ಮಣಿಪಾಲ: ಪತ್ರಿಕೆ ಮತ್ತು ಮುದ್ರಣ ಕ್ಷೇತ್ರದಲ್ಲಿ ಸಾಧನೆಗೈದ ಮಹನೀಯರನ್ನು ಸ್ಮರಿಸಿಕೊಂಡಿರುವ ಉದಯವಾಣಿಗೆ ಹೃತ್ಪೂರ್ವಕ ಅಭಿನಂದನೆಗಳು. ಇಂತಹ ಕಾರ್ಯಕ್ರಮ ಮಾಡುವ ಮೂಲಕವೇ ಉದಯವಾಣಿ ಜನಮನ ಗೆದ್ದಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಹೇಳಿದರು.
ಅವರು ಸೋಮವಾರ (ನ.07) ಉದಯವಾಣಿ ಸುವರ್ಣೋತ್ತರ ಸಂಭ್ರಮದ ಅಂಗವಾಗಿ ಉದಯವಾಣಿ ಮತ್ತು ಎಂಜಿಎಂ ಕಾಲೇಜು ಸಹಯೋಗದಲ್ಲಿ ಮಣಿಪಾಲದಲ್ಲಿ ಬೆಳೆದ ಪತ್ರಿಕಾರಂಗದ ಧೀಮಂತ ಸಾಧಕರ ಸಂಸ್ಮರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಸ್ವಾತಂತ್ರ್ಯ ಪೂರ್ವ ಮತ್ತು ನಂತರದಲ್ಲಿ ಇಡೀ ವಿಶ್ವವೇ ಗಮನ ಸೆಳೆಯುವ ಕಾರ್ಯ ಮಾಡಿದೆ ಎಂದು ಮತ್ತೊಬ್ಬ ಮುಖ್ಯ ಅತಿಥಿ ಉಡುಪಿ ಜಿಲ್ಲಾ ಪಂಚಾಯತಿ ಸಿಇಒ ಪ್ರಸನ್ನ ಎಚ್ ಅಭಿಪ್ರಾಯ ವ್ಯಕ್ತಪಡಿಸಿದರು.
ಇದನ್ನೂ ಓದಿ:35 ವರ್ಷದ ಬಳಿಕ ಮಣಿರತ್ನಂ – ಕಮಲ್ ಹಾಸನ್ ಸಿನಿಮಾ: ಮುಂದಿನ ವರ್ಷವೇ ಸಿನಿಮಾ ತೆರೆಗೆ
ನಾಡೋಜ ಪ್ರೊ.ಕೆ.ಪಿ.ರಾವ್ ಅವರು ಸಂಸ್ಮರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಮಣಿಪಾಲ ಮೀಡಿಯಾ ನೆಟ್ ವರ್ಕ್ ನ ಸಿಇಒ, ಎಂಡಿ ವಿನೋದ್ ಕುಮಾರ್, ಉದಯವಾಣಿ ಮಣಿಪಾಲ ಆವೃತ್ತಿಯ ಸಂಪಾದಕ ಅರವಿಂದ ನಾವಡ, ಎಂಜಿಎಂ ಪ್ರಾಂಶುಪಾಲ ಲಕ್ಷ್ಮೀನಾರಾಯಣ ಕಾರಂತ್ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.
ಉದಯವಾಣಿ ಹಿರಿಯ ಪತ್ರಕರ್ತ ಮಟಪಾಡಿ ಕುಮಾರಸ್ವಾಮಿ ಸ್ವಾಗತಿಸಿದರು. ಎಂಎಂಎನ್ ಎಲ್ ನ ಸಿಇಒ, ಎಂಡಿ ವಿನೋದ್ ಕುಮಾರ್ ಅತಿಥಿಗಳನ್ನು ಗೌರವಿಸಿದರು. ಎಂಜಿಎಂ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಮಂಜುನಾಥ ಕಾಮತ್ ವಂದಿಸಿದರು. ಉಪನ್ಯಾಸಕ ಸುಚಿತ್ ಕೋಟ್ಯಾನ್ ನಿರೂಪಿಸಿದರು.