Advertisement

ಮಹಾರಾಷ್ಟ್ರದಲ್ಲಿ ಮಹಾ ವಿಕಾಸ ಅಘಾಡಿ ಸರ್ಕಾರ ಪತನ : ಸಿಎಂ ಸ್ಥಾನಕ್ಕೆ ಉದ್ಧವ್ ರಾಜೀನಾಮೆ

09:58 PM Jun 29, 2022 | Team Udayavani |

ಮುಂಬಯಿ : ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರೆದಿದ್ದು ವಿಶ್ವಾಸ ಮತಯಾಚನೆಗೆ ಸುಪ್ರೀಂ ಕೋರ್ಟ್ ಆದೇಶ ನೀಡಿದ ಬೆನ್ನಲ್ಲೇ ಮುಖ್ಯಮಂತ್ರಿ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

Advertisement

ಗುರುವಾರ ನಡೆಯಬೇಕಿದ್ದ ವಿಶ್ವಾಸ ಮತ ಯಾಚನೆಗೆ ತಡೆ ನೀಡಲು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದ ಬೆನ್ನಲ್ಲೇ ಬುಧವಾರ ರಾತ್ರಿ 9 ಗಂಟೆ ಸುಮಾರಿಗೆ ಸುದ್ದಿಗೋಷ್ಠಿ ನಡೆಸಿದ ಉದ್ಧವ್ ಠಾಕ್ರೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ.

ಉದ್ಧವ್ ಠಾಕ್ರೆ ಸಲ್ಲಿಸಿದ ರಾಜೀನಾಮೆ ಪತ್ರಕ್ಕೆ ರಾಜ್ಯಪಾಲರಿಂದ ಅಂಗೀಕಾರ ದೊರೆತಿದೆ. ಶರದ್ ಪವಾರ್, ಸೋನಿಯಾ ಗಾಂಧಿ ಸೇರಿ ಹಲವರಿಗೆ ಧನ್ಯವಾದವನ್ನು ತಿಳಿಸಿದ ಉದ್ಧವ್ ಠಾಕ್ರೆ.

Advertisement

Udayavani is now on Telegram. Click here to join our channel and stay updated with the latest news.

Next