚಿ ಅನ್ವಯದಂತೆ ಗಣೇಶನ ಆಗಮನಕ್ಕೆ ಭರ್ಜರಿ ತಯಾರಿ ಮಾಡಿಕೊಳ್ಳಲಾಗುತ್ತಿದೆ. ಕೊರೊನಾದ ಆರ್ಥಿಕ ಸಂಕಷ್ಟದ ನಡುವೆಯೂ, ಹಬ್ಬವನ್ನು ಸಂಭ್ರಮದಿಂದ ಆಚರಿಸಲು ಜನ ತಯಾರಿ ನಡೆಸಿದ್ದಾರೆ. ಗೌರಿ ಹಬ್ಬ ಹೆಣ್ಣುಮಕ್ಕಳ ಅತ್ಯಂತ ಸಂಭ್ರಮದ ಹಬ್ಬವಾಗಿದೆ.

Advertisement

ಕಳೆದ ವರ್ಷ ಗಣೇಶ ಮತ್ತು ಗೌರಿ ಹಬ್ಬಕ್ಕೆ ಹೆಚ್ಚು ಸಂಭ್ರಮವಿರಲಿಲ್ಲ. ಆದರೆ, ಈ ವರ್ಷ ಕೊರೊನಾ ಕಡಿಮೆಯಾಗಿರುವುದರಿಂದ ಸರ್ಕಾರಕೂಡ ಗಣೇಶೋತ್ಸವಕ್ಕೆ ಷರತ್ತುಬದ್ಧ ಒಪ್ಪಿಗೆ ನೀಡಿರುವುದರಿಂದ ಹಬ್ಬಕ್ಕೆ ಮೆರಗು ಬಂದಿದೆ. ಹಬ್ಬದ ಹಿನ್ನೆಲೆಯಲ್ಲಿ ಮಾರುಕಟ್ಟೆಯಲ್ಲಿ ಜನಸಂದಣಿ ಎಂದಿನಿಗಿಂತ ಹೆಚ್ಚಾಗಿತ್ತು. ಕೊರೊನಾ ಆತಂಕ ಇದ್ದರೂ ಜನ ಹಬ್ಬಕ್ಕೆ ಬೇಕಾದ ಸಾಮಾಗ್ರಿಯನ್ನುಕೊಂಡುಕೊಳ್ಳಲು ಮಾರುಕಟ್ಟೆಯತ್ತ ಮುಖ ಮಾಡಿದ್ದರು.

ಇದನ್ನೂ ಓದಿ : ಕೋವಿಡ್: ರಾಜ್ಯದಲ್ಲಿಂದು 1076 ಪಾಸಿಟಿವ್ ಪ್ರಕರಣ|1136 ಸೋಂಕಿತರು ಗುಣಮುಖ

ಶಿವಮೊಗ್ಗ ನಗರದ ಪ್ರಮುಖ ವ್ಯಾಪಾರ ಸ್ಥಳಗಳಾದ ಗಾಂ ಬಜಾರ್‌, ನೆಹರು ರಸ್ತೆ, ದುರ್ಗಿಗುಡಿ, ಸವಳಂಗ ರಸ್ತೆ, ಬಿ.ಹೆಚ್‌. ರಸ್ತೆಯಲ್ಲಿ ಜನಸಂಚಾರ ಅಧಿ ಕವಾಗಿತ್ತು. ಹೂ, ಹಣ್ಣು ಮತ್ತು ಪೂಜಾ ಸಾಮಾಗ್ರಿಗಳನ್ನು ಕೊಳ್ಳುವ ದೃಶ್ಯ ಸಾಮಾನ್ಯವಾಗಿತ್ತು. ದಿನಸಿ ಅಂಗಡಿ, ಬಟ್ಟೆ ಅಂಗಡಿಗಳಲ್ಲಿ ಭರ್ಜರಿ ವ್ಯಾಪಾರ ಕಂಡುಬಂದಿತು. ಸರ್ಕಾರದ ಆದೇಶದಂತೆ 4 ಮತ್ತು 2 ಅಡಿ ಒಳಗಿನ ಗಣೇಶ ವಿಗ್ರಹಕ್ಕೆ ಕೋರಿಕೆ ಸಲ್ಲಿಸುತ್ತಿದ್ದದು ಕಂಡುಬಂದಿತು.

ಗಣೇಶನ ಹಬ್ಬ ಬಂತೆಂದರೆ ಎಲ್ಲಿಲ್ಲದ ಸಂಭ್ರಮ ಕಂಡುಬರುತ್ತಿತ್ತು. ಪ್ರತಿ ಬಡಾವಣೆಗಳಲ್ಲೂ ಗಣಪತಿ ಕೂರಿಸಲು ತಯಾರಿ ನಡೆಯುತಿತ್ತು. ಆದರೆ ಕೊರೊನಾ ಮಹಾಮಾರಿ ಎಲ್ಲಾ ಸಡಗರ ಸಂಭ್ರಮಗಳಿಗೂ ತಡೆಯೊಡ್ಡಿದೆ. ಸರ್ಕಾರ ಕೂಡ ಹಬ್ಬ ಆಚರಣೆಗೆ ಮಾರ್ಗಸೂಚಿ ವಿಧಿಸಿದೆ. ಹೀಗಾಗಿ ಎಲ್ಲ ಅಡೆತಡೆಗಳ ನಡುವೆಯೇ ಗೌರಿ-ಗಣೇಶ ಹಬ್ಬ ಆಚರಿಸಲು ಜನತೆ ಸಿದ್ದತೆ ನಡೆಸಿದ್ದಾರೆ. ಮನೆಗಳಲ್ಲೂ ಕೂಡ ಗಣೇಶ ಮತ್ತು ಗೌರಿ ಸ್ವಾಗತಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮಂಟಪ ನಿರ್ಮಿಸಲಾಗಿದೆ. ಜೊತೆಗೆ ಚಕ್ಕಲಿ, ಕೋಡುಬಳೆ, ಕಡುಬು, ಉಂಡೆಗಳು, ಸಿಹಿ ತಿನಿಸುಗಳ ತಯಾರಿ ಕೂಡ ಭರ್ಜರಿಯಾಗಿಯೇ ನಡೆದಿದೆ.

Advertisement

ಈ ಬಾರಿ ಹಬ್ಬದ ಹಿನ್ನೆಲೆಯಲ್ಲಿ ತರಕಾರಿ, ಹಣ್ಣು, ಹೂಗಳ ಬೆಲೆಯಲ್ಲಿ ಅಂತಹ ವ್ಯತ್ಯಾಸವೇನೂ ಇರಲಿಲ್ಲ. ಹಬ್ಬದ ಹಿನ್ನೆಲೆಯಲ್ಲಿ ದೂರದ ಊರುಗಳಲ್ಲಿ ನೆಲೆಸಿರುವ ಸ್ಥಳೀಯರು ಊರಿಗೆ ಆಗಮಿಸುತ್ತಿದ್ದಾರೆ. ಹೀಗಾಗಿ ರೈಲು, ಬಸ್‌ ಹಾಗೂ ಖಾಸಗಿ ಬಸ್‌ ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗಿದೆ. ಹಬ್ಬದ ಹಿನ್ನೆಲೆಯಲ್ಲಿ ಪೊಲೀಸ್‌ ಇಲಾಖೆ ಆಯಕಟ್ಟಿನ ಸ್ಥಳಗಳಲ್ಲಿ ಪೊಲೀಸ್‌ ಭದ್ರತೆ ಒದಗಿಸಿದೆ. ಒಟ್ಟಾರೆ ಈ ಬಾರಿ ಹಬ್ಬಕ್ಕೆ ಸಂಭ್ರಮದ ಸಿದ್ಧತೆ ನಡೆದಿದೆ.

ಇದನ್ನೂ ಓದಿ  : ಕಳೆದ ವಾರದಲ್ಲಿ ದೇಶದಲ್ಲಿ ಪತ್ತೆಯಾದ ಕೋವಿಡ್ ಪ್ರಕರಣಗಳಲ್ಲಿ ಶೇ.68ರಷ್ಟು ಕೇರಳದ ಕೊಡುಗೆ.!

Advertisement

Udayavani is now on Telegram. Click here to join our channel and stay updated with the latest news.

Next