Advertisement

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

11:55 AM Apr 23, 2024 | Team Udayavani |

ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯ ಪ್ರಯುಕ್ತ ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿಯಿಂದ ಸಾರ್ವಜನಿಕ ಸಭೆ ಏ.23ರ ಸಂಜೆ 5.30ಕ್ಕೆ ಬ್ರಹ್ಮಾವರ ಬಸ್‌ ಸ್ಟಾಂಡ್‌ ಬಳಿ (ಬಂಟರ ಭವನ ಎದುರು) ನಡೆಯಲಿದೆ.

Advertisement

ಇದನ್ನೂ ಓದಿ:Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

ಮಾಜಿ ಸಚಿವ ಕೆ.ಆರ್‌. ರಮೇಶ್‌ ಕುಮಾರ್‌, ಕೆ.ಪಿ.ಸಿ.ಸಿ. ವಕ್ತಾರರಾದ ತೇಜಸ್ವಿನಿ ರಮೇಶ್‌, ಸುದೀರ್‌ ಕುಮಾರ್‌ ಮುರೋಳ್ಳಿ ಪ್ರಧಾನ ಭಾಷಣ ಮಾಡಲಿದ್ದಾರೆ. ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಕೆ.ಪಿ.ಸಿ.ಸಿ. ಪ್ರಚಾರ ಸಮಿತಿ ಅಧ್ಯಕ್ಷ ವಿನಯ ಕುಮಾರ್‌ ಸೊರಕೆ, ಮಾಜಿ ಶಾಸಕ ಗೋಪಾಲ್‌ ಪೂಜಾರಿ , ಕೆ.ಪಿ.ಸಿ.ಸಿ ಉಪಾಧ್ಯಕ್ಷ ಎಂ.ಎ. ಗಫೂರ್‌, ಉಡುಪಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಅಶೋಕ್‌ ಕುಮಾರ್‌ ಕೊಡವೂರು, ಪಕ್ಷದ ಮುಖಂಡ ಪ್ರಸಾದ್‌ರಾಜ್‌ ಕಾಂಚನ್‌, ಉಡುಪಿ ಜಿಲ್ಲಾ ಕಾಂಗ್ರೆಸ್‌ ಕಾರ್ಯಾಧ್ಯಕ್ಷ ಕಿಶನ್‌ ಹೆಗ್ಡೆ ಕೊಳ್ಳೆಬೈಲು, ಕೆ.ಪಿ.ಸಿ. ಸಿ ಸದಸ್ಯೆ ವೆರೋನಿಕಾ ಕರ್ನೇಲಿಯೋ ಹಾಗೂ ಮತ್ತಿತರರು ಉಪಸ್ಥಿತ ರಿರುವರು ಎಂದು ಪ್ರಕಟನೆ ತಿಳಿಸಿದೆ.

ಮಲ್ಪೆಯಲ್ಲಿ ಇಂದು ಬೃಹತ್‌ ಸಾರ್ವಜನಿಕ ಸಭೆ
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯ ಪ್ರಯುಕ್ತ ಕಾಂಗ್ರೆಸ್‌ ಸಮಿತಿಯಿಂದ ಬೃಹತ್‌ ಸಾರ್ವಜನಿಕ ಸಭೆಯನ್ನು ಏ.23ರ ಸಂಜೆ 6ಕ್ಕೆ ಮಲ್ಪೆ ಕಡಲ ಕಿನಾರೆಯ ಸೀವಾಕ್‌ನಲ್ಲಿ ಹಮ್ಮಿಕೊಳ್ಳಲಾಗಿದೆ. ಕಾಂಗ್ರೆಸ್‌ನ ಸಮಸ್ತ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖೆಯಲ್ಲಿ ಭಾಗವಹಿಸುವಂತೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next