Advertisement

ಮಾರ್ಚ್ 7ರಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅಯೋಧ್ಯೆಗೆ ಭೇಟಿ, ಪೂಜೆ ಸಲ್ಲಿಕೆ

10:11 AM Feb 23, 2020 | Nagendra Trasi |

ಮುಂಬೈ: ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್ ಅಘಾಡಿ(ಎಂವಿಎ) ಮೈತ್ರಿಕೂಟ ಸರ್ಕಾರ ನೂರು ದಿನಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮಾರ್ಚ್ 7ರಂದು ಅಯೋಧ್ಯೆಗೆ ಭೇಟಿ ನೀಡಿ ಭಗವಾನ್ ಶ್ರೀರಾಮನಿಗೆ ಪ್ರಾರ್ಥನೆ, ಪೂಜೆ ಸಲ್ಲಿಸಲಿದ್ದಾರೆ ಎಂದು ವರದಿ ತಿಳಿಸಿದೆ.

Advertisement

ಶಿವಸೇನಾ ಮುಖಂಡ ಸಂಜಯ್ ರಾವತ್ ಈ ಕುರಿತು ಶನಿವಾರ ಟ್ವೀಟ್ ಮಾಡಿದ್ದು, ಉದ್ದವ್ ಠಾಕ್ರೆ ಅಯೋಧ್ಯೆಗೆ ಭೇಟಿ ನೀಡಲಿದ್ದು, ನಂತರ ಸರಯೂ ನದಿ ತಟದಲ್ಲಿ ನಡೆಯಲಿರುವ ಮಹಾ ಆರತಿಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಶಿವಸೈನಿಕರು ಅಪಾರ ಪ್ರಮಾಣದಲ್ಲಿ ಭಾಗವಹಿಸಬೇಕು ಎಂದು ರಾವತ್ ವಿನಂತಿಸಿಕೊಂಡಿದ್ದಾರೆ. 2019ರ ನವೆಂಬರ್ 28ರಂದು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ಠಾಕ್ರೆ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ.

ಶುಕ್ರವಾರ ದಿಲ್ಲಿಗೆ ಭೇಟಿ ನೀಡಲಿರುವ ಠಾಕ್ರೆ ಪ್ರದಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಹಿರಿಯ ಮುಖಂಡ ಎಲ್ ಕೆ ಅಡ್ವಾಣಿ, ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿಯನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ ಎಂದು ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next