Advertisement

ಸೋಂಕಿತರ ಚಿಕಿತ್ಸೆಗೆ ಸಿದ್ಧರಾಗಿ: ಜಿಲ್ಲಾಧಿಕಾರಿ ಸೂಚನೆ

11:58 AM Jun 25, 2020 | sudhir |

ಉಡುಪಿ: ಕೋವಿಡ್‌-19 ಚಿಕಿತ್ಸೆ ನೀಡಲು ನೊಂದಾಯಿಸಿಕೊಂಡ ಖಾಸಗಿ ಆಸ್ಪತ್ರೆಗಳು ಕೋವಿಡ್ ಸೋಂಕಿತ ರೋಗಿಗಳಿಗೆ ಚಿಕಿತ್ಸೆ ನೀಡಲು ಅಗತ್ಯವಿರುವ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್‌ ತಿಳಿಸಿದರು.

Advertisement

ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೋವಿಡ್‌-19 ಚಿಕಿತ್ಸೆ ನೀಡಲು ನೊಂದಾಯಿಸಿರುವ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸೋಂಕಿತರಿಗೆ ಚಿಕಿತ್ಸೆ ನೀಡಲು ಆಯುಷ್ಮಾನ್‌ ಭಾರತ್‌ – ಆರೋಗ್ಯ ಕರ್ನಾಟಕ ಯೋಜನೆಯಡಿ ಜಿಲ್ಲೆಯ 19 ಖಾಸಗಿ ಆಸ್ಪತ್ರೆಗಳು ನೊಂದಾ ಯಿಸಿಕೊಂಡಿವೆ. ಸೋಂಕಿತರಿಗೆ ಚಿಕಿತ್ಸೆ ನೀಡಲು ಅಗತ್ಯವಿರುವ ಬೆಡ್‌ಗಳನ್ನು ಹಾಗೂ ಉಪಕರಣಗಳನ್ನು ಆಳವಡಿಸಿಕೊಳ್ಳಬೇಕು. ಯಾವುದೇ ಸಂದರ್ಭ ಸೋಂಕಿತರು ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆ ಇದೆ. ಆದರಿಂದ ಎಲ್ಲ ಆಸ್ಪತ್ರೆಗಳು ಸಿದ್ಧವಾಗಿರಬೇಕು. ರೋಗಿಗೆ ಚಿಕಿತ್ಸೆ ನಿರಾಕರಿಸುವಂತಿಲ್ಲ ಎಂದರು.

108 ಪ್ರಕರಣ ಸಕ್ರಿಯ
ಜಿಲ್ಲೆಯಲ್ಲಿ 108 ಪಾಸಿಟಿವ್‌ ಪ್ರಕರಣಗಳು ಸಕ್ರಿಯವಾಗಿದೆ. ಅವರಿಗೆ ಕುಂದಾಪುರ ಮತ್ತು ಕಾರ್ಕಳದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್‌ ಚಿಕಿತ್ಸೆಗೆ ಅಗತ್ಯವಿರುವ ಸೌಲಭ್ಯಗಳು ಇರುವ ಕುರಿತಂತೆ ಪರಿಶೀಲಿಸಲು ತಜ್ಞರ ಸಮಿತಿಯನ್ನು ರಚಿಸಿದೆ. ಈ ಸಮಿತಿಯು ಆಸ್ಪತ್ರೆಗಳಿಗೆ ಭೇಟಿ ನೀಡಿ, ಆಸ್ಪತ್ರೆಗಳಿಗೆ ಅಗತ್ಯ ಸಲಹೆ ಸೂಚನೆ ನೀಡಲಿದೆ ಎಂದು ತಿಳಿಸಿದರು.

ಮಾರ್ಗಸೂಚಿ
ನೊಂದಾಯಿತ ಎಲ್ಲ ಖಾಸಗಿ ಆಸ್ಪತ್ರೆಗಳಿಗೆ, ಸರಕಾರದ ಮಾರ್ಗಸೂಚಿ ಅನ್ವಯ ರೋಗಿಗಳ ದಾಖಲಾತಿ ಪ್ರಕ್ರಿಯೆ, ಚಿಕಿತ್ಸಾ ವಿಧಾನ ಹಾಗೂ ಮತ್ತಿತರ ಅಗತ್ಯ ಮಾಹಿತಿಗಳನ್ನು ನೀಡಲಾಗುತ್ತದೆ. ಖಾಸಗಿ ಆಸ್ಪತ್ರೆಯ ಸ್ವಚ್ಚತಾ ಸಿಬಂದಿ ಹಾಗೂ ಇತರರಿಗೆ ಸೂಕ್ತ ತರಬೇತಿ ನೀಡಲು ಕ್ರಮ ಕೈಗೊಳ್ಳಲಾಗಿದ್ದು, ಎಲ್ಲ ಖಾಸಗಿ ಆಸ್ಪತ್ರೆಗಳು ಜ್ವರ ಪರೀûಾ ಕೇಂದ್ರ ಮತ್ತು ಐಸೋಲೇಶನ್‌ ಕೇಂದ್ರ ಗಳನ್ನು ತೆರೆಯುವಂತೆ ಡಿಸಿ ಸೂಚಿಸಿದರು.
ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಡಿಎಚ್‌ಒ ಡಾ| ಸುಧೀರ್‌ ಚಂದ್ರ ಸೂಡ, ಜಿಲ್ಲಾ ಸರ್ಜನ್‌ ಡಾ| ಮಧುಸೂದನ ನಾಯಕ್‌, ಡಾ| ಸುರೇಂದ್ರ ಚಿಂಬಾಳ್ಕರ್‌, ಕೊವಿಡ್‌-19 ಜಿಲ್ಲಾ ನೋಡೆಲ್‌ ಅಧಿಕಾರಿ ಡಾ| ಪ್ರಶಾಂತ್‌ ಭಟ್‌ ಹಾಗೂ ಕೋವಿಡ್‌-19ಗೆ ಚಿಕಿತ್ಸೆ ನೀಡಲು ನೊಂದಾಯಿಸಿಕೊಂಡಿರುವ ಆಸ್ಪತ್ರೆಗಳು ಮುಖ್ಯಸ್ಥರು ಉಪಸ್ಥಿತರಿದ್ದರು.

Advertisement

ಅನುಮತಿ ದೊರೆತ ಆಸ್ಪತ್ರೆಗಳು
ಪ್ರಸ್ತುತ ಜಿಲ್ಲೆಯಲ್ಲಿ ಕುಂದಾಪುರದ ಶ್ರೀಮಾತಾ,ಚಿನ್ಮಯಿ, ವಿವೇಕ್‌, ಆದರ್ಶ, ಶ್ರೀದೇವಿ ಆಸ್ಪತ್ರೆ, ಶ್ರೀ ಮಂಜುನಾಥ ಆಸ್ಪತ್ರೆ, ಕಾರ್ಕಳ ನಿಟ್ಟೆ ಗಜ್ರಿಯಾ, ಸ್ಪಂದನಾ ಆಸ್ಪತ್ರೆ ಉಡುಪಿಯ ಆದರ್ಶ, ನ್ಯೂಸಿಟಿ, ಹೈಟೆಕ್‌ ಮೆಡಿಕೇರ್‌, ಸುನಾಗ್‌ ಆಥೋìಕೇರ್‌ ಅಂಡ್‌ ಮಲ್ಟಿ ಸ್ಪೆಶಾಲಿಟಿ, ಡಾ| ಎ.ವಿ ಬಾಳಿಗಾ ಆಸ್ಪತ್ರೆ, ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ, ಕೋಟೇಶ್ವರ ಡಾ| ಎನ್‌.ಆರ್‌. ಆಚಾರ್ಯ ಸ್ಮಾರಕ ಆಸ್ಪತ್ರೆ, ಸರ್ಜನ್ಸ್‌ ಆಸ್ಪತ್ರೆ, ಬ್ರಹ್ಮಾವರ ಮಹೇಶ್‌, ಪ್ರಣವ್‌ ಆಸ್ಪತ್ರೆಗಳಿಗೆ ಕೋವಿಡ್‌-19 ರೋಗಿಗಳ ಚಿಕಿತ್ಸೆ ನೀಡಲು ಅನುಮತಿ ದೊರಕಿದೆ. ಪ್ರಸ್ತುತ ಯಾವುದೇ ರೋಗಿಗಳು ಮೇಲಿನ ಆಸ್ಪತ್ರೆಗಳಲ್ಲಿ ದಾಖಲಾಗಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next