ಉಡುಪಿ: ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿರುವ ಹಿನ್ನಲೆಯಲ್ಲಿ ಸರ್ಕಾರ ಲಾಕ್ ಡೌನ್ ನಿಯಮಗಳನ್ನು ಸಡಿಲಿಕೆ ಮಾಡಿದೆ. ಆದರೆ ಈ ಮಧ್ಯೆ ಮಾರ್ಗಸೂಚಿ ಉಲ್ಲಂಘನೆ ಮಾಡಿ ಕಾರ್ಯಕ್ರಮ ಆಯೋಜನೆ ಮಾಡುತ್ತಿರುವವರಿಗೆ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ಮಾತನಾಡಿರುವ ಡಿಸಿ ಜಗದೀಶ್, ನಿರ್ಬಂಧ ಸಡಿಲ ಮಾಡಿರುವುದು ಸರ್ಕಾರವೇ ಹೊರತು ಕೋವಿಡ್ ಸೋಂಕಲ್ಲ. ಹಾಗಾಗಿ ಸರ್ಕಾರದ ಆದೇಶ ಹೇಗಿದೆಯೋ ಅದೇ ರೀತಿ ಅನುಸರಿಸಬೇಕು. ಕೆಲವರು ಇದನ್ನು ದುರುಪಯೋಗ ಮಾಡುತ್ತಿದ್ದಾರೆ. ಹೋಟಲ್ ಗಳಲ್ಲಿ ಐದು ಗಂಟೆಯ ನಂತರವೂ ಅವಕಾಶ ನೀಡಲಾಗುತ್ತುದೆ. ಮದುವೆ ಕಾರ್ಯಕ್ರಮಗಳಲ್ಲಿ ಹೆಚ್ಚು ಜನ ಸೇರುತ್ತಿದ್ದಾರೆ. ಇದು ಸರಿಯಲ್ಲ ಎಂದಿದ್ದಾರೆ.
ಇದನ್ನೂ ಓದಿ:ಡೆಲ್ಟಾ ಮತ್ತು ಡೆಲ್ಟಾ ಪ್ಲಸ್: ವ್ಯತ್ಯಾಸವೇನು? ಯಾವುದು ಹೆಚ್ಚು ಅಪಾಯಕಾರಿ?
ಈ ಸಮಯದಲ್ಲಿ ಯಾವುದೇ ಕಾರ್ಯಕ್ರಮ ಆಯೋಜನೆಗೆ ಅವಕಾಶವಿಲ್ಲ. ಆದರೆ ಹಲವು ಕಡೆಗಳಲ್ಲಿ ಕಾರ್ಯಕ್ರಮ ಆಯೋಜನೆ ನಡೆಯುತ್ತಿದೆ. ಸಂಘ ಸಂಸ್ಥೆಗಳಿಗೆ ಕಾರ್ಯಕ್ರಮ ಆಯೋಜನೆಗೆ ಯಾರು ಅವಕಾಶ ಕೊಟ್ಟಿದ್ದಾರೆ? ಕಾನೂನು ಸಣ್ಣವರಿಗೂ ದೊಡ್ಡವರರಿಗೂ ಎಲ್ಲರಿಗೂ ಒಂದೇ. ಎಲ್ಲರೂ ಕಾನೂನು ಪಾಲನೇ ಮಾಡಬೇಕು ಎಂದಿದ್ದಾರೆ.
ಯಾರು ಅನುಮತಿ ಇಲ್ಲದೆ ಕಾರ್ಯಕ್ರಮ ಆಯೋಜನೆ ಮಾಡುತ್ತಾರೋ ಅವರು ಎಷ್ಟು ದೊಡ್ಡವರಾದರೂ ಸಹ ಅವರ ವಿರುದ್ಧ ಕಾನೂನು ಕ್ರಮ ಜರುಗಿಸುತ್ತೇವೆ. ಯಾರೂ ಸಹ ಕಾರ್ಯಕ್ರಮ ಆಯೋಜನೆ ಮಾಡಬಾರದು ಎಂದು ಜಿಲ್ಲಾಧಿಕಾರಿ ಜಗದೀಶ್ ಎಚ್ಚರಿಕೆ ನೀಡಿದ್ದಾರೆ.