Advertisement

ಉಡುಪಿ ಹಿಜಾಬ್ ಪ್ರಕರಣ: ಎನ್‌ಐಎ ತನಿಖೆಗೆ ಆಗ್ರಹಿಸಿದ ರಘುಪತಿ ಭಟ್

06:53 PM Feb 11, 2022 | Team Udayavani |

ಉಡುಪಿ: ಜಿಲ್ಲೆಯ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಆರಂಭವಾದ ಹಿಜಾಬ್ ವಿವಾದದ ಕುರಿತು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಯಿಂದ ತನಿಖೆ ನಡೆಸಬೇಕು ಎಂದು ಉಡುಪಿ ಬಿಜೆಪಿ ಶಾಸಕ ಕೆ.ರಘುಪತಿ ಭಟ್ ಶುಕ್ರವಾರ ಒತ್ತಾಯಿಸಿದ್ದಾರೆ.

Advertisement

ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (ಸಿಎಫ್‌ಐ) ಆದೇಶದ ಮೇರೆಗೆ ಕರ್ನಾಟಕ ಹೈಕೋರ್ಟ್‌ನ ಮಧ್ಯಂತರ ಆದೇಶವನ್ನು ಪ್ರಶ್ನಿಸಿ ವಿದ್ಯಾರ್ಥಿಗಳು ಸುಪ್ರೀಂ ಕೋರ್ಟ್‌ನ ಮೊರೆ ಹೋಗಿದ್ದಾರೆ ಎಂದು ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರೂ ಆಗಿರುವ ಭಟ್ ಹೇಳಿಕೆಯಲ್ಲಿ ಆರೋಪಿಸಿದ್ದಾರೆ.

ಕಾಲೇಜಿನ ಆರು ಮುಸ್ಲಿಂ ವಿದ್ಯಾರ್ಥಿನಿಯರು ಕಳೆದ ವರ್ಷ ಅಕ್ಟೋಬರ್-ನವೆಂಬರ್‌ನಲ್ಲಿ ಟ್ವಿಟ್ಟರ್ ಖಾತೆಗಳನ್ನು ತೆರೆದಿದ್ದಾರೆ ಮತ್ತು ಸಿಎಫ್‌ಐ ಹೇಳಿಕೆಗಳ ವಿಷಯಗಳನ್ನು ದೇಶವಿರೋಧಿ ಎಂದು ತಮ್ಮ ಖಾತೆಗಳಲ್ಲಿ ಪೋಸ್ಟ್ ಮಾಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಬಾಬರಿ ಮಸೀದಿ ವಿಚಾರದಲ್ಲಿ ಮುಸ್ಲಿಂ ಸಮುದಾಯಕ್ಕೆ ನ್ಯಾಯ ಸಿಕ್ಕಿಲ್ಲ, ಯಾವುದೇ ಬೆಲೆ ತೆತ್ತಾದರೂ ತಮ್ಮ ಹಕ್ಕುಗಳನ್ನು ಪಡೆಯಲು ಹೋರಾಟ ನಡೆಸುವುದಾಗಿ ಎಂದು ಟ್ವೀಟ್ ಮಾಡಿರುವುದಾಗಿ ಶಾಸಕರು ತಿಳಿಸಿದ್ದಾರೆ.

ಕುರುಡು ಧಾರ್ಮಿಕ ವಿಚಾರಧಾರೆಯಿಂದ ಅಮಾಯಕ ಹೆಣ್ಣುಮಕ್ಕಳ ಬ್ರೈನ್ ವಾಶ್ ಆಗುತ್ತಿದ್ದು, ಇದನ್ನು ರಾಜ್ಯ ಗೃಹ ಸಚಿವರು ಹಾಗೂ ಪೊಲೀಸ್ ಇಲಾಖೆಗೆ ತಿಳಿಸಲಾಗಿದೆ ಎಂದು ಶಾಸಕ ಭಟ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Advertisement

ಎನ್‌ಐಎಯ ಸಮಗ್ರ ತನಿಖೆಯಿಂದ ಮಾತ್ರ ಹಿಜಾಬ್ ವಿಷಯವನ್ನು ವಿವಾದವಾಗಿ ಪರಿವರ್ತಿಸಲು ಕಾರಣಗಳು ಹೊರಬರುತ್ತವೆ ಎಂದು ಹೇಳಿದರು. ಯುವ ಕಾಂಗ್ರೆಸ್ ಕೂಡ ಈ ವಿಚಾರವಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರುವ ಮೂಲಕ ಸಿಎಫ್ ಐ ಜೊತೆ ಕೈಜೋಡಿಸಿದೆ. ಉಡುಪಿಯ ಮುಸ್ಲಿಂ ಮುಖಂಡರು ಎರಡು ಸಮುದಾಯಗಳ ನಡುವೆ ಘರ್ಷಣೆಯನ್ನು ಬಯಸುವುದಿಲ್ಲ ಮತ್ತು ಹೊರಗಿನವರು ಜಿಲ್ಲೆಯಲ್ಲಿ ಶಾಂತಿ ಕದಡಲು ಪಿತೂರಿ ನಡೆಸಿ ತೊಂದರೆ ಸೃಷ್ಟಿಸುತ್ತಿದ್ದಾರೆ ಎಂದು ಶಾಸಕರು ಕಿಡಿಕಾರಿದರು.

ವಿವಾದಕ್ಕೆ ಕಾರಣವಾದ ಕಾರಣಗಳ ಬಗ್ಗೆ ಸಮಗ್ರ ತನಿಖೆ ನಡೆಯಬೇಕು ಎಂದು ಆಗ್ರಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next