Advertisement

ಉಡುಪಿ ಜಿಲ್ಲೆಯಲ್ಲಿ 182 ಹೊಸ ಕೋವಿಡ್ ಪಾಸಿಟಿವ್ ಪ್ರಕರಣ

07:50 PM Jul 25, 2020 | sudhir |

ಉಡುಪಿ : ಜಿಲ್ಲೆಯಲ್ಲಿ ಇಂದು 182 ಹೊಸ ಕೋವಿಡ್ ಸೋಂಕಿನ ಪ್ರಕರಣಗಳು ದೃಢಪಟ್ಟಿವೆ. ದಿನಂಪ್ರತಿ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು ಇಂದಿನ 182 ಹೊಸ ಪ್ರಕರಣಗಳು ಸೇರಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3218ಕ್ಕೆ ಏರಿಕೆಯಾಗಿದೆ.

Advertisement

ಇಂದು ಕುಂದಾಪುರ, ಉಡುಪಿ, ಕಾರ್ಕಳಕ್ಕೆ ಸೇರಿದವರಾಗಿದ್ದಾರೆ, ಸೋಂಕಿತರಲ್ಲಿ 109 ಮಂದಿ ಪುರುಷರು, 68 ಮಂದಿ ಮಹಿಳೆಯರು ಹಾಗೂ ಇಬ್ಬರು ಗಂಡು ಮಕ್ಕಳು ಹಾಗೂ ಮೂವರು ಹೆಣ್ಣು ಮಕ್ಕಳು ಸೇರಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಮೂರು ಸಾವಿರದ ಗಡಿ ದಾಟಿದ್ದು, ಗುಣಮುಖರಾದವರ ಸಂಖ್ಯೆಯು ಏರಿಕೆಯಾಗುತ್ತಿದೆ ಎನ್ನುವುದು ಸಮಾಧಾನದ ವಿಚಾರ.

Advertisement

Udayavani is now on Telegram. Click here to join our channel and stay updated with the latest news.

Next