Advertisement

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಂಡಕ್ಕೆ ಉರುಳಿ ಬಿದ್ದ ಲಾರಿ: ಚಾಲಕ ಅಪಾಯದಿಂದ ಪಾರು!

03:52 PM Jun 19, 2021 | Team Udayavani |

ವಿಟ್ಲ : ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸರ್ ಯಂತ್ರ ಸಾಗಾಟ ಮಾಡುತ್ತಿದ್ದ ಲಾರಿಯೊಂದು ರಸ್ತೆ ಬದಿಯ ಹೊಂಡಕ್ಕೆ ಉರುಳಿ ಬಿದ್ದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪ ನಡೆದಿದೆ.

Advertisement

ಇದನ್ನೂ ಓದಿ : ಆರನೇ ಮದುವೆಗೆ ಮುಂದಾಗಿದ್ದ ಸ್ವಯಂ ಘೋಷಿತ ಬಾಬಾ ಅನೂಜ್ ಚೇತನ್ ಕತೇರಿಯ ಅಂದರ್..!

ಉಪ್ಪಿನಂಗಡಿ ಕಡೆಯಿಂದ ಮಂಗಳೂರಿನ ಬೈಕಂಪಾಡಿಗೆ ಸಿಮೆಂಟ್ ಮಿಕ್ಸರ್ ಯಂತ್ರವನ್ನು ಸಾಗಾಟ ಮಾಡುತ್ತಿದ್ದ ಲಾರಿ ಮಾಣಿ ಸಮೀಪ ಚಾಲಕನ ನಿಯಂತ್ರಣ ಕಳೆದು ರಸ್ತೆ ಬದಿಯ ಹೊಂಡಕ್ಕೆ ಉರುಳಿ ಬಿದ್ದಿದೆ. ಮುಂಭಾಗದಿಂದ ತೆರಳುತ್ತಿದ್ದ ಕಾರಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸುವ ಭರದಲ್ಲಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.

ಘಟನೆಯಲ್ಲಿ ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಲಾರಿ ಹಾಗೂ ಯಂತ್ರಗಳಿಗೆ ಭಾರೀ ಹಾನಿಯಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿರುವುದಾಗಿ ಸುದ್ದಿ ಮೂಲ ತಿಳಿಸಿದೆ.

ಇದನ್ನೂ ಓದಿ : ತನ್ನ ಕಿರಿಯ ಉದ್ಯೋಗಿಗಳಿಗೆ ಒಂದೇ ವರ್ಷದಲ್ಲಿ ಎರಡು ಬಾರಿ ವೇತನ ಹೆಚ್ಚು ಮಾಡಿದ ವಿಪ್ರೊ..!

Advertisement
Advertisement

Udayavani is now on Telegram. Click here to join our channel and stay updated with the latest news.

Next