Advertisement

Udupi: ಪೂರ್ಣಪ್ರಜ್ಞ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನಲ್ಲಿ ʼಅದ್ವೈತ 2024ʼ

06:36 PM Aug 26, 2024 | Team Udayavani |

ಉಡುಪಿ: ಶ್ರೀ ಅದಮಾರು ಮಠ ಎಜುಕೇಶನ್ ಕೌನ್ಸಿಲ್‌ನಿಂದ ನಿರ್ವಹಿಸಲ್ಪಡುತ್ತಿರುವ ಪೂರ್ಣಪ್ರಜ್ಞ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ (ಪಿ.ಐ.ಎಂ) ಎಂ.ಬಿ.ಎ ಹಾಗೂ ಎಂ.ಸಿ.ಎ ವಿದ್ಯಾರ್ಥಿಗಳು ರಾಷ್ಟ್ರೀಯ ಮಟ್ಟದ ಆಡಳಿತ ನಿರ್ವಹಣೆ, ಮಾಹಿತಿ ತಂತ್ರಜ್ಞಾನ ಹಾಗೂ ಸಾಂಸ್ಕೃತಿಕ ಸ್ಪರ್ಧೆ ʼಅದ್ವೈತʼ ಕಾರ್ಯಕ್ರಮ ಆ.28ರಂದು ನಡೆಯಲಿದೆ.

Advertisement

ದೇಶದ ವಿವಿಧ ಭಾಗಗಳ ಪದವಿ ಕಾಲೇಜು ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಬುಧವಾರ ಬೆಳಗ್ಗೆ 9.30 ಕ್ಕೆ ಉಡುಪಿ ಛೇಂಬರ್ ಅಫ್ ಕಾಮರ್ಸ್ & ಇಂಡಸ್ಟ್ರಿಯ ಅಧ್ಯಕ್ಷ ಅಮ್ಮುಂಜೆ ಪ್ರಭಾಕರ್ ನಾಯಕ್ ಕಾರ್ಯಕ್ರಮದ ಉದ್ಘಾಟನೆ ಮಾಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಉಡುಪಿ ಶಾಸಕ ಯಶಪಾಲ್ ಸುವರ್ಣ, ಕರ್ನಾಟಕ ಬ್ಯಾಂಕ್ ಉಡುಪಿ ಪ್ರಾದೇಶಿಕ ಕಛೇರಿಯ ಸಹಾಯಕ ಮಹಾ ಪ್ರಬಂಧಕ ವಾದಿರಾಜ್ ಭಟ್ ಇವರು ಆಗಮಿಸಲಿದ್ದಾರೆ.

ಕನಿಷ್ಟ 15 ಪದವಿ ಕಾಲೇಜುಗಳು “ಅದ್ವೈತ 2024” ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇರುವುದಾಗಿ ಸಂಸ್ಥೆಯ ನಿರ್ದೇಶಕ ಡಾ. ಪಿ. ಎಸ್. ಐತಾಳ್ ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.