Advertisement

Udupi: ಬಾಂಗ್ಲಾದೇಶದ ಅಕ್ರಮ ವಲಸಿಗರು ಪೊಲೀಸ್‌ ಕಸ್ಟಡಿಗೆ

08:47 PM Oct 14, 2024 | Team Udayavani |

ಉಡುಪಿ: ಮಲ್ಪೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಬಂಧಿತರಾದ ಏಳು ಮಂದಿ ಬಾಂಗ್ಲಾ ಅಕ್ರಮ ವಲಸಿಗರನ್ನು ಪೊಲೀಸ್‌ ಕಸ್ಟಡಿಗೆ ನೀಡುವಂತೆ ತನಿಖಾಧಿಕಾರಿ ನ್ಯಾಯಾಲಯಕ್ಕೆ ಸೋಮವಾರ ಅರ್ಜಿ ಸಲ್ಲಿಸಿದ್ದು, ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಾಲಯವು ಐದು ದಿನಗಳ ಕಾಲ ಅಂದರೆ ಅ. 19ರ ವರೆಗೆ ಪೊಲೀಸ್‌ ಕಸ್ಟಡಿಗೆ ನೀಡಿ ಆದೇಶಿಸಿದೆ.

Advertisement

ಏಳು ಮಂದಿ ಆರೋಪಿಗಳನ್ನು ಸೋಮವಾರ ಸಂಜೆ ಐದು ಗಂಟೆಗೆ ಕಸ್ಟಡಿಗೆ ಪಡೆದುಕೊಂಡ ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ. ಆರೋಪಿಗಳ ಬಳಿ ಇರುವ ನಕಲಿ ದಾಖಲೆಗಳನ್ನು ಎಲ್ಲಿ ಸೃಷ್ಟಿಸಲಾಗಿದೆ ಮತ್ತು ಇವರು ಯಾವ ಮಾರ್ಗದಿಂದ ಉಡುಪಿಗೆ ಆಗಮಿಸಿದ್ದಾರೆ ಹಾಗೂ ಇವರಂತೆ ಇನ್ನೂ ವಲಸಿಗರು ಇದ್ದಾರೆಯೇ ಎಂಬುವುದರ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಎಸ್‌ಪಿ ಡಾ| ಅರುಣ್‌ ಕೆ. ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next