Advertisement
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಯ ವಿವಿಧ ಸಭೆಗಳ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಮಹಿಳೆ ಮತ್ತು ಮಕ್ಕಳ ರಕ್ಷಣೆಗೆ ಸರಕಾರ ಅನೇಕ ಕಾನೂನು ಹಾಗೂ ಅವರ ಕಲ್ಯಾಣಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಇವುಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ನಿರ್ದೇಶಿಸಿದರು.
ಶಾಲೆಗಳಲ್ಲಿ ಪೋಕ್ಸೋ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕುರಿತು ಜಾಗೃತಿ ಮೂಡಿಸಬೇಕು. ಮಾತೃ ವಂದನ ಯೋಜನೆಯ ಬಗ್ಗೆ ಗರ್ಭಿಣಿಯವರಿಗೆ ಅಂಗನವಾಡಿಗಳ ಮೂಲಕ ಮಾಹಿತಿ ನೀಡಿ, ಅರ್ಹರಿಗೆ ಯೋಜನೆಯ ಫಲ ಸಿಗುವಂತೆ ಮಾಡಬೇಕು ಎಂದರು. ಜಿ. ಪಂ. ಸಿಇಒ ಪ್ರಸನ್ನ ಎಚ್., ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್., ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ., ಡಿವೈಎಸ್‌ಪಿ ದಿನಕರ್ ಪಿ.ಕೆ., ತಾಲೂಕುಗಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು, ಸ್ವಯಂಸೇವಾ ಸಂಸ್ಥೆಯ ಮುಖ್ಯಸ್ಥರು ಉಪಸ್ಥಿತರಿದ್ದರು.
Related Articles
ದೇವಸ್ಥಾನಗಳಲ್ಲಿ ಮದುವೆ ಏರ್ಪಡಿಸುವ ಸಂದರ್ಭದಲ್ಲಿ ಬಾಲ್ಯ ವಿವಾಹದ ಅನುಮಾನ ಬಂದಲ್ಲಿ ಅರ್ಚಕರು ವಧು-ವರರ ಜನನ ಪ್ರಮಾಣ ಪತ್ರ ಪರಿಶೀಲಿಸಿ ಮದುವೆ ನಡೆಸಬೇಕು. ಇಲ್ಲವಾದಲ್ಲಿ ಅರ್ಚಕರನ್ನು ಶಿಕ್ಷೆಗೆ ಒಳಪಡಿಸಲಾಗುವುದು. ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಈ ಕುರಿತು ನಿಗಾ ವಹಿಸಬೇಕು. ಇಲ್ಲವಾದರೆ ಅವರನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುವುದು. ಬಾಲ್ಯ ವಿವಾಹ ಸಂಬಂಧ ಗ್ರಾ.ಪಂ.ಗಳಲ್ಲಿ ಆಗಾಗ್ಗೆ ಸಭೆ ನಡೆಸಬೇಕು. ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ, ಬಾಲ್ಯ ವಿವಾಹ ತಡೆಗಟ್ಟುವ ಕುರಿತು ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ| ವಿದ್ಯಾ ಕುಮಾರಿ ಸೂಚಿಸಿದರು.
Advertisement