ಉಡುಪಿ: ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವ ಜತೆಗೆ ಸ್ಥಳೀಯವಾಗಿ ಕೈಗೊಳ್ಳಬೇಕಾದ ಕಾರ್ಯಗಳ ಬಗ್ಗೆಯೂ ಜಿಲ್ಲಾ ವಿಪತ್ತು ನಿರ್ವಹಣ ಪ್ರಾಧಿಕಾರದ ಸಭೆ ನಡೆಸಿ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದ್ದಾರೆ.
ಜಿಲ್ಲೆಯ ಕೆಲವೆಡೆ ನೀರಿನ ಸಮಸ್ಯೆ ಇರುವುದು ಗಮನಕ್ಕೆ ಬಂದಿದ್ದು,ತಹಶೀಲ್ದಾರ್ ನೇತೃತ್ವದ ಕಾರ್ಯಪಡೆಗೆ ಅಗತ್ಯ ಸೂಚನೆ ನೀಡಲಾಗಿದೆ. ಉಡುಪಿ ನಗರಸಭೆ ವ್ಯಾಪ್ತಿ ಸಹಿತ ಕೆಲವು ನಗರ ಭಾಗದಲ್ಲಿ ಸಮಸ್ಯೆ ಹೆಚ್ಚಿದೆ. ಹೀಗಾಗಿ ಸ್ಥಳೀಯಾ ಡಳಿತಗಳು ವಿಶೇಷ ಕ್ರಮವಹಿಸಿ, ಜಲಮೂ ಲಗಳ ಸಂರಕ್ಷಣೆಗೂ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಜಿ.ಪಂ. ಸಿಇಒ ಪ್ರಸನ್ನ ಎಚ್. ಮಾತನಾಡಿ, ಕೋಟೆ ಗ್ರಾ.ಪಂ. ವ್ಯಾಪ್ತಿಯ 100 ಮನೆಗಳಿಗೆ ನೀರು ಕೊರತೆ ಇದೆ. ಮುದ್ರಾಡಿ ಹಾಗೂ ಕೆಲವು ಗ್ರಾ.ಪಂ.ಗಳಲ್ಲೂ ಸಮಸ್ಯೆ ಇರುವುದು ತಿಳಿದಿದೆ. ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ. ಬಾವಿ, ಕೊಳವೆ ಬಾವಿ, ಕೆರೆಕಟ್ಟೆಗಳ ಪುನಶ್ಚೇತನವೇ ಮೊದಲ ಆದ್ಯತೆ. ನೀರು ಪೂರೈಕೆಗೆ ಹಣಕಾಸಿನ ಕೊರತೆಯಿಲ್ಲ ಎಂದರು.