Advertisement
ಕಡಿಯಾಳಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಡಾ| ಕಟ್ಟೆ ರವಿರಾಜ ಆಚಾರ್ಯ, ಡಾ| ರಶ್ಮಿ ಆಚಾರ್ಯ ದಂಪತಿ ದಾಂಡಿಯಾ ನೃತ್ಯ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶಾಸಕ ಕೆ. ರಘುಪತಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ದೇಗುಲದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ನಾಗೇಶ್ ಹೆಗ್ಡೆ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಪುರುಷೊತ್ತಮ ಶೆಟ್ಟಿ, ಉಡುಪಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ಪ. ವಸಂತ ಭಟ್, ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ನಟ ರಮೇಶ್ ಅರವಿಂದ್, ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೆಬಲ್ ಸೊಸೈಟಿ ಅಧ್ಯಕ್ಷ ಎಚ್. ಎಸ್. ಶೆಟ್ಟಿ ಶುಭಹಾರೈಸಿದರು. ಶಿಲ್ಪಾ ರಘುಪತಿ ಭಟ್ ಉಪಸ್ಥಿತರಿದ್ದರು.
ಚಿತ್ರರಂಗದ ಪ್ರಸಿದ್ಧ ಕಲಾವಿದರು ಭಾಗವಹಿಸಿ ಮೆರುಗು ತಂದರು. ನೃತ್ಯದಲ್ಲಿ ಅತ್ಯುತ್ತಮ ಸಾಂಪ್ರದಾಯಿಕ ಉಡುಗೆ, ಅತ್ಯುತ್ತಮನೃತ್ಯ, ಅತ್ಯುತ್ತಮ ಜೋಡಿ ನೃತ್ಯಗಳಿಗೆ ಬಹುಮಾನ ನೀಡಲಾಯಿತು. ಮಹಿಳೆಯರು, ಪುರುಷರು ಮತ್ತು ಜೋಡಿ ನೃತ್ಯಕ್ಕೆ ಪ್ರತ್ಯೇಕವಾಗಿ ಅವಕಾಶ ಕಲ್ಪಿಸಲಾಗಿತ್ತು.