Advertisement

Udupi ಶೇ.60 ಕನ್ನಡ ಬಳಕೆ ಕಡ್ಡಾಯ: ಜಿಲ್ಲಾಧಿಕಾರಿ

12:43 AM Aug 20, 2024 | Team Udayavani |

ಉಡುಪಿ: ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಮಸೂದೆ ಅನ್ವಯ ನಾಮಫ‌ಲಕದಲ್ಲಿ ಕನ್ನಡವನ್ನು ಪ್ರಧಾನವಾಗಿ ಬಳಸುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Advertisement

ಜಿಲ್ಲೆಯಲ್ಲಿ ನಾಮಫ‌ಲಕದ ಮೇಲ್ಭಾಗದಲ್ಲಿ ಕನ್ನಡ ಭಾಷೆ ಶೇ.60ರಷ್ಟು ಪ್ರದರ್ಶಿಸದೆ ಇರುವುದು ಪರಿಶೀಲನೆ ವೇಳೆ ಕಂಡುಬಂದಿದ್ದು, ನಿಯಮವನ್ನು ಪಾಲಿಸದಿರುವ ಸಂಘ, ಸಂಸ್ಥೆ ಹಾಗೂ ಘಟಕಗಳಿಗೆ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ಮಸೂದೆ‌ ಅನ್ವಯ ಮೊದಲನೇ ಅಪರಾಧಕ್ಕಾಗಿ 5 ಸಾ. ರೂ. ರವರೆಗೆ, ಎರಡನೇ ಅಪರಾಧಕ್ಕಾಗಿ ರೂ. 10ಸಾ. ರೂ. ರವರೆಗೆ, ಅನಂತರದ ಪ್ರತಿಯೊಂದು ಅಪರಾಧಕ್ಕಾಗಿ 20,000 ರೂ. ರವರೆಗೆ ದಂಡ ವಿಧಿಸಿ ಪರವಾನಿಗೆ ರದ್ದುಗೊಳಿಸಲಾಗುವುದು.

ಜಿಲ್ಲೆಯಲ್ಲಿ ನಾಮಫ‌ಲಕಗಳಲ್ಲಿ ಸಂಘ, ಸಂಸ್ಥೆ ಹಾಗೂ ಘಟಕದ ಹೆಸರು ಮತ್ತು ವಿಳಾಸ ಕನ್ನಡದಲ್ಲಿ ಫ‌ಲಕಗಳ ಮೇಲ್ಭಾಗದಲ್ಲಿ ಶೇ.60 ರಷ್ಟು ಪ್ರದರ್ಶಿಸುವ ಮೂಲಕ ಪರಿಷ್ಕೃತ ಫ‌ಲಕವನ್ನು ಆ. 30ರೊಳಗಾಗಿ ಅಳವಡಿಸಬೇಕು. ಅನಂತರದ ದಿನಗಳಲ್ಲಿ ತಪಾಸಣೆ ಸಂದರ್ಭ ನಾಮಫ‌ಲಕದಲ್ಲಿ ವ್ಯತ್ಯಾಸ ಕಂಡುಬಂದಲ್ಲಿ ಮೇಲೆ ವಿವರಿಸಿರುವ ದಂಡನೆಗೆ ಒಳಪಡಿಸಲಾಗುವುದು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟನೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next