Advertisement

Udupi; ಬಂಧನಕ್ಕೆ ಹೆದರಿ ಕೀಟನಾಶಕ ಸೇವನೆ; ಪೊಲೀಸ್ ವಾಹನದಲ್ಲೇ ಅಸ್ವಸ್ಥನಾದ ಆರೋಪಿ

12:36 PM Aug 25, 2023 | Team Udayavani |

ಉಡುಪಿ: ಕ್ರಿಮಿನಲ್ ಪ್ರಕರಣದಲ್ಲಿ ನ್ಯಾಯಾಲಯದ ವಾರಂಟ್ ಆದೇಶದಂತೆ ಬಂಧಿಸಲು ಬಂದ ಸಂದರ್ಭದಲ್ಲಿ ಆರೋಪಿ ಕೀಟನಾಶಕ ಸೇವಿಸಿ ಅಸ್ವಸ್ಥನಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿಯಲ್ಲಿ ನಡೆದಿದೆ.

Advertisement

ಬಜಪೆ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ2017 ರಲ್ಲಿ ನಡೆದ ಅಪರಾಧ ಪ್ರಕರಣವೊಂದರ ಆರೋಪಿಯಾಗಿದ್ದ ಮಂಗಳೂರಿನ ಮುಚ್ಚೂರು ಗ್ರಾಮದ ಕರುಣಾಕರ ಶೆಟ್ಟಿ (44) ಎಂಬವರ ವಿರುದ್ದ ವಾರಂಟ್ ಕಾರ್ಯಗತಗೊಳಿಸುವಂತೆ ನ್ಯಾಯಲಯದ ಆದೇಶ ನೀಡಿತ್ತು.

ಕರುಣಾಕರ ಶೆಟ್ಟಿ ಉಡುಪಿಯಲ್ಲಿರುವ ಬಾರೊಂದರಲ್ಲಿ ಕೆಲಸ ಮಾಡಿಕೊಂಡಿರುವ ಬಗೆಗಿನ ಖಚಿತ ಮಾಹಿತಿಯ ಮೇರೆಗೆ ಬಜಪೆ ಪೊಲೀಸ್ ಠಾಣಾ ಉಪನಿರೀಕ್ಷಕರಾದ ಗುರುಪ್ಪ ಕಾಂತಿ ಮತ್ತು ಸಿಬ್ಬಂದಿಗಳು ಆ. 24 ರಂದು ಸಂಜೆ ವಾರಂಟ್ ಆದೇಶ ಕಾರ್ಯಗತಗೊಳಿಸಿ ಉಡುಪಿಗೆ ಆಗಮಿಸಿದ್ದರು. ಆರೋಪಿಯನ್ನು ವಶಕ್ಕೆ ಪಡೆಯುವ ಉದ್ದೇಶದಿಂದ ಆತ ಕೆಲಸ ಮಾಡಿಕೊಂಡಿರುವ ಬಾರ್ ಗೆ ಬಂದಿದ್ದರು.

ಇದನ್ನೂ ಓದಿ:Sandalwood: ಲೈಕಾ ಪ್ರೊಡಕ್ಷನ್ ಅಡಿಯಲ್ಲಿ ನಿಖಿಲ್ ಹೊಸಚಿತ್ರ

ಪೊಲೀಸರು ವಶಕ್ಕೆ ಪಡೆಯುವ ಸಮಯ ತಾನು ಬಟ್ಟೆ ಹಾಕಿಕೊಂಡು ಬರುವುದಾಗಿ ಬಾರ್‌ ನ ಮೇಲೆ ಇರುವ ರೂಮಿನೊಳಗೆ ಹೋದ ಕರುಣಾಕರ ಯಾವುದೋ ಕೀಟನಾಶಕ ಸೇವನೆ ಮಾಡಿದ್ದಾನೆ. ಪರಿಣಾಮ ವಾಹನದಲ್ಲಿ ಪ್ರಯಾಣಿಸುವಾಗ ಮಾರ್ಗ ಮಧ್ಯೆ ಅಸ್ವಸ್ಥಗೊಂಡಿದ್ದು, ಬಜಪೆ ಪೊಲೀಸ್ ಠಾಣಾ ಉಪನಿರೀಕ್ಷಕರು ಮೂಲ್ಕಿ ಸಮುದಾಯ ಆರೋಗ್ಯ ಕೇಂದ್ರ ದಲ್ಲಿ ಚಿಕಿತ್ಸೆ ಕೊಡಿಸಿ ಅನಂತರ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿದ್ದಾರೆ.

Advertisement

ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next