Advertisement
ಮಲ್ಪೆಯಿಂದ ಉಡುಪಿಯ ಬಿಜೆಪಿ ಕಚೇರಿ ತನಕ ಬೈಕ್ ರ್ಯಾಲಿ ಮೂಲಕ ಆಗಮಿಸಿದ ಬಿಜೆಪಿ ಕಾರ್ಯಕರ್ತರು ಬಿಜೆಪಿ ಕಚೇರಿ ಮುಂದೆ ಜಮಾಯಿಸಿದರು.ಬಳಿಕ ಜಿಲ್ಲಾಧ್ಯಕ್ಷ ಕಿಶೋರ್ ಕುಂದಾಪುರ ಅವರಿಗೆ ಮನವಿ ಸಲ್ಲಿಸಿದ ಕಾರ್ಯಕರ್ತರು, ಶೋಭಾ ಕರಂದ್ಲಾಜೆ ಅವರಿಗೆ ಇನ್ನೊಂದು ಬಾರಿ ಅವಕಾಶ ನೀಡಬಾರದು. ಈಗಾಗಲೇ ಎರಡು ಅವಧಿಗೆ ಈ ಕ್ಷೇತ್ರವನ್ನು ಅವರು ಪ್ರತಿನಿಧಿಸಿದ್ದಾರೆ. ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಮಾಡಿಲ್ಲ. ಈ ಬಾರಿ ಕೂಡ ಮತ್ತೊಮ್ಮೆ ತಮಗೇ ಟಿಕೆಟ್ ಎಂದು ಓಡಾಡಿಕೊಂಡಿದ್ದಾರೆ. ಮೋದಿ ಹೆಸರಿನಲ್ಲಿ ಅವರು ಮತ್ತೊಮ್ಮೆ ಗೆಲ್ಲುವುದು ಬೇಡ. ಅವರ ಬದಲು ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕು. ಅವರ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಆಗಿಲ್ಲ ಎಂದು ಬಿಜೆಪಿ ಕಾರ್ಯಕರ್ತರು ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದಾರೆ.
Advertisement
Udupi: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಭುಗಿಲೆದ್ದ ಕಾರ್ಯಕರ್ತರ ಆಕ್ರೋಶ
09:25 PM Mar 02, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.