Advertisement
ಅವರು ಮಾ.29ರ ಬುಧವಾರ ಈ ಕುರಿತು ಹಮ್ಮಿಕೊಂಡಿದ್ದ ವಿಡಿಯೋ ಕಾನ್ಪರೆನ್ಸ್ ಸಭೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
Related Articles
Advertisement
ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಅವರು ಮಾತನಾಡಿ, ಚುನಾವಣಾಧಿಕಾರಿಗಳು ಹಾಗೂ ಸಹಾಯಕ ಚುನಾವಣಾ ಅಧಿಕಾರಿಗಳು ಚುನಾವಣಾ ಆಯೋಗಕ್ಕೆ ನೀಡಬೇಕಾದ ವರದಿಗಳನ್ನು ಕೂಡಲೇ ನೀಡುವಂತೆ ತಿಳಿಸಿದರು.
ಚುನಾವಣಾಧಿಕಾರಿಗಳು, ಸಹಾಯಕ ಚುನಾವಣಾ ಅಧಿಕಾರಿಗಳು, ತಹಶೀಲ್ದಾರರು, ಸಂಬಂಧಪಟ್ಟ ತಾಲೂಕು ಪಂಚಾಯತ್ ಕಾರ್ಯನಿರ್ವಣಾಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಪುರಸಭೆಗಳ ಮುಖ್ಯಾಧಿಕಾರಿಗಳು ಭಾಗವಹಿಸಿದ್ದರು.
ಉಡುಪಿಯಲ್ಲೂ ಬ್ಯಾನರ್, ಬಂಟಿಂಗ್ಸ್ ತೆರವಿಗೆ ಸೂಚನೆ:ನಗರಸಭೆ ಸಿಬಂದಿ ಸಹಿತವಾಗಿ ಗ್ರಾ.ಪಂ., ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಿಬಂದಿ ವರ್ಗ ಜಿಲ್ಲಾಡಳಿತದ ಸೂಚನೆ ಮೇರೆಗೆ ಬ್ಯಾನರ್, ಬಂಟಿಂಗ್ಸ್ ಇತ್ಯಾದಿಗಳನ್ನು ತೆರವುಗೊಳಿಸುವ ಕಾರ್ಯ ಆರಂಭಿಸಿದೆ. ಜಿಲ್ಲಾಧಿಕಾರಿ ಕಚೇರಿ ಆವರಣದ ಸಚಿವರ ಕಚೇರಿ ಹಾಗೂ ಸಂಸದರ ಕಚೇರಿಗೆ ಸರಕಾರದಿಂದ ನೀಡಿರುವ ಸವಲತ್ತುಗಳನ್ನು ನೀತಿ ಸಂಹಿತೆ ನಿಯಮ ಆಧಾರದಲ್ಲಿ ವಾಪಸ್ ಪಡೆಯಲಾಗಿದೆ. ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಅವರು ಎಲ್ಲ ರಾಜಕೀಯ ಪಕ್ಷಗಳ ಪ್ರಮುಖರ ಸಭೆ ನಡೆಸಿ, ಚುನಾವಣೆ ವೆಚ್ಚ ಸಹಿತವಾಗಿ ಕಾರ್ಯಕ್ರಮ ಆಯೋಜನೆ ಸಂದರ್ಭದಲ್ಲಿ ಯಾವುದೇ ನಿಯಮದ ಉಲ್ಲಂಘನೆ ಆಗದಂತೆ ಎಚ್ಚರ ವಹಿಸಲು ಸೂಚನೆಯನ್ನು ರವಾನಿಸಿದ್ದಾರೆ. ಒಟ್ಟಾರೆಯಾಗಿ ಜಿಲ್ಲಾದ್ಯಂತ ನೀತಿ ಸಂಹಿತೆ ಇಫೆಕ್ಟ್ ಶುರುವಾಗಿದೆ. ಇದನ್ನೂ ಓದಿ: 14 ವರ್ಷದ ಕೆಲಸದ ಅವಧಿಯಲ್ಲಿ 4,512 ಬಾರಿ ಸಿಗರೇಟ್ ಸೇದಿದ ವ್ಯಕ್ತಿಗೆ 11,000 ಡಾಲರ್ ದಂಡ!