Advertisement

ಉಡುಪಿ: ಬಸ್‌ ಪ್ರಯಾಣ ದರ ಪರಿಷ್ಕರಣೆ

01:29 AM Dec 08, 2021 | Team Udayavani |

ಉಡುಪಿ: ಜಿಲ್ಲೆಯ ಪ್ರಾದೇಶಿಕ ಸಾರಿಗೆ ಪ್ರಾಧಿಕಾರವು ಎಕ್ಸ್‌ಪ್ರೆಸ್‌ ಹಾಗೂ ಷಟಲ್‌ ಬಸ್‌ಗಳ ಪ್ರಯಾಣ ದರ ಪರಿಷ್ಕರಿಸಿ, ನ. 10ರಿಂದ ಪೂರ್ವಾನ್ವಯ ಆಗುವಂತೆ ಜಾರಿಗೊಳಿಸಿದೆ.

Advertisement

ಜಿಲ್ಲೆಯ ಎಲ್ಲ ಬಸ್‌ ಮಾಲಕರು ಪ್ರಾಧಿಕಾರ ದಿಂದ ನಿಗದಿಪಡಿಸಿರುವ ಪರಿಷ್ಕೃತ ದರವನ್ನು ಪ್ರಯಾಣಿಕರಿಂದ ಪಡೆಯಬೇಕು. ಬಸ್‌ಗಳಲ್ಲಿ ಸಂಚಾರ ಮಾರ್ಗದ ವಿವರವನ್ನು ಕಡ್ಡಾಯವಾಗಿ ಕನ್ನಡದಲ್ಲೇ ನಮೂದಿಸಬೇಕು.

ಕೋವಿಡ್‌ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು. ಬಸ್‌ಗಳ ಚಾಲಕರು, ನಿರ್ವಾಹಕರು ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು ಎಂದು ಪ್ರಾಧಿಕಾರದ ಪ್ರಕಟನೆ ತಿಳಿಸಿದೆ.

 

Advertisement

Udayavani is now on Telegram. Click here to join our channel and stay updated with the latest news.

Next