Advertisement
ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಲ್ಪೆ ಅಭಿವೃದ್ಧಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬೀಚ್‌ನಲ್ಲಿ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಅಂಗಡಿಗಳ ಕುರಿತು, ಆಹಾರ ಸುರಕ್ಷಾ ಅಧಿಕಾರಿಗಳು, ನಗರಸಭೆ ಮತ್ತು ಪೊಲೀಸ್ ಇಲಾಖೆ ಜಂಟಿ ತಪಾಸಣೆ ನಡೆಸಿ ವರದಿ ನೀಡಬೇಕು. ರಜತ ಮಹೋತ್ಸವ ಅಂಗವಾಗಿ 2023ರ ಜ. 21ರಿಂದ 23ರ ವರೆಗೆ ಬೀಚ್ ಉತ್ಸವ ಆಯೋಜಿಸುವ ಕುರಿತಂತೆ ಹಾಗೂ ಮಲ್ಪೆ ಹಾಗೂ ಪಡುಕೆರೆಯಲ್ಲಿರುವ ಬಂದರು ಇಲಾಖೆ ಜಾಗವನ್ನು ಉಪಯೋಗಿಸಿಕೊಂಡು ಆ ಪ್ರದೇಶ ದಲ್ಲಿ ಹೆಚ್ಚಿನ ಪ್ರವಾಸೋದ್ಯಮ ಚಟುವಟಿಕೆಗಳನ್ನು ಕೈಗೊಳ್ಳುವ ಬಗ್ಗೆ ಚರ್ಚೆ ನಡೆಯಿತು.
Related Articles
Advertisement
ಪಡುಕೆರೆ ಬೀಚ್‌ಗೆ ಪ್ರತ್ಯೇಕ ಸಮಿತಿ ಮಲ್ಪೆ ಅಭಿವೃದ್ಧಿ ಸಮಿತಿ ಮಾದರಿಯಲ್ಲಿ ಪಡುಕೆರೆ ಬೀಚ್ ಅಭಿವೃದ್ಧಿಗೂ ಸಹ ಪ್ರತ್ಯೇಕ ಸಮಿತಿ ರಚಿಸಿ, ಪಡುಕೆರೆಯಲ್ಲಿ ಹೆಚ್ಚಿನ ಪ್ರವಾಸೋದ್ಯಮ ಚಟುವಟಿಕೆಗಳನ್ನು ಅಭಿವೃದ್ಧಿಪಡಿಸುವಂತೆ ಸೂಚಿಸಿದ ಶಾಸಕ ರಘುಪತಿ ಭಟ್, ಮಲ್ಪೆ ಬೀಚ್‌ನ ಉತ್ತರಭಾಗದಲ್ಲಿ ಪ್ರವಾಸೋದ್ಯ ಮವನ್ನು ಅಭಿವೃದ್ಧಿಪಡಿಸಲು ಸಾಕಷ್ಟು ಅವಕಾಶಗಳಿದ್ದು, ಈ ಬಗ್ಗೆ ಮಾಸ್ಟರ್ ಪ್ಲಾನ್ ತಯಾರಿಸುವಂತೆ ಸೂಚಿಸಿದರು. ಪ್ರವಾಸಿಗರ ಸ್ನೇಹಿಯಾಗಿ ವರ್ತಿಸಿ
ಬೀಚ್ ನಿರ್ವಹಣ ಸಂಸ್ಥೆಯ ಸಿಬಂದಿಗೆ ಪ್ರವಾಸಿಗರ ಸ್ನೇಹಿಯಾಗಿ ವರ್ತಿಸುವ ಬಗ್ಗೆ ಮತ್ತು ಸುರಕ್ಷಾ ಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನ ಮತ್ತು ನಿರಂತರವಾಗಿ ಪಾಲನೆ ಮಾಡಲು ತರಬೇತಿ ಕಾರ್ಯಾಗಾರ ಆಯೋಜಿಸಬೇಕು ಎಂದು ಡಿಸಿ ಹೇಳಿದರು. ಬೋಟುಗಳಲ್ಲಿ ಲೈಫ್ ಜಾಕೆಟ್ ಇಲ್ಲದೆ ಪ್ರಯಾಣಿಕರನ್ನು ಕರೆದುಕೊಂಡು ಹೋದಲ್ಲಿ ಸಂಬಂಧಪಟ್ಟ ಬೋಟುಗಳಿಗೆ ದಂಡ ವಿಧಿಸಲಾಗುವುದು ಮತ್ತು ಲೈಸನ್ಸ್ ರದ್ದುಪಡಿಸಲಾಗುವುದು ಎಂದ ಅವರು ಈ ಬಗ್ಗೆ ಕರಾವಳಿ ಕಾವಲು ಪಡೆ ವತಿಯಿಂದ ಪರಿಶೀಲನೆ ನಡೆಸುವಂತೆ ಸೂಚನೆ ನೀಡಿದರು. ಇದನ್ನೂ ಓದಿ : ವಿಡಿಯೋ: ಚಾಲಕನ ಅಶ್ಲೀಲ ಪ್ರಶ್ನೆಗೆ ಹೆದರಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಬಾಲಕಿ ಗಂಭೀರ