ಉಡುಪಿ:ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರು 3 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ ಹೇಳಿದರು.
ಲೋಕಸಭಾ ಚುನಾವಣೆ ಇಡೀ ದೇಶದಲ್ಲಿ ಬಿಜೆಪಿಯ ಅಲೆ ಇದ್ದು ಮತ್ತೆ ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾಗುವುದರಲ್ಲಿ ಯಾವುದೇ ಸಂಶಯಲ್ಲ ಎಂದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುಯಿಲಾಡಿ ಸುರೇಶ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕುತ್ಯಾರು ನವೀನ್ ಶೆಟ್ಟಿ ಚುನಾವಣಾ ಕಾರ್ಯಗಳ ಬಗ್ಗೆ ಚರ್ಚೆ ನಡೆಸಿದರು. ಪ್ರಮುಖರಾದ ಜಿಲ್ಲಾ ಉಪಾಧ್ಯಕ್ಷ ಗುರ್ಮೆ ಸುರೇಶ ಶೆಟ್ಟಿ,ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಸುವರ್ಣ, ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಬಿ.ರವಿ ಅಮೀನ್,ಸಂಧ್ಯಾ ರಮೇಶ್,ಮನೋಹರ ಎಸ್.ಕಲ್ಮಾಡಿ,ಶ್ರೀಶ ನಾಯಕ್, ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು,ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ಕಿರಣ್ ಕುಮಾರ್ ಕೊಡ್ಗಿ,ರಾಘವೇಂದ್ರ ಕಿಣಿ, ಪ್ರಭಾಕರ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.