Advertisement
ಅವರು ಶನಿವಾರ ಪುಷ್ಪಾನಂದ ಫೌಂಡೇಶನ್ ವತಿಯಿಂದ ಉಡುಪಿಯ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಮಕ್ಕಳ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿ, ಫೌಂಡೇಶನ್ ಮೂಲಕ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಈಗಾಗಲೇ ವಿದ್ಯಾರ್ಥಿವೇತನ ವಿತರಿಸಲಾಗಿದೆ ಎಂದರು.
ಮುಖ್ಯ ಅತಿಥಿಯಾಗಿದ್ದ ಡಾ| ಜಿ. ಶಂಕರ್ ಸರಕಾರಿ ಮಹಿಳೆಯರ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ| ಭಾಸ್ಕರ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಫೌಂಡೇಶನ್ ಮೂಲಕ ವಿವಿಧ ಸೌಲಭ್ಯಗಳನ್ನು ಒದಗಿಸಿದ ಶಾಸಕರ ಸಾಮಾಜಿಕ ಬದ್ಧತೆ ಸರ್ವರಿಗೂ ಮಾದರಿ ಎಂದರು. ನಗರಸಭಾ ಸದಸ್ಯೆ ರಶ್ಮಿ ಸಿ. ಭಟ್, ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ, ಬಿಇಒ ಅಶೋಕ್ ಕಾಮತ್, ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷೆ ನಿರುಪಮಾ ಪ್ರಸಾದ್ ಶೆಟ್ಟಿ, ಶಿಕ್ಷಣ ತಜ್ಞ ವಿಶ್ವನಾಥ ಬಾಯರಿ, ಕಾಲೇಜಿನ ಪ್ರಾಂಶುಪಾಲ ಡಾ| ಸುಮಾ ಎಸ್., ಪ್ರೌಢಶಾಲೆ ಮುಖ್ಯೋಪಾಧ್ಯಾಯಿನಿ ಇಂದಿರಾ, ಶಿಕ್ಷಣ ಸೇವಾ ಸಮಿತಿ ಅಧ್ಯಕ್ಷ ಯೋಗೀಶ್ ಕೋಟ್ಯಾನ್, ಉಪಾಧ್ಯಕ್ಷ ಶೇಕ್ ಆಸೀಫ್ ಮೊದಲಾದವರು ಉಪಸ್ಥಿತರಿದ್ದರು.