Advertisement
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಕೋವಿಡ್-19 ಜಿಲ್ಲಾ ಪರಿಣಿತರ ಸಮಿತಿ ಸಭೆಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ 45 ವರ್ಷ ಮೇಲ್ಪಟ್ಟರಿಗೆ ಲಸಿಕೆ ನೀಡಲು 4,13,861 ಗುರಿ ಹೊಂದಿದ್ದು, ಇದುವರೆಗೆ 3,32,255 ಮಂದಿಗೆ ಪ್ರಥಮ ಡೋಸ್ ನೀಡಿ 80ಶೇ.ಸಾಧನೆ ಆಗಿದೆ. 1,69,499 ಮಂದಿಗೆ ಎರಡನೇ ಡೋಸ್ ನೀಡಿ, 41ಶೇ. ಸಾಧನೆ ಮಾಡಿದ್ದು, ಇದರಲ್ಲಿ ಇನ್ನೂ ಹೆಚ್ಚಿನ ಗುರಿ ಸಾಧಿಸುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಹಿರಿಯ ನಾಗರಿಕರು 100ಶೇ. ಸಂಪೂರ್ಣ ಎರಡೂ ಲಸಿಕೆ ಪಡೆಯುವಂತೆ ಕಾರ್ಯಕ್ರಮ ರೂಪಿಸಿ ಎಂದರು.
Related Articles
ಎಲ್ಲ ಖಾಸಗಿ ಅಸ್ಪತ್ರೆಗಳಲ್ಲಿ ಜ್ವರ, ಶೀತ, ಕೆಮ್ಮು ಲಕ್ಷಣಗಳನ್ನು ಹೊಂದಿರುವವರನ್ನು ಕಡ್ಡಾಯವಾಗಿ ಪರೀಕ್ಷೆಗೆ ಒಳಪಡಿಸಬೇಕು. ಜಿಲ್ಲೆಯಲ್ಲಿ ಪ್ರಸ್ತುತ ಕೋವಿಡ್ ಪರೀಕ್ಷೆಯನ್ನು ಹೆಚ್ಚುಗೊಳಿಸಲಾಗಿದ್ದು, ಸ್ವಾಬ್ ಸಂಗ್ರಹಿಸಿದ 24 ಗಂಟೆಯೊಳಗೆ ವರದಿ ನೀಡಲು ಕ್ರಮ ಕೈಗೊಳ್ಳಿ, ಲ್ಯಾಬ್‌ನಲ್ಲಿ ಪರೀಕ್ಷಾ ವರದಿ ನೀಡಲು ವಿಳಂಬವಾದಲ್ಲಿ ಪಕ್ಕದ ಜಿಲ್ಲೆಗಳಿಗೆ ಸ್ವಾಬ್ ಕಳುಹಿಸಿ ನಿಗದಿತ ಅವಧಿಯೊಳಗೆ ವರದಿ ಪಡೆಯುವಂತೆ ಹೇಳಿದರು.
Advertisement
ನಿರಂತರ ಸಂಪರ್ಕದಲ್ಲಿರಿಜಿಲ್ಲೆಯಲ್ಲಿ ಆಕ್ಸಿಜನ್ ಪ್ಲಾಂಟ್ ನಿರ್ಮಾಣ ಕಾಮಗಾರಿಗಳ ಕುರಿತು ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿಗಳು ಅದಷ್ಟು ಶೀಘ್ರದಲ್ಲಿ ಜಿಲ್ಲೆಗೆ ಮಂಜೂರಾಗಿರುವ ಎಲ್ಲ ಪ್ಲಾಂಟ್‌ಗಳ ಕಾಮಗಾರಿಗಳು ಮುಕ್ತಾಯಗೊಂಡು ಕಾರ್ಯನಿರ್ವಹಿಸುವ ಕುರಿತು ಸಂಬಂಧಪಟ್ಟ ಕಂಪೆನಿಗಳೊಂದಿಗೆ ನಿರಂತರ ಸಂಪರ್ಕದಲ್ಲಿರುವಂತೆ ತಿಳಿಸಿದರು. ಪರೀಕ್ಷೆ ಕಡ್ಡಾಯ
ಮಕ್ಕಳ ವಾರ್ಡ್‌ಗಳ ನಿರ್ಮಾಣ ಕುರಿತಂತೆ ಎಲ್ಲ ನಿರ್ಮಾಣ ಕಾಮಗಾರಿಗಳನ್ನು ತ್ವರಿತವಾಗಿ ಮುಕ್ತಾಯಗೊಳಿಸಿ ಸರಕಾರ ಮತ್ತು ವಿವಿಧ ದಾನಿಗಳು ನೀಡಿರುವ ವೈದ್ಯಕೀಯ ಉಪಕರಣಗಳನ್ನು ವಾರ್ಡ್‌ಗಳಲ್ಲಿ ಅಳವಡಿಸಿ, ನಗರ ಪ್ರದೇಶದಲ್ಲಿ ಪಾಸಿಟಿವ್ ಬಂದ ವ್ಯಕ್ತಿಯು ವಾಸಿಸುವ 100 ಮೀ. ಪ್ರದೇಶದಲ್ಲಿ ಹಾಗೂ ಗ್ರಾಮೀಣ ಪ್ರದೇಶದ 200 ಮೀ. ವ್ಯಾಪ್ತಿಯಲ್ಲಿ ವ್ಯಾಪಕ ಟೆಸ್ಟಿಂಗ್ ನಡೆಸಿ, ಉದ್ಯೋಗಿಗಳು ಪಾಸಿಟಿವ್ ಬಂದಲ್ಲಿ ಅವರೊಂದಿಗೆ ಕಾರ್ಯ ನಿರ್ವಹಿಸುವ ಎಲ್ಲ ಸಹೋದ್ಯೋಗಿಗಳನ್ನು ಪರೀಕ್ಷೆಗೆ ಒಳಪಡಿಸಿ ಎಂದು ಸೂಚಿಸಿದರು. ಇದನ್ನೂ ಓದಿ :ಲಂಬಾಣಿಗರು ಎಸ್‌ಸಿಗೋ, ಎಸ್‌ಟಿಗೋ ?|ಸಂಸದ ಜಾದವ್ ದ್ವಂದ ನಿಲುವು ಬಯಲಿಗೆಳೆದ ಖರ್ಗೆ ಹೊರರಾಜ್ಯದವರಿಗೆ ಐಸೋಲೇಶನ್
ಜಿಲ್ಲೆಗೆ ಕೇರಳ ಸಮೀಪದಲ್ಲಿದ್ದು, ಅಲ್ಲಿಂದ ವಿವಿಧ ಕಾರಣಗಳಿಗೆ ಸಾರ್ವಜನಿಕರು ಆಗಮಿಸುತ್ತಿರುವ ಕಾರಣ ಜಿಲ್ಲೆಯಲ್ಲಿ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಕಡಿಮೆಯಾಗುತ್ತಿಲ್ಲ. ಜಿಲ್ಲೆಗೆ ವಿದ್ಯಾಭ್ಯಾಸಕ್ಕೆ ಆಗಮಿಸುವ ಹೊರರಾಜ್ಯದ ವಿದ್ಯಾರ್ಥಿಗಳನ್ನು 7 ದಿನಗಳ ಐಸೊಲೇಶನ್‌ಗೆ ಒಳಪಡಿಸಿ 7 ನೇ ದಿನ ಅವರಿಗೆ ಕೋವಿಡ್ ಪರೀಕ್ಷೆ ನಡೆಸಿ ಎಂದರು. ಜಿ.ಪಂ.ಉಪ ಕಾರ್ಯದರ್ಶಿ ಕಿರಣ್ ಪೆಡ್ನೆಕರ್, ಜಿಲ್ಲಾ ಸರ್ಜನ್ ಡಾ| ಮಧುಸೂದನ್ ನಾಯಕ್, ಡಿಎಚ್‌ಒ ಡಾ| ನಾಗಭೂಷಣ ಉಡುಪ, ಕೋವಿಡ್ ನೋಡೆಲ್ ಅಧಿಕಾರಿ ಡಾ| ಪ್ರಶಾಂತ್ ಭಟ್ ಹಾಗೂ ಎಕ್ಸ್‌ಪರ್ಟ್ ಸಮಿತಿಯ ವಿವಿಧ ವೈದ್ಯರು ಹಾಗೂ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.