Advertisement
ಶುಕ್ರವಾರ ನಡೆದ ಕೋವಿಡ್ ನಿಯಂತ್ರಣ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕೋವಿಡ್ ನಿಯಂತ್ರಣಕ್ಕಾಗಿ ಈ ಹಿಂದೆ ರಚಿಸಲಾಗಿದ್ದ ಎಲ್ಲ ಸಮಿತಿಗಳನ್ನು ತತ್‌ಕ್ಷಣದಿಂದ ಬರುವಂತೆ ಪುನಃ ರಚಿಸಲಾಗಿದೆ ಎಂದರು.
ಸಾಮಾಜಿಕ ಅಂತರ ಪಾಲನೆ, ಮಾಸ್ಕ್ ಧರಿಸದವರ ವಿರುದ್ಧ ದಂಡ ವಿಧಿಸುವ ಅಧಿಕಾರವನ್ನು ನೀಡಿದ್ದರೂ ಹಲವು ಅಧಿಕಾರಿಗಳು ದಂಡ ವಿಧಿಸದಿರುವುದರ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿ ಕಾರ್ಯಾಚರಣೆಯನ್ನು ತೀವ್ರಗೊಳಿಸುವಂತೆ ಸೂಚನೆ ನೀಡಿದರು.
Related Articles
ಜಿಲ್ಲೆಯಲ್ಲಿ ಕೋವಿಡ್ 2ನೇ ಅಲೆಯನ್ನು ನಿಯಂತ್ರಿಸಲು ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತಂತೆ ಜಿಲ್ಲಾ ತಜ್ಞರ ಸಮಿತಿ ಸಭೆಯು ಜಿಲ್ಲಾಧಿಕಾರಿ ಜಿ.ಜಗದೀಶ್ ಅಧ್ಯಕ್ಷತೆಯಲ್ಲಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು.
Advertisement
ಕೋವಿಡ್ 2ನೇ ಅಲೆ ನಿಯಂತ್ರಿಸುವ ಕುರಿತಂತೆ ಹೆಚ್ಚಿನ ಸಂಖ್ಯೆಯಲ್ಲಿ ತಪಾಸಣೆ, ಪತ್ತೆ ಹಚ್ಚುವಿಕೆ, ಚಿಕಿತ್ಸೆ ನೀಡುವುದನ್ನು ಶೀಘ್ರವಾಗಿ ಕೈಗೊಳ್ಳಬೇಕು. ಹೃದಯ ಸಂಬಂಧಿ ರೋಗಿಗಳು, ಕಿಡ್ನಿ ಸಮಸ್ಯೆಯಿರುವವರು, ಕ್ಯಾನ್ಸರ್ ರೋಗಿಗಳು ಕೋವಿಡ್‌ನಿಂದ ಮರಣ ಹೊಂದುವುದು ಅಧಿಕವಾಗಿದ್ದು, ಇಂತಹ ರೋಗಿಗಳನ್ನು 15 ದಿನಗಳಿಗೊಮ್ಮೆ ನಿಯಮಿತವಾಗಿ ತಪಾಸಣೆ ಮಾಡುವುದರ ಮೂಲಕ ಬೇಗ ರೋಗ ಪತ್ತೆ ಹಚ್ಚಿ ಚಕಿತ್ಸೆ ನೀಡುವುದರಿಂದ ಸಾವು ಸಂಭವಿಸುವುದನ್ನು ತಪ್ಪಿಸಬಹುದಾಗಿದೆ ಎಂದು ತಜ್ಞರ ಸಮಿತಿ ತಿಳಿಸಿತು.
ಜಿ.ಪಂ. ಸಿಇಒ ಡಾ| ನವೀನ್ ಭಟ್, ಅಪರ ಜಿಲ್ಲಾದಿಕಾರಿ ಸದಾಶಿವ ಪ್ರಭು, ಉಪ ವಿಬಾಗಾಧಿಕಾರಿ ರಾಜು, ಜಿ.ಪಂ. ಉಪ ಕಾರ್ಯದರ್ಶಿ ಕಿರಣ್ ಪೆಡೆ°àಕರ್, ಡಿಎಚ್‌ಒ ಡಾ| ಸುಧೀರ್‌ಚಂದ್ರ ಸೂಡ, ಜಿಲ್ಲಾ ಕೋವಿಡ್ ನೋಡಲ್ ಅಧಿಕಾರಿ ಡಾ| ಪ್ರಶಾಂತ ಭಟ್, ಜಿಲ್ಲಾ ಸರ್ಜನ್ ಡಾ| ಮಧುಸೂದನ್ ನಾಯಕ್ ಉಪಸ್ಥಿತರಿದ್ದರು.
ಎಂಐಟಿ ಕ್ರಮ: ಪ್ರಧಾನಿ ಶ್ಲಾಘನೆಜಿಲ್ಲಾಧಿಕಾರಿ ಜಿ.ಜಗದೀಶ್ ಮಾತನಾಡಿ, ಎಂಐಟಿಯಲ್ಲಿ ಕಂಟೈನ್‌ಮೆಂಟ್ ವಲಯ ರಚಿಸಿ ಕೋವಿಡ್ ನಿಯಂತ್ರಣಕ್ಕೆ ತಂದ ಕ್ರಮದ ಕುರಿತು ಪ್ರಧಾನ ಮಂತ್ರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಎಲ್ಲ ಖಾಸಗಿ ಆಸ್ಪತ್ರೆಗಳು ಅಗತ್ಯ ಪ್ರಮಾಣದ ಬೆಡ್‌ಗಳನ್ನು ಕೋವಿಡ್ ರೋಗಿಗಳಿಗೆ ಮೀಸಲಿಡಬೇಕು. ತಮ್ಮಲ್ಲಿಗೆ ಬರುವ ಐಎಲ್‌ಐ ಮತ್ತು ಸಾರಿ ಪ್ರಕರಣಗಳ ಕುರಿತು ಮಾಹಿತಿ ನೀಡಬೇಕು. ಎಲ್ಲ ಖಾಸಗಿ ಸಂಸ್ಥೆಗಳು, ಮಾಲ್‌ಗಳು, ಶಿಕ್ಷಣ ಸಂಸ್ಥೆಗಳು, ಹೊಟೇಲ್ ಸಹಿತ ಎಲ್ಲಡೆ ಕೋವಿಡ್ ಪರೀಕ್ಷೆಗೆ ಸಹಕಾರ ನೀಡಬೇಕು ಎಂದರು.