ಉಡುಪಿ: ಆಧುನಿಕ ಯುಗದಲ್ಲಿ ಎಲ್ಲ ಕ್ಷೇತ್ರಗಳಲ್ಲಿಯೂ ಮಹಿಳೆಯರ ಪಾತ್ರ ಪ್ರಾಮುಖ್ಯವಾದುದು. ಅವರಿಗೆ ಎಲ್ಲ ಕೆಲಸ ಕಾರ್ಯಗಳಲ್ಲೂ ಸಮಾನತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದರು.
ರಾಜ್ಯ ಮಹಿಳಾ ಆಯೋಗ, ಜಿಲ್ಲಾಡಳಿತ, ಜಿ. ಪಂ., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಪರ್ಯಾಯ ಶ್ರೀಕೃಷ್ಣಾಪುರ ಮಠ ಉಡುಪಿ ಇವರ ಸಹಯೋಗದೊಂದಿಗೆ ಬುಧವಾರ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ಒನ್ ಸ್ಟಾಪ್ ಸೆಂಟರ್ ಮತ್ತು ಸಾಂತ್ವನ ಕೇಂದ್ರಗಳಂತಹ ಸಂಸ್ಥೆಗಳಲ್ಲಿ ಕೆಲಸ ಮಾಡುವವರು ನೊಂದ ಮಹಿಳೆಯರಿಗೆ ಧೈರ್ಯ ತುಂಬುವ ಮೂಲಕ ಅವರ ಸಮಸ್ಯೆಗಳನ್ನು ಬಗೆಹರಿಸಿ ನೆರವು ನೀಡಬೇಕು. ನೊಂದವರಿಗೆ ಸ್ವಯಂ ಉದ್ಯೋಗ ಹೊಂದಲು ವೃತ್ತಿ ತರಬೇತಿ ಮತ್ತು ಬೇರೆ ಬೇರೆ ಅಂಶಗಳ ಬಗ್ಗೆ ಮಾಹಿತಿ ನೀಡಬೇಕು. ಖಾಸಗಿ, ಸರಕಾರಿ ಸಹಿತ ಪ್ರತಿಯೊಂದು ಸಂಸ್ಥೆಗಳಲ್ಲಿಯೂ ಮಹಿಳೆಯರಿಗೋಸ್ಕರ ದೂರು ನೀಡುವ ಅಥವಾ ಆಂತರಿಕ ಸಮಿತಿ ರಚಿಸಿ, ಮಹಿಳೆಯರು ಸಮಸ್ಯೆಗೆ ಒಳಗಾದಾಗ ಅವರಿಗೆ ನೆರವು ನೀಡಬೇಕು ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್. ಮಾತನಾಡಿ, ಮಹಿಳಾ ದಿನಾಚರಣೆಯ ಉದ್ದೇಶ ಮಹಿಳೆಯರನ್ನು ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯವಾಗಿ ಸಬಲರ ನ್ನಾಗಿ ಮಾಡುವುದಾಗಿದೆ. ದೇಶದಲ್ಲಿ ಅಭಿವೃದ್ಧಿ ಮತ್ತು ಬದಲಾವಣೆ ತರುವ ನಿಟ್ಟಿನಲ್ಲಿ ಮಹಿಳೆಯರು ಧೈರ್ಯದಿಂದ ಮುಂದೆ ಬಂದು ತಮಗಾಗುವ ದೌರ್ಜನ್ಯ, ಶೋಷಣೆ ಬಗ್ಗೆ ನೇರವಾಗಿ ಹೇಳಿಕೊಳ್ಳುವ ಮನೋಭಾವನೆ ಬೆಳೆಸಿಕೊಳ್ಳಬೇಕು ಎಂದರು.
ಶಾಸಕ ಕೆ. ರಘುಪತಿ ಭಟ್, ಮಹಿಳಾ ಮಂಡಲಗಳ ಒಕ್ಕೂಟದ ಜಿಲ್ಲಾಧ್ಯಕ್ಷೆ ಸರಳಾ ಕಾಂಚನ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಅನಿತಾ ಮಡೂÉರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಬಿ.ಎಚ್.ಕೃಷ್ಣಪ್ಪ, ಕಾರ್ಯದರ್ಶಿ ವಸಂತಿ ರಾವ್, ಕುಂದಾಪುರ ಮಹಿಳಾ ಮಂಡಲದ ಅಧ್ಯಕ್ಷೆ ರಾಧಾ ದಾಸ್, ಜಿÇÉಾ ಸ್ತ್ರೀಶಕ್ತಿ ಒಕ್ಕೂಟದ ಕಾರ್ಯದರ್ಶಿ ಪ್ರೇಮಾ ಉಪಸ್ಥಿತರಿದ್ದರು.
ಸಮ್ಮಾನ
ಇದೇ ಸಂದರ್ಭ ಕಲೆ, ಕ್ರೀಡೆ, ಸಂಸ್ಕೃತಿ ಸಾಹಿತ್ಯ ಮುಂತಾದ ಕ್ಷೇತ್ರದಲ್ಲಿ ಸಾಧನೆಗೈದ ಮಕ್ಕಳಿಗೆ ಹಾಗೂ ಅನುಭವ, ಪರಿಣತಿ ಹೊಂದಿದ ಅಂಗನವಾಡಿ ಕಾರ್ಯಕರ್ತೆಯರನ್ನು ಸಮ್ಮಾನಿಸಿ, ಗೌರವಿಸಲಾಯಿತು.