Advertisement
ಉಡುಪಿ ಮೂಲದ ಅನಿವಾಸಿ ಭಾರತೀಯ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಕಳೆದ ಜೂನ್ ನಲ್ಲಿ ಉಡುಪಿ ನ್ಯಾಯಾಲಯವು ಮೂವರು ಆರೋಪಿಗಳಾದ ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿ, ಪುತ್ರ ನವನೀತ್ ಶೆಟ್ಟಿ ಮತ್ತು ರಾಜೇಶ್ವರಿ ಗೆಳೆಯ ಹಾಗೂ ಅರ್ಚಕ ನಿರಂಜನ್ ಭಟ್ ಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಈ ಶಿಕ್ಷೆ ಪ್ರಶ್ನಿಸಿ ರಾಜೇಶ್ವರಿ ಶೆಟ್ಟಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.
Related Articles
Advertisement
ಜುಲೈ 31ರಂದು ಭಾಸ್ಕರ್ ಶೆಟ್ಟಿ ಅವರ ತಾಯಿ ತಮ್ಮ ಮಗ ನಾಪತ್ತೆಯಾಗಿದ್ದಾನೆಂದು ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ತನಿಖೆ ನಡೆಸಿ ರಾಜೇಶ್ವರಿ, ಪುತ್ರ ನವನೀತ್ ಶೆಟ್ಟಿ, ಅರ್ಚಕ ನಿರಂಜನ್ ಭಟ್, ಆತನ ತಂದೆ ಶ್ರೀನಿವಾಸ್ ಭಟ್, ಮತ್ತು ಕಾರು ಚಾಲಕ ರಾಘವೇಂದ್ರನನ್ನು ಬಂಧಿಸಲಾಗಿತ್ತು.
ವಿಚಾರಣೆ ನಡೆಸಿದ್ದ ಉಡುಪಿ ಜಿಲ್ಲಾ ಸತ್ರ ನ್ಯಾಯಾಲಯವು ರಾಜೇಶ್ವರಿ, ನವನೀತ್ ಶೆಟ್ಟಿ, ನಿರಂಜನ್ ಭಟ್ ಗೆ ಜೀವಾವಧಿ ಶಿಕ್ಷೆ ಪ್ರಕಟಿಸಿತ್ತು. ಐದನೇ ಆರೋಪಿ ಚಾಲಕ ರಾಘವೇಂದ್ರನನ್ನು ಖುಲಾಸೆಗೊಳಿಸಲಾಗಿದೆ. ನಾಲ್ಕನೇ ಆರೋಪಿ ಅನಾರೋಗ್ಯದಿಂದ ಮೃತಪಟ್ಟಿದ್ದರು.