Advertisement

Udupi: ಅಜ್ಜರಕಾಡು ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿಗೆ ‘ಎ’ ಗ್ರೇಡ್‌ ಮಾನ್ಯತೆ

05:03 PM Sep 09, 2024 | Team Udayavani |

ಉಡುಪಿ: ಅಜ್ಜರಕಾಡು ಡಾ| ಜಿ.ಶಂಕರ್‌ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರಕ್ಕೆ ನ್ಯಾಕ್‌ ನಲ್ಲಿ 3.12 ಸಿಜಿಪಿಎ ಯೊಂದಿಗೆ “ಎ’ ಗ್ರೇಡ್‌ ದೊರಕಿದೆ.

Advertisement

ಆ ಪ್ರಯುಕ್ತ ಪ್ರಶಸ್ತಿ ಪ್ರಧಾನ ಸಮಾರಂಭವು ಶಿಕ್ಷಕರ ದಿನಾಚರಣೆಯಂದು ವಿಧಾನ ಸೌಧದ ಬ್ಯಾಂಕ್ವೆಟ್‌ ಹಾಲ್‌ ನಲ್ಲಿ ನಡೆಯಿತು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಲೇಜಿನ ಪ್ರಾಂಶುಪಾಲ ಡಾ| ಭಾಸ್ಕರ ಶೆಟ್ಟಿ ಎಸ್‌.ಹಾಗೂ ಐಕ್ಯೂಎಸಿ ಸಂಚಾಲಕರಾದ ಸೋಜನ್‌ ಕೆ.ಜಿ.ಅವರಿಗೆ ಪ್ರಶಸ್ತಿ ಪ್ರದಾನಿಸಿದರು. ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ| ಎಂ.ಸಿ.ಸುಧಾಕರ್‌, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಇಲಾಖೆಯ ಮೇಲಾಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: Anandapura ಹಕ್ರೆಕೊಪ್ಪ ಕ್ರಾಸ್: ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಲಾರಿ ಪಲ್ಟಿ

Advertisement

Udayavani is now on Telegram. Click here to join our channel and stay updated with the latest news.