Advertisement

ಉಡುಪಿ ಜಿಲ್ಲೆಯಲ್ಲಿ ಕೋವಿಡ್ ಪಾಸಿಟವ್‌ ಪ್ರಮಾಣ ಇಳಿಕೆ : ಇಂದು 204 ಪ್ರಕರಣ ದಾಖಲು

07:22 PM Jun 08, 2021 | Team Udayavani |

ಉಡುಪಿ: ಜಿಲ್ಲೆಯಲ್ಲಿ ಮಂಗಳವಾರ 204 ಕೊರೊನಾ ಪಾಸಿಟಿವ್‌ ಪ್ರಕರಣ ದಾಖಲಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಇಬ್ಬರು ಮೃತಪಟ್ಟಿದ್ದು, ಕೋವಿಡ್‌ ಸಕ್ರಿಯ ಪ್ರಕರಣ 3,783ಕ್ಕೆ ಇಳಿಕೆಯಾಗಿದೆ.

Advertisement

ಜಿಲ್ಲೆಯಲ್ಲಿ 23,75 ವರ್ಷದ ಇಬ್ಬರು ವ್ಯಕ್ತಿಗಳು ಮೃತಪಟ್ಟಿದ್ದು ಮೃತರ ಸಂಖ್ಯೆ 348ಕ್ಕೆ ಏರಿಕೆಯಾಗಿದೆ. ಉಡುಪಿಯಲ್ಲಿ 95, ಕುಂದಾಪುರದಲ್ಲಿ49, ಕಾರ್ಕಳದಲ್ಲಿ 51, ಅನ್ಯಜಿಲ್ಲೆಯ 9 ಮಂದಿಗೆ ಸೋಂಕು ದೃಢಪಟ್ಟಿದೆ. ಗುಣಮುಖರಾಗಿ ಆಸ್ಪತ್ರೆಯಿಂದ 509 ಮಂದಿ ಬಿಡುಗಡೆಯಾಗಿದ್ದು, ಇಲ್ಲಿಯವರೆಗೆ ಒಟ್ಟು 62,883ಪಾಸಿಟಿವ್‌ ಪ್ರಕರಣ ದಾಖಲಾಗಿದೆ.

ಜೂ.7ರಂದು 2,616 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ.9,963 ಮಂದಿ ಮೊದಲ ಹಾಗೂ 602 ಮಂದಿ ಎರಡನೇ ಡೋಸ್‌ ಲಸಿಕೆ ಪಡೆದುಕೊಂಡರು.

ಇದನ್ನೂ ಓದಿ :ರಾಜ್ಯದಲ್ಲಿ ಕೈಗಾರಿಕೆ ನಡೆಸುವ ಕುರಿತು ನಾಳೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ : ಶೆಟ್ಟರ್

Advertisement

Udayavani is now on Telegram. Click here to join our channel and stay updated with the latest news.

Next