Advertisement

ಉಡುಪಿ: ಮಟ್ಕಾ-ಜುಗಾರಿಗೆ ಹಣ ಸಂಗ್ರಹ: ಓರ್ವ ವಶಕ್ಕೆ

08:15 PM Sep 15, 2022 | Team Udayavani |

ಉಡುಪಿ: ಇಂದ್ರಾಳಿ ರೈಲ್ವೆ ಸ್ಟೇಶನ್‌ ರಸ್ತೆಯಲ್ಲಿ ಮಟ್ಕಾ ಜುಗಾರಿ ಆಟಕ್ಕೆ ಹಣ ಸಂಗ್ರಹಿಸುತ್ತಿದ್ದ ಕಲೀಮ್ಖಾನ್‌ನನ್ನು ಉಡುಪಿ ನಗರ ಪೊಲೀಸರು ಗುರುವಾರ ವಶಕ್ಕೆ ಪಡೆದುಕೊಂಡಿದ್ದಾರೆ.

Advertisement

ಈತ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ಆಟಕ್ಕಾಗಿ ಹಣ ಸಂಗ್ರಹಿಸುತ್ತಿದ್ದ. ಈ ಬಗ್ಗೆ ಖಚಿತ ಮಾಹಿತಿ ದೊರೆತ ಮೇರೆಗೆ ನ್ಯಾಯಾಲಯದಿಂದ ಅನುಮತಿ ಪಡೆದು ಸಿಬಂದಿಯವರೊಂದಿಗೆ ನಗರಠಾಣೆಯ ಇನ್‌ಸ್ಪೆಕ್ಟರ್‌ ಪ್ರಮೋದ್‌ ಕುಮಾರ್‌ ಅವರು ದಾಳಿ ನಡೆಸಿ ಆತನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ತಾನು ಕಮಿಷನ್‌ ಹಣಕೋಸ್ಕರ ಸಾರ್ವಜನಿಕರಿಂದ ಮಟ್ಕಾ ಜುಗಾರಿ ಆಟದ ಬಗ್ಗೆ ಹಣ ಸಂಗ್ರಹಿಸುತ್ತಿದ್ದು, ಆ ಹಣವನ್ನು 2ನೇ ಆರೋಪಿ ಲಿಯೋ ಕರ್ನೇಲಿಯೋ ಎಂಬವರಿಗೆ ನೀಡುತ್ತಿರುವುದಾಗಿ ತಿಳಿಸಿದ್ದಾನೆ. ಆತನಿಂದ ಮಟ್ಕಾ ಜುಗಾರಿ ಆಟಕ್ಕೆ ಸಂಗ್ರಹಿಸಿದ 510ರೂ.ನಗದು, ಮೊಬೈಲ್‌ ಫೋನ್‌, ಕಾರು ವಶಕ್ಕೆ ತೆಗೆದುಕೊಳ್ಳಲಾಗಿದೆ. ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next