Advertisement

ಉಡುಪಿ: ಅಪಘಾತ ನಡೆಸಿದ್ದ ಬೈಕ್‌ ಸವಾರನಿಗೆ ಶಿಕ್ಷೆ

12:25 AM Jan 10, 2023 | Team Udayavani |

ಉಡುಪಿ: ಅತೀವೇಗ ಹಾಗೂ ಅಜಾಗರೂಕತೆಯಿಂದ ಬೈಕ್‌ ಚಲಾಯಿಸಿ, ಪಾದಚಾರಿಯ ಸಾವಿಗೆ ಕಾರಣವಾದ ಆರೋಪಿಗೆ ನಗರದ ಪ್ರಧಾನ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ.

Advertisement

2018ರ ಮೇ 28ರಂದು ದೀಪ್‌ರಾಜ್‌ ನಾಯ್ಕ ಕೊಕ್ಕರ್ಣೆಯಿಂದ ಮುದ್ದೂರು ಕಡೆಗೆ ಹೋಗುವಾಗ ತನ್ನ ಬೈಕನ್ನು ಅತೀವೇಗ ಹಾಗೂ ಅಜಾಕರೂಕತೆಯಿಂದ ಚಲಾಯಿಸಿ, ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಾಕು ಪೂಜಾರ್ತಿ ಅವರಿಗೆ ಹಿಂಬದಿಯಿದ ಢಿಕ್ಕಿ ಹೊಡೆಸಿದ್ದ. ಪರಿಣಾಮ, ಅವರು ರಸ್ತೆಗೆ ಬಿದ್ದು ಹಣೆಗೆ ತೀವ್ರ ಸ್ವರೂಪದ ಗಾಯವಾಗಿ ಮೃತಪಟ್ಟಿದ್ದರು.

ಹೆಬ್ರಿ ಪೊಲೀಸ್‌ ಠಾಣೆ ಉಪನಿರೀಕ್ಷಕರು ಪ್ರಕರಣ ದಾಖಲಿಸಿಕೊಂಡು ಆರೋಪಿಯ ವಿರುದ್ಧ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನಗರದ ಪ್ರಧಾನ ಸಿ.ಜೆ. ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯದ ನ್ಯಾಯಾಧೀಶೆ ದೀಪಾ ಅವರು ಆರೋಪಿ ದೀಪ್‌ರಾಜ್‌ ನಾಯ್ಕಗೆ 6 ತಿಂಗಳ ಸಾದಾ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಸರಕಾರದ ಪರ ಹಿರಿಯ ಸಹಾಯಕ ಸರಕಾರಿ ಅಭಿಯೋಜಕಿ ಜಯಂತಿ ಕೆ. ವಾದಿಸಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next