ಸೋಮವಾರ ಸಂತೆಕಟ್ಟೆ ಜಂಕ್ಷನ್‌ನಲ್ಲಿ ಉಡುಪಿ ಬಿಜೆಪಿ ಅಭ್ಯರ್ಥಿಯ ಯಶ್‌ಪಾಲ್ ಸುವರ್ಣ ಅವರ ಪರವಾಗಿ ಬಿಜೆಪಿ ವತಿಯಿಂದ ಜರಗಿದ ರೋಡ್‌ಶೋನಲ್ಲಿ ಭಾಗವಹಿಸಿ ಅವರು ಮಾತನಾಡಿದರು.
Advertisement
ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಆಡಳಿತ ಚುಕ್ಕಾಣಿ ಹಿಡಿದ ಅನಂತರ ದೇಶದಲ್ಲಿ ಅಭಿವೃದ್ಧಿ ಪರ್ವ ಆರಂಭಗೊಂಡಿತು. 2014ರ ಹಿಂದಿನ ಭಾರತಕ್ಕೂ ಈಗಿನ ಭಾರತಕ್ಕೂ ಸಾಕಷ್ಟು ವ್ಯತ್ಯಾಸವಿದೆ. ಕಳೆದ 60 ವರ್ಷದಲ್ಲಿ ಆಗದ ಅಭಿವೃದ್ಧಿ 8 ವರ್ಷದಲ್ಲಿ ಮೋದಿ ನಾಯಕತ್ವದಲ್ಲಿ ಮಾಡಿ ತೋರಿಸಿದ್ದೇವೆ. ರಾಜ್ಯದಲ್ಲಿ ಹಿಂದೆಂದೂ ಆಗಿರದ ಜನಪರ ಕಾರ್ಯಗಳು ಬಿಜೆಪಿ ಸರಕಾರದಲ್ಲಿ ನಡೆದಿದೆ ಎಂದರು.
Related Articles
ಸಂತೆಕಟ್ಟೆ ಆಶೀರ್ವಾದ ಚಿತ್ರಮಂದಿರ ಮುಂಭಾಗದಿಂದ ಸಂತೆಕಟ್ಟೆ ಜಂಕ್ಷನ್‌ವರೆಗೆ ರೋಡ್‌ಶೋ ನಡೆಸಲಾಯಿತು. ಸಹಸ್ರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಂಡು ಬಿಜೆಪಿ, ಮೋದಿ ಪರ ಘೋಷಣೆ ಕೂಗಿದರು. ಇದೇ ವೇಳೆ ಕಾಡೆಕಾರು ಗ್ರಾ.ಪಂ. ಸದಸ್ಯ, ಕಾಂಗ್ರೆಸ್ ಕಾರ್ಯಕರ್ತ ಸತೀಶ್ ಕೋಟ್ಯಾನ್ ಅವರು ಕೇಂದ್ರ ಸಚಿವರ ಸಮ್ಮುಖದಲ್ಲಿ ಬಿಜೆಪಿ ಸೇರಿದರು.
Advertisement
ಮುಂಬಯಿ ಉತ್ತರ ಕ್ಷೇತ್ರದ ಸಂಸದ ಗೋಪಾಲ ಶೆಟ್ಟಿ, ಪಕ್ಷದ ಮುಖಂಡರಾದ ಮಟ್ಟಾರು ರತ್ನಾಕರ್ ಹೆಗ್ಡೆ, ಮಹೇಶ್ ಠಾಕೂರ್, ಬೈಕಾಡಿ ಸುಪ್ರಸಾದ್ ಶೆಟ್ಟಿ, ಪ್ರತಾಪ್ ಶೆಟ್ಟಿ ಚೇರ್ಕಾಡಿ, ವಿಜಯ ಕೊಡವೂರು, ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ಜ್ಯೋತಿ ಶೇಟ್, ವೀಣಾ ನಾಯ್ಕ ಉಪಸ್ಥಿತರಿದ್ದರು.
ಉಡುಪಿಯಲ್ಲಿ ಬಿಜೆಪಿ ಆಡಳಿತ ಸುವರ್ಣಯುಗ ಕಂಡಿದೆ. ಹಿಂದಿನ ಅಭಿವೃದಿಟಛಿ ಕೆಲಸಗಳು ನಡೆದಂತೆ ಮುಂದೆಯೂ ನಡೆಯಲು ಯಶ್‌ಪಾಲ್ ಸುವರ್ಣ ಅವರನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಬೇಕು.-ಕೆ. ರಘುಪತಿ ಭಟ್, ಶಾಸಕ, ಉಡುಪಿ ದೇಶವು ಪ್ರಧಾನಿ ನರೇಂದ್ರ ಮೋದಿ ಅವರಂಥ ಸಮರ್ಥ ನಾಯಕತ್ವದಲ್ಲಿ ಮುನ್ನಡೆಯುತ್ತಿದೆ. ಅವರ ಕೈಯನ್ನು ಮತ್ತಷ್ಟು ಬಲಪಡಿಸಬೇಕು. ಇದಕ್ಕೆ ರಾಜ್ಯದಲ್ಲೂ ಬಿಜೆಪಿ ಅಧಿಕಾರಕ್ಕೆ ಬರಬೇಕು. ಉಡುಪಿಯ ಅಭಿವೃದಿಟಛಿ ಮತ್ತು ಜನಪರ ಯೋಜನೆಗಳನ್ನು ಸಾಕಾರಗೊಳಿಸಲು ಜನರು ಬಿಜೆಪಿಯನ್ನು ಬೆಂಬಲಿಸಬೇಕು.
ಯಶ್‌ಪಾಲ್ ಎ. ಸುವರ್ಣ, ಉಡುಪಿ ಬಿಜೆಪಿ ಅಭ್ಯರ್ಥಿ