Advertisement
ಸರ್ಕಾರದ ಹೊಸ ಮಾರ್ಗಸೂಚಿಯಂತೆ ಉಡುಪಿ ಜಿಲ್ಲೆಯಲ್ಲಿ ದೈನಂದಿನ ಕೋವಿಡ್ ಪರೀಕ್ಷೆ ಗುರಿ 3000 ದಿಂದ 4000 ಹೆಚ್ಚಿಸಿ ನಿಗದಿಪಡಿಸಲಾಗಿದೆ. ರೋಗಲಕ್ಷಣ ಹೊಂದಿರುವವರು ili/sari ಪ್ರಕರಣಗಳು, ಸೋಂಕಿತರ ಪ್ರಾಥಮಿಕ ಮತ್ತು ದ್ವಿತೀಯ ಹಂತದ ಸಂಪರ್ಕ ಹೊಂದಿರುವವರು ಮತ್ತು ಹೈ ರಿಸ್ಕ್ ಹೊಂದಿರುವ ಗುಂಪಿನ ವ್ಯಕ್ತಿಗಳಿಗೆ ಕೋವಿಡ್ ಪರೀಕ್ಷೆ ಮಾಡುವ ಪ್ರಕ್ರಿಯೆಯನ್ನು ಮುಂದುವರಿಸುವುದು ಮತ್ತು ಪರೀಕ್ಷಾ ಪ್ರಮಾಣವನ್ನು ಹೆಚ್ಚಿಸಲಾಗುವುದು ಎಂದರು.
Related Articles
Advertisement
ದಕ್ಷಿಣ ಆಫ್ರಿಕಾ, ಬೋಟ್ಸುವಾನ ಮತ್ತು ಹಾಂಕಾಂಗ್ ದೇಶಗಳಲ್ಲಿ ಕೋವಿಡ್ ನ ರೂಪಾಂತರಿ ಪ್ರಭೇದ ಪತ್ತೆಯಾದ ಹಿನ್ನೆಲೆಯಲ್ಲಿ ವಿದೇಶಿ ಪ್ರಯಾಣಿಕರನ್ನು ತಪಾಸಣೆ ಪರೀಕ್ಷೆಗೊಳಪಡಿಸುವ ನಿಟ್ಟಿನಲ್ಲಿ ಕೆಳಕಂಡ ಕ್ರಮಗಳನ್ನು ಕಟ್ಟುನಿಟ್ಟಾಗಿ ಕೈಗೊಳ್ಳುವಂತೆ ಕರ್ನಾಟಕ ಸರ್ಕಾರ ಸುತ್ತೋಲೆ ಹೊರಡಿಸಿದೆ.
ದಕ್ಷಿಣ ಆಫ್ರಿಕಾ, ಬೋಟ್ಸುವಾನ ಮತ್ತು ಹಾಂಕಾಂಗ್ ನಿಂದ ಬರುವ ಪ್ರಯಾಣಿಕರಿಗೆ ಕಡ್ಡಾಯವಾಗಿ RTPCR ಪರೀಕ್ಷೆ ಮಾಡಬೇಕು ಮತ್ತು ನೆಗೆಟಿವ್ ವರದಿ ಬಂದ ನಂತರವೇ ವಿಮಾನ ನಿಲ್ದಾಣದಿಂದ ನಿರ್ಗಮಿಸಲು ಅನುಮತಿಸಬೇಕು. ಈ ಮೂರು ದೇಶಗಳಿಂದ ಕಳೆದ 15 ದಿನಗಳಿಂದ ಈಚೆಗೆ ಬಂದಿರುವ ಪ್ರಯಾಣಿಕರನ್ನು ಪತ್ತೆ ಹಚ್ಚಿ RTPCR ಪರೀಕ್ಷೆಗೆ ಒಳಪಡಿಸಬೇಕು. ಪ್ರಯಾಣಿಕರು ಕೋವಿಡ್ ಸೋಂಕಿತ ಆಗಿದ್ದಲ್ಲಿ ಅವರನ್ನು 10 ದಿನಗಳ ಕಾಲ ಕಡ್ಡಾಯ ಸಾಂಸ್ಥಿಕ ಪ್ರತ್ಯೇಕತೆಗೆ ಒಳಪಡಿಸಬೇಕು.ಪಾಸಿಟಿವ್ ಬಂದಿರುವ ಪರೀಕ್ಷಾ ಮಾದರಿಗಳನ್ನು ಕಡ್ಡಾಯವಾಗಿ ತಕ್ಷಣ ಜಿನೋಮಿಕ್ ಸಿಕ್ವೆನ್ಸಿಂಗ್ ಪರೀಕ್ಷೆಗೆ ಒಳಪಡಿಸಬೇಕು. ವಿದೇಶದಿಂದ ಬರುವ ಎಲ್ಲಾ ಪ್ರಯಾಣಿಕರು ಪರೀಕ್ಷೆಗೆ ಒಳಪಡಬೇಕು.
ಜಿಲ್ಲೆಯಲ್ಲಿ ಈ ಮೇಲ್ಕಂಡ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಪ್ರಥಮ ಆದ್ಯತೆ ಎಂದು ಪರಿಗಣಿಸಿ , ಆರೋಗ್ಯ ಇಲಾಖೆ ಮತ್ತು ಇತರ ಪ್ರಮುಖ ಇಲಾಖೆಗಳ ಸಹಕಾರ ಮತ್ತು ಸಮನ್ವಯದೊಂದಿಗೆ ಹಾಗೂ ಜಿಲ್ಲಾಡಳಿತದ ಸೂಕ್ತ ಮಾರ್ಗದರ್ಶನ ಮತ್ತು ನಿಗಾವಣೆಯಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದ್ದಾರೆ.