Advertisement

ಉಡುಪಿ ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ 82 ವರ್ಷದ ವೃದ್ಧ ಬಲಿ

09:06 PM Jul 14, 2020 | sudhir |

ಉಡುಪಿ : ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ 82 ವರ್ಷ ಪ್ರಾಯದ ವೃದ್ಧರೊಬ್ಬರು ಸಾವನ್ನಪಿದ್ದಾರೆ, ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.

Advertisement

ಪಡುಬಿದ್ರಿ ನಿವಾಸಿಯಾದ 82 ವರ್ಷದ ವ್ಯಕ್ತಿಯು ಕಳೆದ ನಾಲ್ಕೈದು ದಿನಗಳ ಹಿಂದೆ ಉಸಿರಾಟದ ಸಮಸ್ಯೆ ಜೊತೆಗೆ ಕಿಡ್ನಿ, ಶ್ವಾಶಕೋಶದ ಸಮಸ್ಯೆಯಿಂದ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಈ ಸಂದರ್ಭ ಅವರ ಗಂಟಲು ದ್ರವ ಪರೀಕ್ಷೆಗೆ ಕಳುಹಿಸಲಾಗಿತ್ತು ಆದರೆ ಅವರು ಸೋಮವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಇಂದು ಅವರ ಪರೀಕ್ಷಾ ವರದಿಯಲ್ಲಿ ಕೋವಿಡ್ ಸೋಂಕಿರುವುದು ದೃಢಪಟ್ಟಿದ್ದು ಅರೋಗ್ಯ ಇಲಾಖೆಯ ಸಿಬ್ಬಂದಿಗಳು ಮೃತರ ಅಂತ್ಯ ಸಂಸ್ಕಾರ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next