Advertisement
ಲೋಕಾಯುಕ್ತ ಕಾಯ್ದೆಯನ್ನು ತಿಳಿದುಕೊಳ್ಳುವ ಮೂಲಕ ಹೋಬಳಿ ಮಟ್ಟದಲ್ಲಿಯೇ ಅರಿವು ಮೂಡಿಸುವ ಕೆಲಸವಾಗಬೇಕು ಎಂದು ಉಪಲೋಕಾಯುಕ್ತ ನ್ಯಾ| ಕೆ.ಎನ್. ಫಣೀಂದ್ರ ಹೇಳಿದರು.
Related Articles
ನ್ಯಾಯದಾನದ ಜತೆಗೆ ಜನಸೇವೆ ಮಾಡುವ ಕೆಲಸ ಉತ್ತಮವಾದುದು. ಜನಸೇವೆಯಿಂದ ಆತ್ಮತೃಪ್ತಿ ಸಿಗುತ್ತದೆ. ನ್ಯಾಯಾಂಗ ವ್ಯವಸ್ಥೆಯ ಮೇಲಿನ ನಂಬಿಕೆಯಿಂದ ಜನರು ನ್ಯಾಯಾಲಯಕ್ಕೆ ಬರುತ್ತಾರೆ. ಆ ನಂಬಿಕೆಯನ್ನು ಉಳಿಸುವ ಕೆಲಸವಾಗಬೇಕು. ಲೋಕಾಯುಕ್ತ ಹಾಗೂ ಕಾನೂನು ಸೇವಾ ಪ್ರಾಧಿಕಾರಕ್ಕೆ ಅವಿನಾಭಾವ ಸಂಬಂಧವಿದೆ. ಇಬ್ಬರೂ ಕೈಜೋಡಿಸಿದರೆ ಉತ್ತಮ ಕೆಲಸ ನಿರ್ವಹಿಸಲು ಸಾಧ್ಯವಿದೆ ಎಂದರು.
Advertisement
ಆರ್ಥಿಕ, ಸಾಮಾಜಿಕ, ನ್ಯಾಯಾಂಗ ವ್ಯವಸ್ಥೆಯನ್ನು ಬಲಪಡಿಸಬೇಕು. ಜನರ ಅಭಿವೃದ್ಧಿಯಿಂದ ದೇಶದ ಅಭಿವೃದ್ಧಿಯಾಗಲು ಸಾಧ್ಯವಿದೆ. ಸಾರ್ವಜನಿಕ ವ್ಯವಹಾರಗಳನ್ನು ಕಾನೂನಾತ್ಮಕವಾಗಿ ಪರಿಹರಿಸಬೇಕು ಎಂದು ಹೇಳಿದರು.
ಉಡುಪಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶಾಂತವೀರ ಶಿವಪ್ಪ ಅಧ್ಯಕ್ಷತೆ ವಹಿಸಿದ್ದರು. ಉಪ ಲೋಕಾಯುಕ್ತರನ್ನು ಸಮ್ಮಾನಿಸಲಾಯಿತು.
ರಾಜ್ಯ ಲೋಕಾಯುಕ್ತ ವಿಚಾರಣೆಗಳ ಉಪನಿಬಂಧಕ ಎಂ.ವಿ. ಚೆನ್ನಕೇಶವ ರೆಡ್ಡಿ, ಲೋಕಾಯುಕ್ತ ಪ್ರಭಾರ ಸಹಾಯಕ ನಿಬಂಧಕ ರಂಗೇಗೌಡ, ಉಪ ಲೋಕಾಯುಕ್ತರ ಆಪ್ತ ಕಾರ್ಯದರ್ಶಿ ಕಿರಣ್ ಪಿ.ಎಂ. ಪಾಟೀಲ್, ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್., ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಸಿ.ಎ. ಸೈಮನ್ ಉಪಸ್ಥಿತರಿದ್ದರು.