Advertisement

ಉಡುಪಿ: ಪೋಷಕರಲ್ಲಿ ಅಪಹರಣದ ನಾಟಕವಾಡಿ 5 ಲಕ್ಷಕ್ಕೆ ಬೇಡಿಕೆ ಇಟ್ಟ ಮಗ: ಕೊನೆಗೆ ಆಗಿದ್ದೇ ಬೇರೆ

06:17 PM Jun 28, 2022 | Team Udayavani |

ಉಡುಪಿ : ಉಡುಪಿ : ಪೋಷಕರಲ್ಲಿ ಅಪಹರಣದ ನಾಟಕವಾಡಿ 5 ಲಕ್ಷಕ್ಕೆ ಬೇಡಿಕೆ ಇಟ್ಟ ಮಗನ ನಿಜ ರೂಪ ಕಂಡು ಪೋಷಕರು ಮತ್ತು ಆತನನ್ನು ಹುಡುಕಲು ಹೋದ ಪೊಲೀಸರು ದಂಗಾದ ಘಟನೆ ನಡೆದಿದೆ.

Advertisement

ವರುಣ್ ನಾಯಕ್ (25) ಅಪಹರಣ ನಾಟಕವಾಡಿದ ಯುವಕ.

ಘಟನೆ ವಿವರ : ಜೂನ್ 26 ರಂದು ಮುಂಜಾನೆ ಮೂರು ಗಂಟೆ ಸುಮಾರಿಗೆ ವರುಣ್ ತನ್ನ ತಂದೆ ತಾಯಿಗೆ ತನ್ನದೇ ಮೊಬೈಲ್ ನಂಬರ್ ನಿಂದ ಕರೆ ಮಾಡಿ ತನ್ನನ್ನು ಯಾರೋ ಅಪಹರಿಸಿದ್ದಾರೆ, ಅಲ್ಲದೆ ಐದು ಲಕ್ಷ ಕೊಡುವಂತೆ ಬೇಡಿಕೆ ಇಟ್ಟಿದ್ದಾರೆ ಎಂದು ಪೋಷಕರಲ್ಲಿ ಗಾಬರಿಯಲ್ಲಿ ಹೇಳಿಕೊಂಡಿದ್ದಾನೆ, ಇದರಿಂದ ಭಯ ಭೀತರಾದ ಪೋಷಕರು ಉಡುಪಿ ನಗರ ಠಾಣೆಯಲ್ಲಿ ಮಗನ ಅಪಹರಣ ಕುರಿತು ದೂರು ನೀಡಿದ್ದಾರೆ.

ದೂರು ದಾಖಲಿಸಿಕೊಂಡ ನಗರ ಠಾಣೆ ಪೊಲೀಸ್ ಅಧಿಕಾರಿಗಳು ಮೇಲಾಧಿಕಾರಿಗಳ ಸೂಚನೆಯಂತೆ ಯುವಕನ ಪತ್ತೆಗೆ ವಿಶೇಷ ತಂಡವನ್ನು ರಚಿಸಿ ಯುವಕನ ಮೊಬೈಲ್ ಲೊಕೇಷನ್ ಪತ್ತೆ ಮಾಡುವಾಗ ಅದು ಗೋವಾದಲ್ಲಿರುವುದು ಗೊತ್ತಾಗಿದೆ ಕೂಡಲೇ ಗೋವಾಕ್ಕೆ ಇಬ್ಬರು ಸಿಬ್ಬಂದಿಗಳನ್ನು ಕಳುಹಿಸಿಕೊಡಲಾಯಿತು, ಈ ವೇಳೆ ಮೊಬೈಲ್ ಲೊಕೇಷನ್ ಪರಿಶೀಸಿ ಆ ಸ್ಥಳಕ್ಕೆ ಹೋದಾಗ ಪೊಲೀಸರಿಗೆ ಶಾಕ್ ಆಗಿತ್ತು, ಆದರೆ ಅಪಹರಣಕ್ಕೊಳಗಾಗಿದ್ದೇನೆ ಎಂದಿದ್ದ ಯುವಕ ತನ್ನ ಗೆಳೆಯರೊಂದಿಗೆ ಗೋವಾದ ಕ್ಯಾಸಿನೋ ಒಂದರಲ್ಲಿ ಮೋಜು ಮಸ್ತಿಯಲ್ಲಿ ತೊಡಗಿದ್ದ.

ಇದನ್ನೂ ಓದಿ : ಸದ್ಯಕ್ಕೆ ವಿದ್ಯುತ್ ದರ ಹೆಚ್ಚಳವಿಲ್ಲ: ಸಚಿವ ಸುನಿಲ್ ಕುಮಾರ್ ಸ್ಪಷ್ಟನೆ

Advertisement

ಬಳಿಕ ಪೊಲೀಸರು ಯುವಕನನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದು ವಿಚಾರಿಸಿದಾಗ ತಾನು ವಿದ್ಯಾಭ್ಯಾಸವನ್ನು ಅರ್ಧಕ್ಕೆ ನಿಲ್ಲಿಸಿ, ಸರಿಯಾದ ಕೆಲಸವಿಲ್ಲದೆ ತನ್ನ ಗೆಳೆಯರೊಂದಿಗೆ ಮೋಜು ಮಸ್ತಿ ಮಾಡಲು ಕೈಯಲ್ಲಿ ಹಣವಿಲ್ಲದಿದ್ದಾಗ ತಲೆಗೆ ಬಂದಿದ್ದು ತನ್ನ ಪೋಷಕರ ಬಳಿ ಇರುವ ಹಣವನ್ನು ಹೇಗಾದರೂ ಮಾಡಿ ಲಪಟಾಯಿಸುವ ಉದ್ದೇಶದಿಂದ ನಾನು ಅಪಹರಣದ ನಾಟಕವಾಡಿ ನನ್ನದೇ ಮೊಬೈಲ್ ನಿಂದ ತಾಯಿಗೆ ಕರೆ ಮಾಡಿ ನನ್ನನ್ನು ಯಾರೋ ಅಪಹರಿಸಿದ್ದಾರೆ ಅವರು ಐದು ಲಕ್ಷಕ್ಕೆ ಬೇಡಿಕೆ ಇಟ್ಟಿದ್ದಾರೆ ಅಲ್ಲದೆ ಹಣ ನೀಡದಿದ್ದಲ್ಲಿ ನನ್ನನ್ನು ಕೊಲೆ ಮಾಡುತ್ತಾರೆ ಎಂದು ಅಳುತ್ತಾ ಹೇಳಿದೆ ಎಂದು ತನ್ನ ತಪ್ಪನ್ನು ಪೊಲೀಸರ ಬಳಿ ಒಪ್ಪಿಕೊಂಡಿದ್ದಾನೆ.

ಪೋಷಕರ ಹಣ ಎಗರಿಸುವ ಉದ್ದೇಶ ಹಾಗೂ ಪೊಲೀಸರ ಸಮಯವನ್ನು ವ್ಯರ್ಥಪಡಿಸಿದ ಹಿನ್ನೆಲೆಯಲ್ಲಿ ಪೊಲೀಸರು ಯುವಕನ ವಿರುದ್ಧ ಕ್ರಮ ಕೈಗೊಂಡಿದ್ದು ಯುವಕನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯ ಯುವಕನಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next