Advertisement
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಘಟನೆಗೆ ಸಂಬಂಧಪಟ್ಟಂತೆ ಯಾವುದೇ ವಿಡಿಯೋ ನಮಗೆ ಸಿಕ್ಕಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ಕೂಡಾ ನಮ್ಮ ಗಮನಕ್ಕೆ ಬಂದಿಲ್ಲ. ಹೀಗಾಗಿ ಸಾರ್ವಜನಿಕರು ಊಹಾಪೋಹದ ಮಾಹಿತಿಗಳನ್ನು ನಂಬಬಾರದು ಎಂದಿದ್ದಾರೆ.
Related Articles
Advertisement
ಘಟನೆಯ ಬಗ್ಗೆ ಯಾವುದೇ ದೂರು ನೀಡಲಾಗಿಲ್ಲ. ನಾವು ಸುಮೋಟೋ ಕೇಸು ದಾಖಲಿಸಲು ಸಾಮಾಜಿಕ ಜಾಲತಾಣದಿಂದ ಯಾವುದೇ ಸಾಕ್ಷಿ ದಾಖಲೆಗಳು ಸಿಕ್ಕಿಲ್ಲ. ಮೊಬೈಲ್ ಪರಿಶೀಲನೆ ಮಾಡಲಾಗಿದೆ, ಅದರಲ್ಲಿಯೂ ಏನೂ ಸಿಕ್ಕಿಲ್ಲ ಎಂದು ಸ್ಪಷ್ಟನೆ ನೀಡಿದರು.
ಟ್ವೀಟ್ ವಿಚಾರಕ್ಕೆ ಮಾತನಾಡಿದ ಎಸ್ ಪಿ, ಟ್ವೀಟ್ ಮಾಡಿದವರು ಘಟನೆಯ ಸತ್ಯಾಸತ್ಯತೆಯ ಬಗ್ಗೆ ತಿಳಿದುಕೊಳ್ಳಬೇಕಿತ್ತು. ಅವರನ್ನು ಪೊಲೀಸರು ಸಂಪರ್ಕಿಸಿದ್ದು ಘಟನೆಯ ಮಾಹಿತಿ ನೀಡಲು ಹೊರತು ತೊಂದರೆ ಕೊಡಲು ಅಲ್ಲ ಎಂದರು.
ಸಾರ್ವಜನಿಕರಿಗೆ ಮನವಿ: ಜನರಿಗೆ ಮನವಿ ಮಾಡುತ್ತೇವೆ. ಸಾಮಾಜಿಕ ಜಾಲತಾಣಗಳಲ್ಲಿ ಬೇಡದ ವಿಚಾರಗಳನ್ನು ಈ ವಿಷಯಕ್ಕೆ ಲಿಂಕ್ ಮಾಡಿ ಜನರ ಮನಸ್ಸಿನಲ್ಲಿ ಆತಂಕ ಸೃಷ್ಟಿ ಮಾಡುವ ಅಥವಾ ಗೊಂದಲವುಂಟು ಮಾಡುವ ಪೋಸ್ಟ್ ಹಾಕಬೇಡಿ. ಏನಾದರೂ ಖಚಿತ ಮಾಹಿತಿ ಸಿಕ್ಕಿದರೆ ಶೇರ್ ಮಾಡುವ ಮೊದಲು ನಮಗೆ ತಿಳಿಸಿ. ಕಾನೂನು ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತೇವೆ. ವದಂತಿ ಹರಡಬೇಡ ಎಂದು ಎಸ್ ಪಿ ಮನವಿ ಮಾಡಿದರು.