Advertisement
ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ವಿಶೇಷ ಲಸಿಕಾ ಅಭಿಯಾನದ ಉದ್ಘಾಟನ ಸಮಾರಂಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. ಅವರು, ಜಿಲ್ಲೆಯಲ್ಲಿ ಕೋವಿಡ್ ಸೋಂಕು ನಿಯಂತ್ರಣ ಕಾರ್ಯಕ್ರಮಗಳಿಗೆ ಶ್ರೀಕೃಷ್ಣ ಮಠ ಜಿಲ್ಲಾಡಳಿತಕ್ಕೆ ನೀಡುತ್ತಿರುವ ಬೆಂಬಲ ಹಾಗೂ ಸಹಕಾರದಿಂದ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಸಹಾಯವಾಗಿದೆ ಎಂದರು.
Related Articles
Advertisement
ಭಗವದ್ಗೀತೆಯಲ್ಲಿ ಶ್ರೀಕೃಷ್ಣನು ಭಗವಂತನ ಸೇವೆಯನ್ನು ಪ್ರತಿಮೆ ಮತ್ತು ಸಮಾಜಸೇವೆಯ ಮೂಲಕ ಮಾಡಬಹುದು ಎಂದು ಹೇಳಿದ್ದಾನೆ. ಸಮಾಜಸೇವೆ ಮೂಲಕ ಭಗವಂತನಿಗೆ ನಾವು ತೆರಿಗೆ ನೀಡಬೇಕು. ಯಾವುದೇ ರೂಪಾಂತರಿ ವೈರಸ್ ಬಂದರೂ ಸಹ ಕೋವಿಡ್ ಸಮುಚಿತ ವರ್ತನೆಗಳನ್ನು ಪಾಲಿಸುವುದರಿಂದ ರೋಗ ಮುಕ್ತರಾಗಬಹುದು. ಕೋವಿಡ್ ಲಸಿಕೆ ಪಡೆಯದವರು ತಪ್ಪದೇ 2 ಡೋಸ್ ಲಸಿಕೆ ಪಡೆಯುವದರ ಮೂಲಕ ಜಿಲ್ಲೆಯನ್ನು ಕೋವಿಡ್ ಮುಕ್ತಗೊಳಿಸಬೇಕು ಎಂದು ಅದಮಾರು ಮಠದ ಶ್ರೀವಿಶ್ವಪ್ರಿಯತೀರ್ಥರು ಆಶೀರ್ವಚನದಲ್ಲಿ ತಿಳಿಸಿದರು.
ಪರ್ಯಾಯ ಶ್ರೀಈಶಪ್ರಿಯ ತೀರ್ಥ ಸ್ವಾಮೀಜಿ ಸಮುಚಿತ ವರ್ತನೆಗಳನ್ನು ಪಾಲಿಸಬೇಕೆಂದರು. ಜಿ.ಪಂ. ಸಿಇಒ ಡಾ| ನವೀನ್ ಭಟ್, ಕೋವಿಡ್ ಲಸಿಕಾ ಅಧಿಕಾರಿ ಡಾ| ಎಂ.ಜಿ.ರಾಮ, ಜಿಲ್ಲಾ ಕಾರ್ಮಿಕ ಅಧಿಕಾರಿ ಕುಮಾರ್, ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ| ವಾಸುದೇವ ಉಪಾಧ್ಯಾಯ, ಉಡುಪಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಹೇಮಂತ್, ಕಿರುತೆರೆ ನಟ ಎಂ.ಎಸ್. ಸೇತುರಾಂ ಮತ್ತಿತರರು ಉಪಸ್ಥಿತರಿದ್ದರು.
ಮಠದ ಮೆನೇಜರ್ ಗೋವಿಂದರಾಜ್ ಸ್ವಾಗತಿಸಿ ಕೃಷ್ಣರಾಜ ಭಟ್ ನಿರೂಪಿಸಿದರು. ಜಿಲ್ಲಾ ಕೋವಿಡ್ ನೋಡಲ್ ಅಧಿಕಾರಿ ಡಾ| ಪ್ರಶಾಂತ ಭಟ್ ಪ್ರಸ್ತಾವನೆಗೈದರು.