ಮುಂಬೈ: ಏಕನಾಥ್ ಶಿಂಧೆ ಪಾಳಯಕ್ಕೆ ಶಿವಸೇನೆ ಹೆಸರು ಮತ್ತು ಚಿಹ್ನೆಯನ್ನು ಹಂಚಿಕೆ ಮಾಡಿರುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಉದ್ಧವ್ ಠಾಕ್ರೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಚುನಾವಣಾ ಸಮಿತಿಯು ಶುಕ್ರವಾರ ಪಕ್ಷದ ಹೆಸರು ಮತ್ತು ಬಿಲ್ಲು-ಬಾಣದ ಚಿಹ್ನೆಯ ಮೇಲಿನ ಹಕ್ಕನ್ನು ಏಕನಾಥ್ ಶಿಂಧೆ ಬಣಕ್ಕೆ ನೀಡಿದೆ. ಇದು ಉದ್ಧವ್ ಠಾಕ್ರೆ ಅವರಿಗೆ ದೊಡ್ಡ ಹಿನ್ನಡೆಯಾಗಿದೆ.
ಜೂನ್ 2022 ರಲ್ಲಿ ಏಕನಾಥ್ ಶಿಂಧೆ ಬಂಡಾಯವೆದ್ದಾಗ ಪಕ್ಷದಲ್ಲಿ ಎರಡು ಬಣಗಳು ಹೊರಹೊಮ್ಮಿದ್ದವು. ಪಕ್ಷವು ಉದ್ಧವ್ ಠಾಕ್ರೆ ಮತ್ತು ಏಕನಾಥ ಶಿಂಧೆ ಅವರ ಬೆಂಬಲಿಗರ ನಡುವೆ ವಿಭಜನೆಯಾಯಿತು. ಶಿಂಧೆಯವರ ಬಂಡಾಯ ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್ ಅಘಾಡಿ ಸರಕಾರ ಪತನಕ್ಕೆ ಕಾರಣವಾಗಿ ಉದ್ಧವ್ ಠಾಕ್ರೆ ಅವರನ್ನು ಸಿಎಂ ಸ್ಥಾನದಿಂದ ಪದಚ್ಯುತಗೊಳಿಸಿತು. ನಂತರ ಶಿಂಧೆ ಅವರು ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಅವರ ಉಪನಾಯಕರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಇದನ್ನೂ ಓದಿ:ಆಳಂದ ಲಾಡ್ಲೆ ಮಶಾಕ್ ದರ್ಗಾದಲ್ಲಿ ಶಿವ ಪೂಜೆಗೆ ಅವಕಾಶ: ಬಿಗಿ ಪೊಲೀಸ್ ಬಂದೋಬಸ್ತ್
2019 ರ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಗೆದ್ದ 55 ಶಿವಸೇನೆ ಅಭ್ಯರ್ಥಿಗಳ ಪರವಾಗಿ ಉದ್ಧವ್ ಠಾಕ್ರೆ ಬಣದ ಶಾಸಕರು ಶೇಕಡಾ 23.5 ರಷ್ಟು ಮಾತ್ರ ಮತಗಳನ್ನು ಪಡೆದಿದ್ದರಿಂದ ಏಕನಾಥ್ ಶಿಂಧೆ ಅವರಿಗೆ ಶಿವಸೇನೆ ಹೆಸರು ಮತ್ತು ‘ಬಿಲ್ಲು ಮತ್ತು ಬಾಣ’ ಪಕ್ಷದ ಚಿಹ್ನೆಯನ್ನು 2019 ರ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಗೆದ್ದ 55 ಶಿವಸೇನೆ ಅಭ್ಯರ್ಥಿಗಳ ಪರವಾಗಿ ಉದ್ಧವ್ ಠಾಕ್ರೆ ಬಣದ ಶಾಸಕರು ಶೇಕಡಾ 23.5 ರಷ್ಟು ಮಾತ್ರ ಮತಗಳನ್ನು ಪಡೆದಿದ್ದರಿಂದ ಏಕನಾಥ್ ಶಿಂಧೆ ಅವರಿಗೆ ಶಿವಸೇನೆ ಹೆಸರು ಮತ್ತು ‘ಬಿಲ್ಲು ಮತ್ತು ಬಾಣ’ ಪಕ್ಷದ ಚಿಹ್ನೆಯನ್ನು ನೀಡಲು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.